ಬಿಹಾರ: ಆರ್​ಜೆಡಿ ಮುಖಂಡನ ಮೇಲೆ ಗುಂಡಿನ ದಾಳಿ, ಸ್ಥಿತಿ ಗಂಭೀರ

|

Updated on: Oct 03, 2024 | 8:25 AM

ಬೆಳಗ್ಗೆ ವಾಕಿಂಗ್​ಗೆಂದು ಹೋಗಿದ್ದ ರಾಷ್ಟ್ರೀಯ ಜನತಾ ಪಕ್ಷದ ಮುಖಂಡ ಪಂಕಜ್ ಯಾದವ್ ಮೇಲೆ ಕ್ರಿಮಿನಲ್​ಗಳು ಗುಂಡಿನ ದಾಳಿ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬಿಹಾರದಲ್ಲಿ ಘಟನೆ ನಡೆದಿದ್ದು ಆರೋಪಿಗಳು ಪಂಕಜ್ ಅವರ ಎದೆ ಮೇಲೆ ಹಲವು ಸುತ್ತಿನ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಬಿಹಾರ: ಆರ್​ಜೆಡಿ ಮುಖಂಡನ ಮೇಲೆ ಗುಂಡಿನ ದಾಳಿ, ಸ್ಥಿತಿ ಗಂಭೀರ
ಪಂಕಜ್ ಯಾದವ್
Image Credit source: Aaj Tak
Follow us on

ಬೆಳಗ್ಗೆ ವಾಕಿಂಗ್​ಗೆಂದು ಹೋಗಿದ್ದ ರಾಷ್ಟ್ರೀಯ ಜನತಾ ಪಕ್ಷದ ಮುಖಂಡ ಪಂಕಜ್ ಯಾದವ್ ಮೇಲೆ ಕ್ರಿಮಿನಲ್​ಗಳು ಗುಂಡಿನ ದಾಳಿ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬಿಹಾರದಲ್ಲಿ ಘಟನೆ ನಡೆದಿದ್ದು ಆರೋಪಿಗಳು ಪಂಕಜ್ ಅವರ ಎದೆ ಮೇಲೆ ಹಲವು ಸುತ್ತಿನ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಆರ್‌ಜೆಡಿ ಮುಖಂಡ ಬೆಳಗಿನ ವಾಕಿಂಗ್‌ಗೆ ತೆರಳಿದ್ದ ವೇಳೆ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಖಾಸಗಿ ನರ್ಸಿಂಗ್ ಹೋಂಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಆರ್‌ಜೆಡಿ ನಾಯಕನ ಮೇಲೆ ಗುಂಡು ಹಾರಿಸಿದವರು ಯಾರು ಮತ್ತು ಏಕೆ ಎಂಬುದು ಇನ್ನೂ ಬಹಿರಂಗವಾಗಿಲ್ಲ.

ಪ್ರಾಣ ಉಳಿಸಿಕೊಳ್ಳಲು ಯತ್ನಿಸುತ್ತಿದ್ದಾಗ ಗುಂಡು ತಗುಲಿದೆ. ಘಟನೆ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮಾಹಿತಿ ತಿಳಿದ ತಕ್ಷಣ ಸಫಿಯಾ ಸರಾಯ್, ಖಾಸಿಂ ಬಜಾರ್ ಮತ್ತು ಕೊತ್ವಾಲಿ ಪೊಲೀಸರು ಆಗಮಿಸಿದರು. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಓದಿ: ಅಮೆರಿಕ: ಕಮಲಾ ಹ್ಯಾರಿಸ್ ಕಚೇರಿ ಮೇಲೆ ಗುಂಡಿನ ದಾಳಿ

ಅಕ್ಟೋಬರ್ 1 ರಂದು ಪಾಟ್ನಾದಲ್ಲಿ ಹಗಲು ಹೊತ್ತಿನಲ್ಲಿ ದುಷ್ಕರ್ಮಿಗಳು ಪ್ರಾಪರ್ಟಿ ಡೀಲರ್ ಒಬ್ಬರನ್ನು ಗುಂಡಿಕ್ಕಿ ಕೊಂದಿದ್ದರು. ಮೃತರ ಅಣ್ಣ ತಮ್ಮ ಸಹೋದರ ಜಮೀನು ಖರೀದಿಸಿ ಮಾರಾಟ ಮಾಡುತ್ತಿದ್ದ ಎಂದು ತಿಳಿಸಿದ್ದಾರೆ. ಪ್ಲಾಟ್‌ಗೆ ಸಂಬಂಧಿಸಿದಂತೆ ಬಹಳ ದಿನಗಳಿಂದ ಜಗಳ ನಡೆಯುತ್ತಿತ್ತು.

ಈ ಬಗ್ಗೆ ಪಂಚಾಯತಿ ಕೂಡ ನಡೆದಿದ್ದು, ಇದೀಗ ನನ್ನ ಸಹೋದರನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:19 am, Thu, 3 October 24