AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಅಮ್ಮ ಹೋದ್ರೇನಾಯ್ತು, ಇನ್ನೊಬ್ಳು ಅಮ್ಮ ಬರ್ತಾಳೆ, ಮಕ್ಕಳ ಎದುರೇ ಪತ್ನಿಯ ಕೊಂದ ವ್ಯಕ್ತಿ

ಬಿಹಾರದ ಜಮಾಲ್ಪುರದಲ್ಲಿ ನಿವೃತ್ತ ರೈಲ್ವೆ ಲೋಕೋ ಪೈಲಟ್ ತನ್ನ ಪತ್ನಿ ಪೂಜಾ ದೇವಿಯನ್ನು ಇಬ್ಬರು ಹೆಣ್ಣುಮಕ್ಕಳ ಎದುರೇ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಪತ್ನಿಯ ನಡತೆ ಬಗ್ಗೆ ಅನುಮಾನ, ವರದಕ್ಷಿಣೆ ಕಿರುಕುಳ ಮತ್ತು ದಂಪತಿ ನಡುವಿನ ವಯಸ್ಸಿನ ಅಂತರವೇ ಈ ಕೃತ್ಯಕ್ಕೆ ಕಾರಣ ಎನ್ನಲಾಗಿದೆ. ಹತ್ಯೆ ಬಳಿಕ ಮಕ್ಕಳಿಗೆ ಹೊಸ ಅಮ್ಮ ತರುವುದಾಗಿ ಹೇಳಿ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಈ ಅಮ್ಮ ಹೋದ್ರೇನಾಯ್ತು, ಇನ್ನೊಬ್ಳು ಅಮ್ಮ ಬರ್ತಾಳೆ, ಮಕ್ಕಳ ಎದುರೇ ಪತ್ನಿಯ ಕೊಂದ ವ್ಯಕ್ತಿ
ಕ್ರೈಂ
ನಯನಾ ರಾಜೀವ್
|

Updated on: Nov 13, 2026 | 11:32 AM

Share

ಬಿಹಾರ, ನವೆಂಬರ್ 13: ಇಬ್ಬರು ಹೆಣ್ಣುಮಕ್ಕಳ ಎದುರೇ ಪತ್ನಿಯನ್ನು ವ್ಯಕ್ತಿಯೊಬ್ಬ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಿಹಾರದ ಜಮಲ್​ಪುರದಲ್ಲಿ ನಡೆದಿದೆ. ಪತ್ನಿಯ ಮೇಲೆ ಅನುಮಾನ ವ್ಯಕ್ತಪಡಿಸಿದ್ದ ನಿವೃತ್ತ ರೈಲ್ವೆ ಲೋಕೋ ಪೈಲಟ್ ತಮ್ಮ ಪತ್ನಿಯನ್ನು ಹತ್ಯೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಬಿಹಾರದ ಮುಂಗೇರ್ ಜಿಲ್ಲೆಯ ಜಮಾಲ್ಪುರ್ ಪಟ್ಟಣದಲ್ಲಿ ಈ ಘಟನೆ ನಡೆದಿದೆ.

ಪೂಜಾ ದೇವಿ ಮೃತಪಟ್ಟ ಮಹಿಳೆ, ಆರೋಪಿ ತನ್ನ ಇಬ್ಬರು ಹೆಣ್ಣುಮಕ್ಕಳ ಎದುರಲ್ಲೇ ತಾಯಿಯನ್ನು ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ಮಕ್ಕಳನ್ನು ಕರೆದುಕೊಂಡು ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.

ಮಕ್ಕಳಿಗೆ ಆಘಾತಕಾರಿ ಮಾತು ಹೇಳಿದ ತಂದೆ ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಬುಧವಾರ ತಡರಾತ್ರಿ ಆರೋಪಿ ಮೊದಲು ತನ್ನ ಇಬ್ಬರು ಹೆಣ್ಣುಮಕ್ಕಳಾದ ಎಂಟು ಮತ್ತು ಐದು ವರ್ಷದ ಬಾಲಕಿಯರನ್ನು ಪ್ರತ್ಯೇಕ ಕೋಣೆಯಲ್ಲಿ ಇರಿಸಿದ್ದಾನೆ. ನಂತರ ಪತ್ನಿಯ ಮೇಲೆ ಹಲ್ಲೆ ನಡೆಸಿ ಕತ್ತು ಸೀಳಿ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಘಟನೆಯ ಬಳಿಕ ಮಕ್ಕಳಿಗೆ, “ನಿಮ್ಮ ತಾಯಿ ತೀರಿಕೊಂಡಿದ್ದಾರೆ, ನಿಮಗೆ ಹೊಸ ಅಮ್ಮನನ್ನು ಕರೆದುಕೊಂಡು ಬರುತ್ತೇನೆ” ಎಂದು ಹೇಳಿದ್ದಾನೆ ಎಂದು ಆರೋಪಿಸಲಾಗಿದೆ. ನಂತರ ಪತ್ನಿಯ ಮೃತದೇಹವಿದ್ದ ಕೋಣೆಗೆ ಬೀಗ ಹಾಕಿ, ಮಕ್ಕಳನ್ನು ಕರೆದುಕೊಂಡು ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.

ಪತ್ನಿ ಪೂಜಾ ದೇವಿ ಬೇರೊಬ್ಬರೊಂದಿಗೆ ಸಂಬಂಧ ಹೊಂದಿದ್ದಾರೆ ಎಂಬ ಅನುಮಾನದಿಂದ ಆರೋಪಿ ಈ ಕೃತ್ಯ ಎಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆದರೆ ಇದು ಪ್ರಾಥಮಿಕ ತನಿಖೆಯಲ್ಲಿರುವ ಶಂಕೆ ಮಾತ್ರ. ಘಟನೆಯ ಹಿಂದಿನ ನಿಖರ ಕಾರಣ ಇನ್ನೂ ದೃಢಪಟ್ಟಿಲ್ಲ.

ಇದನ್ನೂ ಓದಿ:7 ಜನರ ಹತ್ಯೆ ಪ್ರಕರಣ: ಕೃತ್ಯ ನಡೆಸಲು ಅಗತ್ಯ ವಸ್ತುಗಳನ್ನು ಏರಿಯಾದ ಸುತ್ತಮುತ್ತಲೇ ಖರೀದಿಸಿದ್ದ ಆರೋಪಿ

ಇನ್ನೊಂದೆಡೆ, ಪೂಜಾ ಅವರ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಹಲವು ವರ್ಷಗಳಿಂದ ಆಕೆಗೆ ಪತಿ ಮತ್ತು ಅವರ ಸಂಬಂಧಿಕರು ಕಿರುಕುಳ ನೀಡುತ್ತಿದ್ದರು. ವರದಕ್ಷಿಣೆ ವಿಚಾರವಾಗಿಯೂ ಹಿಂಸೆ ನೀಡಲಾಗುತ್ತಿತ್ತು ಎಂದು ಪೂಜಾ ಅವರ ಸಹೋದರ ಶುಭಂ ಆರೋಪಿಸಿದ್ದಾರೆ.

2015ರಲ್ಲಿ ನಡೆದಿತ್ತು ಮದುವೆ ಭಾಗಲ್ಪುರದ ಇಶಾಕ್‌ಚಕ್ ನಿವಾಸಿಯಾಗಿದ್ದ ಪೂಜಾ 2015ರಲ್ಲಿ ಆರೋಪಿಯನ್ನು ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಕುಟುಂಬವು ಮುಂಗೇರ್ ಜಿಲ್ಲೆಯ ಜಮಾಲ್ಪುರ್ ಪಟ್ಟಣದ ಸದರ್ ಬಜಾರ್ ಸಮೀಪದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿತ್ತು. ಪೂಜಾ ಅವರ ಕುಟುಂಬದ ಪ್ರಕಾರ, ದಂಪತಿ ನಡುವೆ ವಯಸ್ಸಿನ ಅಂತರವಿತ್ತು. ಇದೇ ವಿಚಾರವಾಗಿ ಆರೋಪಿ ಆಗಾಗ್ಗೆ ಪತ್ನಿಯ ನಡವಳಿಕೆಯನ್ನು ಪ್ರಶ್ನಿಸುತ್ತಿದ್ದ ಎನ್ನಲಾಗಿದೆ.

ಎರಡು ದಿನಗಳ ಹಿಂದಷ್ಟೇ ಪೂಜಾ ಜೊತೆ ಮಾತನಾಡಿದ್ದೆವು. ಆದರೆ ಯಾವುದೇ ಗಂಭೀರ ಸಮಸ್ಯೆ ಇರುವ ಬಗ್ಗೆ ಆಕೆ ಹೇಳಿರಲಿಲ್ಲ ಎಂದು ಸಹೋದರ ಶುಭಂ ತಿಳಿಸಿದ್ದಾರೆ.

ಪೊಲೀಸರ ತನಿಖೆ ಮುಂದುವರಿಕೆ ಘಟನೆಯ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ವಶಕ್ಕೆ ಪಡೆದಿದ್ದಾರೆ. ಕೃತ್ಯಕ್ಕೆ ಬಳಸಿರಬಹುದು ಎನ್ನಲಾದ ಆಯುಧವನ್ನೂ ವಶಪಡಿಸಿಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು, ಕುಟುಂಬಸ್ಥರ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸುವ ಪ್ರಕ್ರಿಯೆ ನಡೆಸುತ್ತಿದ್ದಾರೆ. ವರದಕ್ಷಿಣೆ ಕಿರುಕುಳ, ಕೌಟುಂಬಿಕ ಹಿಂಸೆ ಮತ್ತು ವೈಯಕ್ತಿಕ ಅನುಮಾನ ಸೇರಿದಂತೆ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯುತ್ತಿದೆ ಎಂದು ಜಮಾಲ್ಪುರ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಪ್ರಶಾಂತಿ ಕುಟೀರ ಸುವರ್ಣ ಮಹೋತ್ಸವದಲ್ಲಿ ಮೋದಿ ಭಾಗಿ ನೇರಪ್ರಸಾರ
ಪ್ರಶಾಂತಿ ಕುಟೀರ ಸುವರ್ಣ ಮಹೋತ್ಸವದಲ್ಲಿ ಮೋದಿ ಭಾಗಿ ನೇರಪ್ರಸಾರ
ಮೋದಿ ಸಂಚರಿಸುವಲ್ಲೆಲ್ಲ ಕೈ-ಕಮಲ ಕಾರ್ಯಕರ್ತರ ಫ್ಲೆಕ್ಸ್​ಗಳು ಝಗಮಗ!
ಮೋದಿ ಸಂಚರಿಸುವಲ್ಲೆಲ್ಲ ಕೈ-ಕಮಲ ಕಾರ್ಯಕರ್ತರ ಫ್ಲೆಕ್ಸ್​ಗಳು ಝಗಮಗ!
ಲಾಭ ಪಡೆಯಲು ಕಳ್ಳಾಟ ಆಡಿದ್ರಾ ಆಸಿಯಾ? ಸೌಂದರ್ಯಾ ಛೀಮಾರಿ
ಲಾಭ ಪಡೆಯಲು ಕಳ್ಳಾಟ ಆಡಿದ್ರಾ ಆಸಿಯಾ? ಸೌಂದರ್ಯಾ ಛೀಮಾರಿ
ಇಂದು ಈ ರಾಶಿಯವರು ಅತಿಯಾಗಿ ನಂಬಿದವರಿಂದ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಅತಿಯಾಗಿ ನಂಬಿದವರಿಂದ ಮೋಸ ಹೋಗುವ ಸಾಧ್ಯತೆ
ಡಾ.ರಮ್ಯಾ ಬರೆದಿರುವ ‘ಚಲಿಸುವ ಬಂಡೆ’ ಪುಸ್ತಕದಲ್ಲಿ ಯಾವೆಲ್ಲಾ ವಿಚಾರಗಳಿವೆ?
ಡಾ.ರಮ್ಯಾ ಬರೆದಿರುವ ‘ಚಲಿಸುವ ಬಂಡೆ’ ಪುಸ್ತಕದಲ್ಲಿ ಯಾವೆಲ್ಲಾ ವಿಚಾರಗಳಿವೆ?
ಲೀಲಾವತಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಬಗ್ಗೆ ವಿನೋದ್ ರಾಜ್ ಬೇಸರ
ಲೀಲಾವತಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಬಗ್ಗೆ ವಿನೋದ್ ರಾಜ್ ಬೇಸರ
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?
ಶಿವರಾಜ್ ಕೆಆರ್ ಪೇಟೆ ಹೊಸ ಸಿನಿಮಾ ‘ಹವಾಮಾನ ವರದಿ’ ಶುರುವಾಗಿದ್ದು ಹೀಗೆ..
ಶಿವರಾಜ್ ಕೆಆರ್ ಪೇಟೆ ಹೊಸ ಸಿನಿಮಾ ‘ಹವಾಮಾನ ವರದಿ’ ಶುರುವಾಗಿದ್ದು ಹೀಗೆ..
ಬೆಂಗಳೂರಿನ ಮನಮೋಹಕ ತಾಣ ನಲ್ಲಿಗುಡ್ಡೆ ಅಭಿವೃದ್ಧಿಗೆ ಸರ್ಕಾರದ ಒತ್ತು
ಬೆಂಗಳೂರಿನ ಮನಮೋಹಕ ತಾಣ ನಲ್ಲಿಗುಡ್ಡೆ ಅಭಿವೃದ್ಧಿಗೆ ಸರ್ಕಾರದ ಒತ್ತು
‘ಹವಾಮಾನ ವರದಿ’ ಸಿನಿಮಾ ಬಗ್ಗೆ ನಾಯಕಿ ನಿರೀಕ್ಷಾ ರಾವ್ ಮಾತು: ವಿಡಿಯೋ
‘ಹವಾಮಾನ ವರದಿ’ ಸಿನಿಮಾ ಬಗ್ಗೆ ನಾಯಕಿ ನಿರೀಕ್ಷಾ ರಾವ್ ಮಾತು: ವಿಡಿಯೋ