ಬಿಹಾರದಲ್ಲಿ ಒಂದೇ ತಿಂಗಳಲ್ಲಿ ಇಬ್ಬರು ಪತ್ರಕರ್ತರ ಹತ್ಯೆ; ಮರಕ್ಕೆ ನೇಣು ಬಿಗಿದ ಶವ ಪತ್ತೆ

|

Updated on: Jul 30, 2024 | 9:55 PM

ಬಿಹಾರದ ಮುಜಾಫರ್‌ಪುರ ಜಿಲ್ಲೆಯ ತುರ್ಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗೌರವ್ ಕುಶ್ವಾಹ ಎಂಬ ಪತ್ರಕರ್ತನನ್ನು ಅಪರಿಚಿತ ವ್ಯಕ್ತಿಗಳು ಹತ್ಯೆ ಮಾಡಿದ್ದಾರೆ. ಗೌರವ್ ಕುಶ್ವಾಹ ಅವರ ಮೃತದೇಹ ಮಾವಿನ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗ್ರಾಮದ ಜನರು ಕೊಲೆ ಎಂದು ಮೃತನ ತಾಯಿ ಆರೋಪಿಸಿದ್ದಾರೆ. ಈ ಘಟನೆ ಬಳಿಕ ಶ್ವಾನದಳ ಹಾಗೂ ಎಫ್‌ಎಸ್‌ಎಲ್‌ ತಂಡ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದೆ.

ಬಿಹಾರದಲ್ಲಿ ಒಂದೇ ತಿಂಗಳಲ್ಲಿ ಇಬ್ಬರು ಪತ್ರಕರ್ತರ ಹತ್ಯೆ; ಮರಕ್ಕೆ ನೇಣು ಬಿಗಿದ ಶವ ಪತ್ತೆ
ಗೌರವ್ ಕುಶ್ವಾಹ
Follow us on

ಮುಜಾಫರ್‌ಪುರ: ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ಪತ್ರಕರ್ತರೊಬ್ಬರು ಇಂದು ಅಪರಿಚಿತ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದಾರೆ. ಈ ಘಟನೆಯ ನಂತರ ಅವರ ನಿವಾಸದ ಬಳಿಯ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ರಕರ್ತನ ಶವ ಪತ್ತೆಯಾಗಿದ್ದು, ಕಳೆದ ಒಂದು ತಿಂಗಳಲ್ಲಿ ಬಿಹಾರ ರಾಜ್ಯದಲ್ಲಿ ನಡೆದ ಎರಡನೇ ಹತ್ಯೆ ಇದಾಗಿದೆ.

ಮೃತ ಪತ್ರಕರ್ತನ ಕುಟುಂಬಸ್ಥರು ಇದೊಂದು ಕೊಲೆ ಎಂದು ಆರೋಪಿಸಿದ್ದಾರೆ. ತಮಗೆ ತಮ್ಮ ಗ್ರಾಮದ ಕೆಲವರು ಬೆದರಿಕೆ ಹಾಕಿದ್ದಾರೆ ಮತ್ತು ನಿನ್ನೆ ರಾತ್ರಿ ಫೋನ್ ಕರೆಯನ್ನು ಮಾಡಿದ್ದರು. ಫೋನ್ ಮಾಡಿ ಗೌರವ್​​ನನ್ನು ಮನೆಯಿಂದ ಹೊರಗೆ ಬರಲು ಸೂಚಿಸಿದ್ದರು. ಆದರೆ, ಆಚೆ ಹೋದವನು ಮತ್ತೆ ಬರಲೇ ಇಲ್ಲ ಎಂದು ಕುಟುಂಬಸ್ಥರು ಹೇಳಿದ್ದಾರೆ.

ಇದನ್ನೂ ಓದಿ: ಹಾಸನ: ಶಿರಾಡಿ ಘಾಟ್​​​ನಲ್ಲಿ ಭಾರೀ ಭೂಕುಸಿತ, ಮಣ್ಣಿನಡಿ‌ ಸಿಲುಕಿದ ಹಲವು ವಾಹನಗಳು

ಗೌರವ್ ಕುಶ್ವಾಹ ಒಬ್ಬ ಪತ್ರಕರ್ತನಾಗಿದ್ದು, ಯೂಟ್ಯೂಬ್‌ನಲ್ಲಿ ತನ್ನ ವರದಿಯ ವೀಡಿಯೊಗಳನ್ನು ಪೋಸ್ಟ್ ಮಾಡುತ್ತಿದ್ದರು. ಚಜನ್ ಖರಿರಾರ್ ಗ್ರಾಮದಲ್ಲಿ ಬೆಳಗ್ಗೆ ಮಾವಿನ ಮರವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಈ ಕುರಿತು ತನಿಖೆಯನ್ನು ಪ್ರಾರಂಭಿಸಲಾಗಿದೆ ಮತ್ತು ಫೋರೆನ್ಸಿಕ್ ಸಿಬ್ಬಂದಿ ಅಪರಾಧ ಸ್ಥಳದಿಂದ ಮಾದರಿಗಳನ್ನು ಸಂಗ್ರಹಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಜಾಫರ್‌ಪುರವು ಹಲವಾರು ಕೊಲೆ, ದರೋಡೆ ಮತ್ತು ಕಳ್ಳತನದ ಪ್ರಕರಣಗಳಿಗೆ ಸಾಕ್ಷಿಯಾಗಿದೆ. ಇದರಿಂದ ಇಲ್ಲಿನ ನಿವಾಸಿಗಳು ಭಯಭೀತರಾಗಿದ್ದಾರೆ. ಈ ಬಗ್ಗೆ ವರದಿ ಮಾಡುವ ಪರ್ತರ್ತರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಜೂನ್ 25ರಂದು ಶಿವಶಂಕರ್ ಝಾ ಎಂಬ ಇನ್ನೊಬ್ಬ ಪತ್ರಕರ್ತನನ್ನು ಆತನ ಮನೆಯ ಸಮೀಪವೇ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿ ಜೈಲಿಗೆ ಹಾಕಲಾಗಿತ್ತು.

ಇದನ್ನೂ ಓದಿ: Video Viral: ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋ ಮಾಡಿ,ರೈಲಿಗೆ ತಲೆ ಕೊಟ್ಟ ಪತ್ರಕರ್ತೆ

ಗೌರವ್ ಅವರನ್ನು ಕೆಲವು ಸ್ಥಳೀಯರು ಕೊಂದು ಮರಕ್ಕೆ ನೇಣು ಹಾಕಿ ಆತ್ಮಹತ್ಯೆ ಎಂದು ನಂಬಿಸಲು ಪ್ರಯತ್ನಿಸಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಕಳೆದ ರಾತ್ರಿ 11 ಗಂಟೆಯ ಸುಮಾರಿಗೆ ವ್ಯಕ್ತಿಗೆ ಅಪರಿಚಿತ ಸಂಖ್ಯೆಯಿಂದ ಗೌರವ್​ಗೆ ಫೋನ್ ಕರೆ ಬಂದಿತು. ನಂತರ ಅವನು ಸ್ವಲ್ಪ ಸಮಯದ ನಂತರ ಹಿಂತಿರುಗುತ್ತೇನೆ ಎಂದು ಮನೆಯಿಂದ ಹೊರಟುಹೋದನು. ಆದರೆ ಆತ ಮನೆಗೆ ಬರಲಿಲ್ಲ ಎಂದು ಅವರ ತಾಯಿ ಇಂದ್ರಾ ದೇವಿ ಪೊಲೀಸರಿಗೆ ತಿಳಿಸಿದರು.

ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿದ್ದ ಗೌರವ್ ಶವವನ್ನು ಕಂಡು ಗ್ರಾಮಸ್ಥರು ಬೆಳಗ್ಗೆ ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮೃತದೇಹವನ್ನು ವಶಪಡಿಸಿಕೊಂಡಿದ್ದು, ಅದರಲ್ಲಿದ್ದ ಮೊಬೈಲ್ ಫೋನ್, ಟವೆಲ್ ಮತ್ತು ಒಂದು ಜೊತೆ ಚಪ್ಪಲಿಯನ್ನು ಪಡೆದು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ