AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ದೇಹವನ್ನು ಕಾಲುವೆಗೆ ಎಸೆದಿದ್ದ ಮೂವರು ಪೊಲೀಸರ ಅಮಾನತು

ಮಾನವೀಯತೆ ತೋರಬೇಕಾದ ಪೊಲೀಸರೇ ಹೀಗೆ ಅಮಾನವೀಯವಾಗಿ ನಡೆದುಕೊಂಡರೆ ಹೇಗೆ, ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು, ಅಂತಿಮವಾಗಿ ಅವರ ಕುಟುಂಬದವರಿಗೆ ವ್ಯಕ್ತಿಯ ಮುಖವನ್ನು ನೋಡಲು ಅವಕಾಶಮಾಡಿಕೊಡದೆ ಪೊಲೀಸರು ಮೃತದೇಹವನ್ನು ಕಾಲುವೆಗೆ ಎಸೆದಿದ್ದರು.

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ದೇಹವನ್ನು ಕಾಲುವೆಗೆ ಎಸೆದಿದ್ದ ಮೂವರು ಪೊಲೀಸರ ಅಮಾನತು
ಪೊಲೀಸ್-ಸಾಂದರ್ಭಿಕ ಚಿತ್ರImage Credit source: India Today
ನಯನಾ ರಾಜೀವ್
|

Updated on: Oct 09, 2023 | 8:46 AM

Share

ಮಾನವೀಯತೆ ತೋರಬೇಕಾದ ಪೊಲೀಸರೇ ಹೀಗೆ ಅಮಾನವೀಯವಾಗಿ ನಡೆದುಕೊಂಡರೆ ಹೇಗೆ, ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು, ಅಂತಿಮವಾಗಿ ಅವರ ಕುಟುಂಬದವರಿಗೆ ವ್ಯಕ್ತಿಯ ಮುಖವನ್ನು ನೋಡಲು ಅವಕಾಶಮಾಡಿಕೊಡದೆ ಪೊಲೀಸರು ಮೃತದೇಹವನ್ನು ಕಾಲುವೆಗೆ ಎಸೆದಿದ್ದರು.

ಬಿಹಾರದ  ಮುಜಾಫರ್‌ಪುರ ಜಿಲ್ಲೆಯ ಫಕುಲಿ ಔಟ್‌ಪೋಸ್ಟ್ ಪ್ರದೇಶದ ಧೋಧಿ ಕಾಲುವೆ ಸೇತುವೆಯ ಬಳಿ ಅಪಘಾತಕ್ಕೀಡಾದ ವ್ಯಕ್ತಿಯ ಮೃತದೇಹವನ್ನು ಕಾಲುವೆಗೆ ಎಸೆಯುವಾಗ ಕ್ಯಾಮೆರಾದಲ್ಲಿ ಸೆರೆಯಾದ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ವಿಡಿಯೋವೊಂದು ಮುಂಜಾನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಮುಜಾಫರ್‌ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಕಚೇರಿಯ ಹೇಳಿಕೆಯ ಪ್ರಕಾರ, ವಿಡಿಯೋದ ಸತ್ಯಾಸತ್ಯತೆಯನ್ನು ಪರಿಶೀಲಿಸಲಾಗಿದೆ ಮತ್ತು ಅದು ನಿಜವೆಂದು ತಿಳಿದುಬಂದಿದೆ. ಇದು ದುರದೃಷ್ಟಕರ ಘಟನೆ ಮತ್ತು ಅಲ್ಲಿದ್ದ ಪೊಲೀಸರು ಅದನ್ನು ನಿರ್ವಹಿಸಲು ವಿಫಲರಾಗಿದ್ದಾರೆ. ಸರಿಯಾಗಿ ಕರ್ತವ್ಯ ಮಾಡಲಿಲ್ಲ ಎಂದಿದ್ದಾರೆ.

ಘಟನೆಯಲ್ಲಿ ಭಾಗಿಯಾಗಿರುವ ಚಾಲಕ ಕಾನ್ಸ್‌ಟೇಬಲ್‌ನನ್ನು ಅಮಾನತುಗೊಳಿಸಲಾಗಿದ್ದು, ಇಬ್ಬರು ಗೃಹ ರಕ್ಷಕ ಯೋಧರ ಗುತ್ತಿಗೆಯನ್ನು ರದ್ದುಗೊಳಿಸಲಾಗಿದೆ.

ಮತ್ತಷ್ಟು ಓದಿ: ಉತ್ತರಾಖಂಡ: ನೈನಿತಾಲ್​ನಲ್ಲಿ ಕಂದಕಕ್ಕೆ ಬಿದ್ದ ಬಸ್, 6 ಮಂದಿ ಸಾವು, 27 ಜನರಿಗೆ ಗಾಯ

ರಕ್ಷಿಸಬಹುದಾದ ದೇಹದ ಭಾಗಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ, ಮೃತರ ಗುರುತನ್ನು ಇಲ್ಲಿಯವರೆಗೆ ಪತ್ತೆಹಚ್ಚಲು ಸಾಧ್ಯವಾಗಿಲ್ಲ.

ದಾರಿಹೋಕರಿಂದ ಸೆರೆಹಿಡಿಯಲಾದ ದೃಶ್ಯಗಳು, ಇಬ್ಬರು ಪೊಲೀಸ್ ಅಧಿಕಾರಿಗಳು ವ್ಯಕ್ತಿಯ ರಕ್ತದಿಂದ ತೊಯ್ದ ದೇಹವನ್ನು ಎಳೆದುಕೊಂಡು ಹೋಗುವುದನ್ನು ಕಂಡಿದ್ದಾರೆ. ದೇಹವನ್ನು ಕಾಲುವೆಗೆ ತಳ್ಳಲು ಅವರು ತಮ್ಮ ಲಾಠಿಗಳನ್ನು ಬಳಸುತ್ತಿದ್ದರು ಎಂದು ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು