Bihar Bomb Blast: ಬಿಹಾರದಲ್ಲಿ ನಿಲ್ಲದ ಕೋಮು ಹಿಂಸಾಚಾರ, ಸಸಾರಾಮ್ನಲ್ಲಿ ಮತ್ತೆ ಬಾಂಬ್ ಸ್ಫೋಟ
ಬಿಹಾರ ಪೊಲೀಸರು ಮತ್ತು ಜಿಲ್ಲಾಡಳಿತದ ಎಲ್ಲಾ ಪ್ರಯತ್ನಗಳ ನಡುವೆಯೂ ಸಸಾರಾಮ್‌ನ ಮೋಚಿ ಮೊಹಲ್ಲಾದಲ್ಲಿ ಮತ್ತೊಂದು ಬಾಂಬ್ ಸ್ಫೋಟ ಸಂಭವಿಸಿದೆ.
ಬಿಹಾರ ಪೊಲೀಸರು ಮತ್ತು ಜಿಲ್ಲಾಡಳಿತದ ಎಲ್ಲಾ ಪ್ರಯತ್ನಗಳ ನಡುವೆಯೂ ಸಸಾರಾಮ್‌ನ ಮೋಚಿ ಮೊಹಲ್ಲಾದಲ್ಲಿ ಮತ್ತೊಂದು ಬಾಂಬ್ ಸ್ಫೋಟ ಸಂಭವಿಸಿದೆ. ಬೆಳಗಿನ ಜಾವ 4:30ರ ಸುಮಾರಿಗೆ ಸಮಾಜ ಮತ್ತೆ ಮೋಚಿ ಪ್ರದೇಶದಲ್ಲಿ ಬಾಂಬ್ ಎಸೆದು ವಾತಾವರಣ ಹಾಳು ಮಾಡಲು ಯತ್ನಿಸಿದ್ದಾರೆ. ಇದೇ ವೇಳೆ ಮುಂಜಾನೆ 4:30ರ ಸುಮಾರಿಗೆ ನಾಲ್ವರು ಯುವಕರು ದ್ವಿಚಕ್ರವಾಹನದಲ್ಲಿ ಬಂದಿದ್ದರು ಎಂದು ಸ್ಥಳೀಯರು ಹೇಳಿದ್ದಾರೆ. ಬಾಂಬ್ ಎಸೆದಿರುವ ಶಂಕೆ ವ್ಯಕ್ತವಾಗಿದೆ. ದುಷ್ಕರ್ಮಿಗಳು ಗೋಡೆಗೆ ಬಾಂಬ್ ಎಸೆದಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ರಾಮನವಮಿ ಮೆರವಣಿಗೆಯ ವೇಳೆ ಬಿಹಾರದ ರೋಹ್ತಾಸ್ ಮತ್ತು ನಳಂದಾ ಜಿಲ್ಲೆಗಳಲ್ಲಿ ನಡೆದ ಹಿಂದೂ-ಮುಸ್ಲಿಂ ಸಮುದಾಯಗಳ ಕೋಮು ಸಂಘರ್ಷ ಇನ್ನೂ ಮುಂದುವರೆದಿದೆ. ಶನಿವಾರ ಸಂಜೆ ಬಾಂಬ್ ಸ್ಫೋಟ ನಡೆದಿದ್ದು, ಈಗ ಮತ್ತೊಮ್ಮೆ ಹಿಂಸಾಚಾರ ನಡೆದಿರುವ ಬಗ್ಗೆ ವರದಿಯಾಗಿದೆ.
ಮತ್ತಷ್ಟು ಓದಿ: ಭಟ್ಕಳ ಮೂಲದ ಉಗ್ರನಿಗೆ ರಿಲೀಫ್: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಾಂಬ್ ಸ್ಫೋಟ ಕೇಸ್‌ನ ಆರೋಪಿ ನಾಳೆ ರಿಲೀಸ್
ನಳಂದದ ಬಿಹಾರ್‌ಶರೀಫ್‌ನಲ್ಲಿ, ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದರೆ, ರೋಹ್ತಾಸ್ ಜಿಲ್ಲೆಯ ಸಸಾರಾಮ್ ಪಟ್ಟಣದಲ್ಲಿ ನಡೆದ ಸ್ಫೋಟದಲ್ಲಿ ಆರು ಜನರು ಗಾಯಗೊಂಡಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ಸಸಾರಾಮ್‌ನ ಮನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, ಸ್ಥಳದಿಂದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳನ್ನು ಸಸಾರಾಮ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ತನಿಖೆ ಮುಂದುವರಿದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಇದೀಗ ಮತ್ತೊಂದು ಸ್ಫೋಟ ಸಂಭವಿಸಿದ್ದು, ಭದ್ರತಾ ತಂಡಗಳ ಮೇಲೆ ಸ್ಥಳೀಯರು ಕಿಡಿಕಾರಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ