AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ: ಮಹಿಳೆಯ ವೋಟರ್​ ಐಡಿಯಲ್ಲಿ ಸಿಎಂ ನಿತೀಶ್ ಕುಮಾರ್ ಫೋಟೊ

ಮಹಿಳೆಯ ಮತದಾರರ ಗುರುತಿನ ಚೀಟಿಯಲ್ಲಿ ಸಿಎಂ ನಿತೀಶ್​ ಕುಮಾರ್ ಫೋಟೊ ಮುದ್ರಣವಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಈ ಸಂದರ್ಭದಲ್ಲಿ ಮಹಿಳೆಯ ಪತಿ ಈ ಮಾಹಿತಿ ನೀಡಿದ್ದಾರೆ.ಹೀಗಾಗಿದೆ ಎಂದು ಯಾರ ಬಳಿಯೂ ಹೇಳದಂತೆ ಬಿಎಲ್​ಒ ಒತ್ತಾಯಿಸಿದ್ದರು ಎಂಬುದನ್ನು ಹೇಳಿದ್ದಾರೆ. ಚಂದನ್ ಕುಮಾರ್ ಎಂಬುವವರು ತಮ್ಮ ಪತ್ನಿಯ ಮತದಾರರ ಗುರುತಿನ ಚೀಟಿ ಅಂಚೆ ಮೂಲಕ ಬಂದಿತ್ತು ಎಂದು ಮಾಹಿತಿ ನೀಡಿದ್ದಾರೆ.

ಬಿಹಾರ: ಮಹಿಳೆಯ ವೋಟರ್​ ಐಡಿಯಲ್ಲಿ ಸಿಎಂ ನಿತೀಶ್ ಕುಮಾರ್ ಫೋಟೊ
ನಿತೀಶ್ ಕುಮಾರ್
ನಯನಾ ರಾಜೀವ್
|

Updated on:Jul 10, 2025 | 11:28 AM

Share

ಪಾಟ್ನಾ, ಜುಲೈ 10: ಬಿಹಾರದ ಮಾಧೇಪುರದಲ್ಲಿ ಮಹಿಳೆಯೊಬ್ಬರ ಮತದಾರರ ಗುರುತಿನ ಚೀಟಿಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್(Nitish Kumar) ಅವರ ಚಿತ್ರವನ್ನು ಮುದ್ರಿಸಲಾಗಿರುವ ಘಟನೆ ಬೆಳಕಿಗೆ ಬಂದಿದೆ. ಇದು ವ್ಯವಸ್ಥೆಯ ನಿರ್ಲಕ್ಷ್ಯ ಎಂದು ಮಹಿಳೆ ಹೇಳಿದ್ದು, ತನಿಖೆಗೆ ಒತ್ತಾಯಿಸಿದ್ದಾರೆ. ಬಿಹಾರದಲ್ಲಿ ಮತದಾರರ ಪಟ್ಟಿ ಪರಿಶೀಲನೆ ವಿರೋಧಿಸಿ ಬಂದ್​ಗೆ ಕರೆ ನೀಡಲಾಗಿತ್ತು. ಈ ಸಂದರ್ಭದಲ್ಲಿ ಮಹಿಳೆಯ ಪತಿ ಈ ಮಾಹಿತಿ ನೀಡಿದ್ದಾರೆ.ಹೀಗಾಗಿದೆ ಎಂದು ಯಾರ ಬಳಿಯೂ ಹೇಳದಂತೆ ಬಿಎಲ್​ಒ ಒತ್ತಾಯಿಸಿದ್ದರು ಎಂಬುದನ್ನು ಹೇಳಿದ್ದಾರೆ.

ಚಂದನ್ ಕುಮಾರ್ ಎಂಬುವವರು ತಮ್ಮ ಪತ್ನಿಯ ಮತದಾರರ ಗುರುತಿನ ಚೀಟಿ ಅಂಚೆ ಮೂಲಕ ಬಂದಿತ್ತು. ಲಕೋಟೆಯಲ್ಲಿ ಎಲ್ಲಾ ಮಾಹಿತಿ ಸರಿಯಾಗಿತ್ತು. ಆದರೆ ಕಾರ್ಡ್​​ನಲ್ಲಿರುವ ಫೋಟೊ ನಿತೀಶ್​ ಕುಮಾರ್​​ದ್ದಾಗಿತ್ತು. ಈ ಬಗ್ಗೆ ಬಿಎಲ್​ಒ ಬಳಿ ದೂರು ನೀಡಿದಾಗ ಅವರು ಯಾರಿಗೂ ಈ ವಿಚಾರ ಹೇಳಬೇಡಿ ಎಂದು ಹೇಳಿದ್ದಾಗಿ ತಿಳಿಸಿದ್ದಾರೆ.

ಮತ್ತೊಂದೆಡೆ, ಉಪ ಚುನಾವಣಾ ಅಧಿಕಾರಿ ಜಿತೇಂದ್ರಕುಮಾರ್ ಮಾತನಾಡಿ,ಕರ್ನಾಟಕದಲ್ಲಿ ಮತದಾರರ ಗುರುತಿನ ಚೀಟಿಗಳನ್ನು ತಯಾರಿಸಲಾಗುತ್ತದೆ. ಮತದಾರರ ಚೀಟಿಯಲ್ಲಿ ಯಾವುದೇ ತಪ್ಪುಗಳಿದ್ದರೆ ಅದನ್ನು ಸರಿಪಡಿಸಬಹುದು. ಮಹಿಳೆಯು  ಉಪ ಚುನಾವಣಾಧಿಕಾರಿ ಕಚೇರಿ ಅಥವಾ ಆನ್‌ಲೈನ್‌ನಲ್ಲಿ ಫಾರ್ಮ್ -8 ಅನ್ನು ಭರ್ತಿ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಕೆಲವೇ ದಿನಗಳಲ್ಲಿ ತಿದ್ದುಪಡಿ ಮಾಡಲಾಗುತ್ತದೆ ಮತ್ತು ಹೊಸ ಮತದಾರರ ಚೀಟಿಯನ್ನು ಮನೆಗೆ ಕಳುಹಿಸಲಾಗುತ್ತದೆ. ಯಾರಿಗಾದರೂ ಅಂತಹ ತಪ್ಪುಗಳಿದ್ದರೆ, ಅವರು ಅರ್ಜಿ ಸಲ್ಲಿಸಬಹುದು, ಭಯಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಚಿರಾಗ್ ಪಾಸ್ವಾನ್ ಸ್ಪರ್ಧೆ? ಪಕ್ಷದ ನಾಯಕ ಹೇಳಿದ್ದೇನು?

ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಸಂಭವಿಸದಂತೆ ಈ ಪ್ರಕರಣದಲ್ಲಿ ಉನ್ನತ ಮಟ್ಟದ ತನಿಖೆ ನಡೆಯಬೇಕು ಮತ್ತು ಹೊಣೆಗಾರರ ​​ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಚಂದನ್ ಒತ್ತಾಯಿಸಿದ್ದಾರೆ. ಸುಮಾರು ಎರಡೂವರೆ ತಿಂಗಳ ಹಿಂದೆ ತಮ್ಮ ಪತ್ನಿಯ ಹೆಸರಿಗೆ ಮತದಾರರ ಗುರುತಿನ ಚೀಟಿ ಅಂಚೆ ಮೂಲಕ ಬಂದಿತ್ತು ಎಂದು ಚಂದನ್ ಕುಮಾರ್ ಹೇಳಿದ್ದಾರೆ.

ಲಕೋಟೆಯಲ್ಲಿರುವ ಹೆಸರು, ವಿಳಾಸ ಮತ್ತು ಇತರ ಎಲ್ಲಾ ಮಾಹಿತಿಗಳು ಅವರ ಪತ್ನಿಯದ್ದಾಗಿತ್ತು, ಆದರೆ ಅವರು ಕಾರ್ಡ್ ತೆರೆದಾಗ ಅದರ ಮೇಲಿದ್ದ ಫೋಟೋ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರದ್ದಾಗಿತ್ತು ಎಂದಿದ್ದಾರೆ.

ಈ ಘಟನೆಯು ಚುನಾವಣಾ ಆಯೋಗದ ಪ್ರಕ್ರಿಯೆಗಳ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯ ಬಗ್ಗೆ ಸಾರ್ವಜನಿಕ ಕಳವಳವನ್ನು ಹೆಚ್ಚಿಸಿದೆ, ವಿಶೇಷವಾಗಿ ಬಿಹಾರವು 2025 ರ ವಿಧಾನಸಭಾ ಚುನಾವಣೆಗೆ ತಯಾರಿ ನಡೆಸುತ್ತಿರುವ ಸಮಯದಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ಚುನಾವಣೆ ಮೇಲೆ ಫಲಿತಾಂಶ ಬೀರುತ್ತಾ ಕಾದುನೋಡಬೇಕಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:52 am, Thu, 10 July 25

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ