ಮಹಿಳೆಗೆ ಕಿರುಕುಳ ಪ್ರಕರಣ: ಆರೋಪಿಗೆ ಗ್ರಾಮದ ಎಲ್ಲ ಮಹಿಳೆಯರ ಬಟ್ಟೆ ಒಗೆದು ಇಸ್ತ್ರಿ ಮಾಡಿ ಕೊಡುವಂತೆ ಶಿಕ್ಷೆ ನೀಡಿದ ನ್ಯಾಯಾಲಯ

ಪ್ರಕರಣದ ವಿಚಾರಣೆಯ ಸಮಯದಲ್ಲಿ ನ್ಯಾಯಾಲಯವು ಆರೋಪಿಗೆ ಯಾವ ಕೆಲಸ ಮಾಡುತ್ತಿದ್ದಿ? ಎಂದು ಕೇಳಿತು. ಈ ಪ್ರಶ್ನೆಗೆ ಆರೋಪಿ ಲಾಂಡ್ರಿ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದ. ಆ ನಂತರ ಆತನಿಗೆ ಮಹಿಳೆಯರ ಬಟ್ಟೆ ಒಗೆಯುವಂತೆ ನ್ಯಾಯಾಲಯ ಆದೇಶಿಸಿತು.

ಮಹಿಳೆಗೆ ಕಿರುಕುಳ ಪ್ರಕರಣ: ಆರೋಪಿಗೆ ಗ್ರಾಮದ ಎಲ್ಲ ಮಹಿಳೆಯರ ಬಟ್ಟೆ ಒಗೆದು ಇಸ್ತ್ರಿ ಮಾಡಿ ಕೊಡುವಂತೆ ಶಿಕ್ಷೆ ನೀಡಿದ ನ್ಯಾಯಾಲಯ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Sep 22, 2021 | 6:58 PM

ಮಧುಬನಿ (ಬಿಹಾರ): ಮಹಿಳೆಗೆ ಕಿರುಕುಳ ಮತ್ತು ಅಸಭ್ಯವಾಗಿ ವರ್ತಿಸಿದ ಪ್ರಕರಣವೊಂದರ ಆರೋಪಿಗೆ ಬಿಹಾರದ ಮಧುಬನಿ ಜಿಲ್ಲೆಯ ಝಂಜರಪುರದ ಸ್ಥಳೀಯ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಗ್ರಾಮದಲ್ಲಿರುವ ಎಲ್ಲ ಮಹಿಳೆಯರ ಬಟ್ಟೆ ತೊಳೆಯುವಂತೆ ನ್ಯಾಯಾಲಯವು ಆರೋಪಿಗಳಿಗೆ ಆದೇಶಿಸಿದೆ. ನ್ಯಾಯಾಲಯವು ಅದೇ ಷರತ್ತಿನ ಮೇಲೆ ಆರೋಪಿಗಳಿಗೆ ಜಾಮೀನು ನೀಡಿದೆ. ನ್ಯಾಯಾಲಯವು ಪ್ರಕರಣದ ವಿಚಾರಣೆ ನಡೆಸುವಾಗ, ಮುಂದಿನ ಆರು ತಿಂಗಳವರೆಗೆ ಆರೋಪಿ ತನ್ನ ಮನಸ್ಸಿನಲ್ಲಿ ಮಹಿಳೆಯರ ಬಗ್ಗೆ ಗೌರವವನ್ನು ಹೊಂದಲು ಹಳ್ಳಿಯ ಎಲ್ಲ ಮಹಿಳೆಯರ ಬಟ್ಟೆಗಳನ್ನು ತೊಳೆಯಬೇಕು ಎಂದು ಹೇಳಿದೆ. ಅಷ್ಟೇ ಅಲ್ಲ, ಆರೋಪಿ ಮಹಿಳೆಯರ ಬಟ್ಟೆಗಳನ್ನು ತೊಳೆದ ನಂತರ ಬಟ್ಟೆಗಳನ್ನು ಇಸ್ತ್ರಿ ಮಾಡಿ ಹಿಂದಿರುಗಿಸಬೇಕು ಎಂದು ನ್ಯಾಯಾಲಯ ಹೇಳಿದೆ. ನ್ಯಾಯಮೂರ್ತಿ ಅವಿನಾಶ್ ಕುಮಾರ್, ಪ್ರಕರಣದ ವಿಚಾರಣೆ ವೇಳೆ 20 ವರ್ಷದ ಆರೋಪಿ ಲಾಲನ್ ಕುಮಾರ್ ಗೆ ಮಹಿಳೆಯರನ್ನು ಗೌರವಿಸುವಂತೆ ಹೇಳಿದರು.

ಪ್ರಕರಣದ ವಿಚಾರಣೆಯ ಸಮಯದಲ್ಲಿ ನ್ಯಾಯಾಲಯವು ಆರೋಪಿಗೆ ಯಾವ ಕೆಲಸ ಮಾಡುತ್ತಿದ್ದಿ? ಎಂದು ಕೇಳಿತು. ಈ ಪ್ರಶ್ನೆಗೆ ಆರೋಪಿ ಲಾಂಡ್ರಿ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದ. ಆ ನಂತರ ಆತನಿಗೆ ಮಹಿಳೆಯರ ಬಟ್ಟೆ ಒಗೆಯುವಂತೆ ನ್ಯಾಯಾಲಯ ಆದೇಶಿಸಿತು. ಗ್ರಾಮದಲ್ಲಿ ಸುಮಾರು 2000 ಮಹಿಳೆಯರು ಇದ್ದಾರೆ. ಇದರರ್ಥ ಆರೋಪಿಯು ಮುಂದಿನ 6 ತಿಂಗಳುಗಳ ಕಾಲ 2000 ಮಹಿಳೆಯರ ಬಟ್ಟೆಗಳನ್ನು ಉಚಿತವಾಗಿ ತೊಳೆಯಬೇಕು. ನಂತರ ಆತ ಇಸ್ತ್ರಿ ಮಾಡಿ ಹಿಂದಿರುಗಿಸಬೇಕು. ಅಲ್ಲದೆ, ಆರೋಪಿ ಲಾಲನ್ ನ್ಯಾಯಾಲಯದ ಆದೇಶವನ್ನು ಸರಿಯಾಗಿ ಅನುಸರಿಸುತ್ತಿದ್ದಾನೆಯೇ ಎಂದು ನೋಡುವುದು ಗ್ರಾಮದ ಸರ್​​ಪಂಚ್ ಅಥವಾ ಗ್ರಾಮ ಸೇವಕರ ಜವಾಬ್ದಾರಿಯಾಗಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಆರೋಪಿ ಲಾಲನ್ ತನ್ನ ಉಚಿತ ಕೆಲಸಕ್ಕಾಗಿ ಸರ್​​ಪಂಚ್ ಅಥವಾ ಗ್ರಾಮ ಸೇವಕರಿಂದ ಪ್ರಮಾಣಪತ್ರವನ್ನು ತಂದು ನ್ಯಾಯಾಲಯಕ್ಕೆ ಸಲ್ಲಿಸಬೇಕು. ನ್ಯಾಯಾಲಯವು ಜಾಮೀನು ಅರ್ಜಿಯ ಪ್ರತಿಯನ್ನು ನಿಯಮಗಳು ಮತ್ತು ಷರತ್ತುಗಳೊಂದಿಗೆ ಸರಪಂಚ ಮತ್ತು ಹಳ್ಳಿಯ ಮುಖ್ಯಸ್ಥರಿಗೆ ಕಳುಹಿಸಿದೆ. ಮಹಿಳೆಯ ಮೇಲೆ ಕಿರುಕುಳ ಮತ್ತು ದೌರ್ಜನ್ಯದ ಆರೋಪದ ಮೇಲೆ ಲಾಲನ್ ಕುಮಾರ್ ವಿರುದ್ಧ ಏಪ್ರಿಲ್ 19 ರಂದು ಲೋಖಾ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿತ್ತು.

ನಂತರ ಆತನನ್ನು ಪೊಲೀಸರು ಬಂಧಿಸಿದರು. ಲೋಖಾ ಪೊಲೀಸ್ ಠಾಣೆಯ ಸಂತೋಷ್ ಕುಮಾರ್ ಮಂಡಲ್, ಆರೋಪಿ ಲಾಲನ್ ಕುಮಾರ್ ಏಪ್ರಿಲ್ 17 ರ ರಾತ್ರಿ ಗ್ರಾಮದಲ್ಲಿ ಮಹಿಳೆಯನ್ನು ಕಿರುಕುಳ ಮತ್ತು ನಿಂದನೆ ಮಾಡಲು ಯತ್ನಿಸಿದ್ದಾನೆ ಎಂದು ಹೇಳಿದರು. ಏಪ್ರಿಲ್ 18 ರಂದು ಸಂತ್ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದರ ನಂತರ ಮುಂದಿನ ಕ್ರಮ ಕೈಗೊಳ್ಳಲಾಯಿತು.

ಇದನ್ನೂ ಓದಿ: Bhabanipur Bypoll ಮೋದಿ ಜೀ, ನಾವು ಭಾರತವನ್ನು ತಾಲಿಬಾನ್ ಮಾಡಲು ಬಿಡುವುದಿಲ್ಲ: ಮಮತಾ ಬ್ಯಾನರ್ಜಿ

(Bihar’s local court sentences a man accused of molesting women to wash clothes of all women in village as punishment)

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ