Bikaner Express Accident ಹಳಿತಪ್ಪಿದ ಗುವಾಹಟಿ-ಬಿಕಾನೇರ್ ಎಕ್ಸ್‌ಪ್ರೆಸ್ ರೈಲು; ಮೂವರು ಪ್ರಯಾಣಿಕರು ಸಾವು

| Updated By: ರಶ್ಮಿ ಕಲ್ಲಕಟ್ಟ

Updated on: Jan 13, 2022 | 7:27 PM

ರೈಲ್ವೇ ಹಳಿಯಲ್ಲಿ ಬಿರುಕು ಕಾಣಿಸಿಕೊಂಡಿದ್ದರಿಂದ ರೈಲು ಹಳಿತಪ್ಪಿದೆ ಎಂದು ಮೂಲಗಳು ತಿಳಿಸಿವೆ, ಆದರೆ ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ವಿಪತ್ತು ನಿರ್ವಹಣೆ ಮತ್ತು ರಕ್ಷಣಾ ತಂಡಗಳು ಈಗಾಗಲೇ ಸ್ಥಳಕ್ಕೆ ತಲುಪಿವೆ.

Bikaner Express Accident ಹಳಿತಪ್ಪಿದ ಗುವಾಹಟಿ-ಬಿಕಾನೇರ್ ಎಕ್ಸ್‌ಪ್ರೆಸ್ ರೈಲು; ಮೂವರು ಪ್ರಯಾಣಿಕರು ಸಾವು
ರೈಲು ಅಪಘಾತ
Follow us on

ದೆಹಲಿ: ಗುರುವಾರ ಸಂಜೆ ಪಶ್ಚಿಮ ಬಂಗಾಳದಲ್ಲಿ ಗುವಾಹಟಿ- ಬಿಕಾನೇರ್ ಎಕ್ಸ್‌ಪ್ರೆಸ್ (Guwahati-Bikaner Express) ರೈಲಿನ ಕನಿಷ್ಠ ನಾಲ್ಕು ಬೋಗಿಗಳು ಹಳಿತಪ್ಪಿವೆ. ಪ್ರಾಥಮಿಕ ತನಿಖೆ ಪ್ರಕಾರ ರೈಲ್ವೆ ಹಳಿಯಲ್ಲಿ ಬಿರುಕು ಉಂಟಾಗಿ ಇದು ಅಪಘಾತಕ್ಕೆ ಕಾರಣವಾಗಿರಬಹುದು ಎಂಬುದನ್ನು ಸೂಚಿಸುತ್ತದೆ. ಉತ್ತರ ಬಂಗಾಳದ ಜಲ್ಪೈಗುರಿಯ (Jalpaiguri) ಮೊಯ್ನಗುರಿ ಪ್ರದೇಶದ ಬಳಿ ಅಪಘಾತ ಸಂಭವಿಸಿದೆ. ರೈಲು ಸಂಖ್ಯೆ 15633 ಬಿಕಾನೇರ್‌ನಿಂದ ಗುವಾಹಟಿಗೆ ಹೋಗುತ್ತಿತ್ತು.  ಏತನ್ಮಧ್ಯೆ, ಇದುವರೆಗೆ ಸುಮಾರು 250 ಪ್ರಯಾಣಿಕರನ್ನು ರಕ್ಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಗ್ಯಾಸ್ ಕಟ್ಟರ್‌ಗಳನ್ನು ಬಳಸಲಾಗುತ್ತಿದೆ ಎಂದು ವರದಿಗಳು ಸೂಚಿಸಿವೆ. ರೈಲ್ವೇ ಹಳಿಯಲ್ಲಿ ಬಿರುಕು ಕಾಣಿಸಿಕೊಂಡಿದ್ದರಿಂದ ರೈಲು ಹಳಿತಪ್ಪಿದೆ ಎಂದು ಮೂಲಗಳು ತಿಳಿಸಿವೆ, ಆದರೆ ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ವಿಪತ್ತು ನಿರ್ವಹಣೆ ಮತ್ತು ರಕ್ಷಣಾ ತಂಡಗಳು ಈಗಾಗಲೇ ಸ್ಥಳಕ್ಕೆ ತಲುಪಿವೆ.

ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಜಲ್ಪೈಗುರಿಯ ಜಿಲ್ಲಾ ಮ್ಯಾಜಿಸ್ಟ್ರೇಟ್ ಮೌಮಿತಾ ಗೋಡಾಲಾ ಬಸು ಹೇಳಿದ್ದಾರೆ. ಹಳಿತಪ್ಪಿದ ಬೋಗಿಗಳಲ್ಲಿ ಹಲವು ಪ್ರಯಾಣಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಗ್ಯಾಸ್ ಕಟ್ಟರ್‌ಗಳನ್ನು ಬಳಸಿ ಕೋಚ್‌ಗಳನ್ನು ಕತ್ತರಿಸಲಾಗುತ್ತಿದೆ ಎಂದು ರೈಲ್ವೇ ಮೂಲಗಳು ತಿಳಿಸಿವೆ.

ಅಪಘಾತದ ಕುರಿತು  ರೈಲ್ವೆ ಆಯುಕ್ತರು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ರೈಲ್ವೆ ಮಂಡಳಿಯ ಅಧ್ಯಕ್ಷರು ಮತ್ತು ಡಿಜಿ (ಸುರಕ್ಷತೆ), ರೈಲ್ವೆ ಮಂಡಳಿಯು ದೆಹಲಿಯಿಂದ ಅಪಘಾತದ ಸ್ಥಳಕ್ಕೆ ತೆರಳುತ್ತಿದ್ದಾರೆ.
ಮೃತರಿಗೆ ₹ 5 ಲಕ್ಷ, ಗಂಭೀರ ಗಾಯಕ್ಕೆ ₹ 1 ಲಕ್ಷ, ಸಣ್ಣ ಪುಟ್ಟ ಗಾಯಗಳಿಗೆ ₹ 25,000 ಪರಿಹಾರ ಘೋಷಿಸಲಾಗಿದೆ.

ನ್ಯೂ ಜಲ್ಪೈಗುರಿ ಮತ್ತು ನ್ಯೂ ಅಲಿಪುರ್ದೂರ್‌ನಿಂದ ರಕ್ಷಣಾ ರೈಲುಗಳು ಸ್ಥಳಕ್ಕೆ ಧಾವಿಸಿವೆ. ರೈಲಿನ ಕನಿಷ್ಠ ಐದು ಬೋಗಿಗಳು ಹಳಿತಪ್ಪಿವೆ, ಸಾವಿನ ಸಂಖ್ಯೆಗಳು ಹೆಚ್ಚಾಗಬಹುದು ಎಂದು ಈಶಾನ್ಯ ಫ್ರಾಂಟಿಯರ್ ರೈಲ್ವೆ ಮೂಲಗಳು ತಿಳಿಸಿವೆ. ರೈಲು ನಿನ್ನೆ ಬಿಕಾನೇರ್ ಜಂಕ್ಷನ್‌ನಿಂದ ಹೊರಟಿದ್ದು, ಇಂದು ಸಂಜೆ ಗುವಾಹಟಿ ತಲುಪಬೇಕಿತ್ತು

ಗುವಾಹಟಿ-ಬಿಕಾನೇರ್ ಎಕ್ಸ್‌ಪ್ರೆಸ್ 15633  ಇಂದು ಸಂಜೆ ಸುಮಾರು 5 ಗಂಟೆಗೆ ಹಳಿತಪ್ಪಿತು. 12 ಬೋಗಿಗಳಿಗೆ ಹಾನಿಯಾಗಿದೆ. ಅಪಘಾತ ಪರಿಹಾರ ರೈಲು ಮತ್ತು ವೈದ್ಯಕೀಯ ವ್ಯಾನ್‌ನೊಂದಿಗೆ ಡಿಆರ್‌ಎಂ ಮತ್ತು ಎಡಿಆರ್‌ಎಂ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಭಾರತೀಯ ರೈಲ್ವೆ ತಿಳಿಸಿದೆ.


ಪಾಟ್ನಾ ಜಂಕ್ಷನ್‌ನಿಂದ 98 ಪ್ರಯಾಣಿಕರು ರೈಲು ಹತ್ತಿದ್ದರು

ಪಾಟ್ನಾ ಜಂಕ್ಷನ್‌ನಿಂದ 98 ಪ್ರಯಾಣಿಕರು (ಗುವಾಹಟಿ-ಬಿಕಾನೇರ್ ಎಕ್ಸ್‌ಪ್ರೆಸ್) ಮತ್ತು ಮೊಕಾಮಾದಿಂದ 3 ಜನರು ಮತ್ತು ಭಕ್ತಿಯಾರ್‌ಪುರದಿಂದ 2 ಜನರು ರೈಲಿಗೆ ಏರಿದ್ದಾರೆ ಎಂದು ಬಿಹಾರದ ಪಾಟ್ನಾ ಜಂಕ್ಷನ್‌ನ ಮುಖ್ಯ ಮೀಸಲಾತಿ ಮೇಲ್ವಿಚಾರಕ ರಾಜೇಶ್ ಕುಮಾರ್ ತಿಳಿಸಿದ್ದಾರೆ. ಜಲ್ಪೈಗುರಿ ಜಿಲ್ಲಾಡಳಿತವು ಗಾಯಗೊಂಡ ಪ್ರಯಾಣಿಕರನ್ನು ಸಮೀಪದ ಮೊಯ್ನಗುರಿಯ ಆಸ್ಪತ್ರೆಗೆ ಸಾಗಿಸಿದೆ.

ರೈಲ್ವೆ ಸಹಾಯವಾಣಿ ಸಂಖ್ಯೆ

ಪಶ್ಚಿಮ ಬಂಗಾಳದ ನ್ಯೂ ಡೊಮೊಹಾನಿ ರೈಲು ನಿಲ್ದಾಣದ ಬಳಿ ಹಳಿತಪ್ಪಿದ ಗುವಾಹಟಿ-ಬಿಕಾನೇರ್ ಎಕ್ಸ್‌ಪ್ರೆಸ್ ರೈಲಿನ ಕುರಿತು ಯಾವುದೇ ಮಾಹಿತಿಗಾಗಿ ರೈಲ್ವೆ ಹಲವಾರು ಸಹಾಯವಾಣಿ ಸಂಖ್ಯೆಗಳನ್ನು ನೀಡಿದೆ.

ಸಹಾಯವಾಣಿ ಸಂಖ್ಯೆಗಳು – 03564 255190, 050 34666 ಮತ್ತು 0361-273162, 2731622, 2731623

ಏತನ್ಮಧ್ಯೆ, ದೇಶದ  ಕೊವಿಡ್ ಪರಿಸ್ಥಿತಿಯ ಕುರಿತು ಪ್ರಧಾನಿ ಮೋದಿಯವರೊಂದಿಗೆ ಸಭೆ ನಡೆಸಿದ್ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸುದ್ದಿಯ ನಂತರ ಸಭೆಯಿಂದ ನಿರ್ಗಮಿಸಿದರು ಮತ್ತು ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕಾಗಿ ಜಿಲ್ಲಾಡಳಿತಕ್ಕೆ ಸೂಚನೆಗಳನ್ನು ನೀಡಿದ್ದಾರೆ.

ರಕ್ಷಣಾ ಕಾರ್ಯಾಚರಣೆಯಲ್ಲಿ ಎನ್‌ಡಿಆರ್‌ಎಫ್‌ನ ಎರಡು ತಂಡಗಳನ್ನು ನಿಯೋಜಿಸಲಾಗಿದೆ. ಅಲ್ಲದೆ, ಗುವಾಹಟಿ-ಬಿಕಾನೇರ್ ಎಕ್ಸ್‌ಪ್ರೆಸ್ ರೈಲು ಹಳಿತಪ್ಪಿದ ಜನರನ್ನು ರಕ್ಷಿಸಲು ಅವರು ಶೀಘ್ರದಲ್ಲೇ ತಲುಪಲಿದ್ದಾರೆ ಎಂದು ಡಿಜಿ ಎನ್‌ಡಿಆರ್‌ಎಫ್ ಅತುಲ್ ಕರ್ವಾಲ್ ಹೇಳಿದ್ದಾರೆ.


ತೀವ್ರ ಕಳವಳ ವ್ಯಕ್ತಪಡಿಸಿ ಮಮತಾ ಬ್ಯಾನರ್ಜಿ ಟ್ವೀಟ್

ಮೇನಾಗುರಿಯಲ್ಲಿ ಬಿಕಾನೇರ್-ಗುವಾಹಟಿ ಎಕ್ಸ್‌ಪ್ರೆಸ್‌ನ ದುರಂತ ಅಪಘಾತದ ಬಗ್ಗೆ ಕೇಳಿ ತೀವ್ರ ಕಳವಳವಾಯಿತು. ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು, DM/SP/IG ಉತ್ತರ ಬಂಗಾಳ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಗಾಯಗೊಂಡವರಿಗೆ ಸಾಧ್ಯವಾದಷ್ಟು ಬೇಗ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತದೆ. ರಾಜ್ಯ ಕೇಂದ್ರಗಳಿಂದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ: Narendra Modi: ಭಾರತದಲ್ಲಿ ಕೊವಿಡ್ ಕೇಸುಗಳ ಸಂಖ್ಯೆ ಏರಿಕೆ; ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿದ ಪ್ರಧಾನಿ ಮೋದಿ

Published On - 6:46 pm, Thu, 13 January 22