ಬಿಲಾಸ್ಪುರದ ರೈಲು ಅಪಘಾತದಲ್ಲಿ 11 ಜನ ಸಾವು; ಈ ದುರಂತಕ್ಕೆ ಕಾರಣವೇನು?
ಛತ್ತೀಸ್‌ಗಢದ ಬಿಲಾಸ್ಪುರದಲ್ಲಿ ರೈಲು ಅಪಘಾತ ಉಂಟಾಗಿದೆ. ಬಿಲಾಸ್ಪುರದಲ್ಲಿ ಪ್ಯಾಸೆಂಜರ್ ರೈಲು ಹಾಗೂ ಗೂಡ್ಸ್ ರೈಲುಗಳು ಡಿಕ್ಕಿಯಾಗಿ 11 ಜನ ಸಾವನ್ನಪ್ಪಿದ್ದಾರೆ ಮತ್ತು 20 ಜನರಿಗೆ ಗಾಯಗಳಾಗಿವೆ. ಛತ್ತೀಸ್‌ಗಢದ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಮೃತರ ಕುಟುಂಬಗಳಿಗೆ 5 ಲಕ್ಷ ರೂ. ಮತ್ತು ಗಾಯಾಳುಗಳಿಗೆ 50,000 ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ. ಮೃತರ ಕುಟುಂಬಗಳಿಗೆ ಭಾರತೀಯ ರೈಲ್ವೆಯಿಂದ 10 ಲಕ್ಷ ರೂ.ಗಳವರೆಗೆ ಪರಿಹಾರ ಘೋಷಿಸಲಾಗಿದೆ.

ಬಿಲಾಸ್ಪುರ, ನವೆಂಬರ್ 5: ಛತ್ತೀಸ್‌ಗಢದ ಬಿಲಾಸ್ಪುರದ ಬಳಿ ನಡೆದ ದುರಂತ ರೈಲು ಅಪಘಾತದಲ್ಲಿ (Bilaspur Train Accident) 11 ಜನ ಸಾವನ್ನಪ್ಪಿದ್ದಾರೆ ಮತ್ತು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಪುರುಷರು, ಮಹಿಳೆಯರು ಮತ್ತು ಮಕ್ಕಳು ಕೂಡ ಸೇರಿದ್ದಾರೆ. ಗಾಯಾಳುಗಳಲ್ಲಿ ಅನೇಕರ ಸ್ಥಿತಿ ಗಂಭೀರವಾಗಿದೆ. ರೆಡ್ ಸಿಗ್ನಲ್ ಅನ್ನು ಮೀರಿದ ನಂತರ ಪ್ಯಾಸೆಂಜರ್ ರೈಲು 60 ರಿಂದ 70 ಕಿ.ಮೀ ವೇಗದಲ್ಲಿ ಗೂಡ್ಸ್ ರೈಲಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
“ಅಪಘಾತದಲ್ಲಿ 11 ಜನರು ಸಾವನ್ನಪ್ಪಿದ್ದಾರೆ ಮತ್ತು 20 ಜನರು ಗಾಯಗೊಂಡಿದ್ದಾರೆ” ಎಂದು ರೈಲ್ವೆ ಇಲಾಖೆ ಹೇಳಿಕೆ ಬಿಡುಗಡೆ ಮಾಡಿದೆ. ಗಾಯಗೊಂಡ ಪ್ರಯಾಣಿಕರನ್ನು ಬಿಲಾಸ್ಪುರದ ಅಪೋಲೋ ಆಸ್ಪತ್ರೆ ಮತ್ತು ಛತ್ತೀಸ್‌ಗಢ ವೈದ್ಯಕೀಯ ವಿಜ್ಞಾನ ಸಂಸ್ಥೆ (CIMS)ಗೆ ಸ್ಥಳಾಂತರಿಸಲಾಗಿದೆ.
मुख्यमंत्री श्री विष्णु देव साय के निर्देश पर राज्य सरकार ने बिलासपुर के समीप हुई ट्रेन दुर्घटना में दिवंगत हुए यात्रियों के परिजनों को ₹5 लाख तथा घायलों को ₹50 हज़ार की आर्थिक सहायता राशि देने का निर्णय लिया है।
मुख्यमंत्री श्री साय ने कहा कि घायलों के समुचित एवं निःशुल्क…
— CMO Chhattisgarh (@ChhattisgarhCMO) November 4, 2025
ರೈಲು ದುರಂತಕ್ಕೆ ಕಾರಣವೇನು?:
ಮಂಗಳವಾರ (ನವೆಂಬರ್ 4) ಛತ್ತೀಸ್‌ಗಢದ ಬಿಲಾಸ್ಪುರ ನಿಲ್ದಾಣದ ಬಳಿ ಮುಖ್ಯ ವಿದ್ಯುತ್ ಮಲ್ಟಿಪಲ್ ಯೂನಿಟ್ (MEMU) ಸ್ಥಳೀಯ ರೈಲು ನಿಂತಿದ್ದ ಸರಕು ರೈಲಿಗೆ ಡಿಕ್ಕಿ ಹೊಡೆದು ಈ ರೈಲು ಅಪಘಾತ ಸಂಭವಿಸಿದೆ. ಸದ್ಯದ ಮಾಹಿತಿ ಪ್ರಕಾರ ಈ ಅಪಘಾತಕ್ಕೆ ಕಾರಣವೇನೆಂದರೆ, ಅಪಾಯದ ಸಿಗ್ನಲ್‌ನಲ್ಲಿ ರೈಲನ್ನು ನಿಯಂತ್ರಿಸಲು ರೈಲು ಸಿಬ್ಬಂದಿ ವಿಫಲರಾಗಿದ್ದಾರೆ. ಇದರಿಂದ ರೈಲು ಕೆಂಪು ಸಿಗ್ನಲ್ ಅನ್ನು ದಾಟಿದೆ. ರೈಲುಗಳ ನಡುವೆ ಡಿಕ್ಕಿಯಾದ ನಂತರ ಮೋಟಾರ್ ಕೋಚ್ ಒಳಗೆ ಲೋಕೋ ಪೈಲಟ್ ಮತ್ತು ಸಹಾಯಕ ಲೋಕೋ ಪೈಲಟ್ ಗಾಯಗೊಂಡಿರುವುದು ಕಂಡುಬಂದಿದೆ.
ಇದನ್ನೂ ಓದಿ: ಬಿಲಾಸ್ಪುರದಲ್ಲಿ ಎರಡು ರೈಲುಗಳ ನಡುವೆ ಡಿಕ್ಕಿ
ಗೂಡ್ಸ್ ರೈಲು ಕಾಣಿಸುವಷ್ಟು ದೂರದಲ್ಲಿದ್ದರೂ ಲೋಕೋ ಪೈಲಟ್ ಕೆಂಪು ಸಿಗ್ನಲ್ ಅನ್ನು ದಾಟಿದ್ದೇಕೆ? ಆತ ತುರ್ತು ಬ್ರೇಕ್ ಅನ್ನು ಏಕೆ ಹಾಕಲಿಲ್ಲ? ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಪ್ರಯಾಣಿಕ ರೈಲಿನ ಲೊಕೊ ಪೈಲಟ್ ವಿದ್ಯಾ ಸಾಗರ್ ಈ ಅಪಘಾತದಲ್ಲಿ ಸಾವನ್ನಪ್ಪಿದವರಲ್ಲಿ ಒಬ್ಬರು. ಸಹಾಯಕ ಲೋಕೋ ಪೈಲಟ್ ಆದ ರಶ್ಮಿ ರಾಜ್ ಗಂಭೀರವಾಗಿ ಗಾಯಗೊಂಡಿದ್ದಾರೆ.
Do hell with the KAVACH Systems and their versions if they aren’t able to even monitor and save from collision. Bilaspur express Train accident in Chattisgarh again imprint dark impact on Railways Minister Ashwini Vaishnav tenure. So many bad news in close time. Om Shanti🇮🇳🙏🏻🕊️🌼 pic.twitter.com/aEtRiI1aMK
— Nishant Singh Rathore (@Nishant_Singh04) November 4, 2025
ಈ ಅಪಘಾತದ ಪರಿಣಾಮವಾಗಿ ಇದುವರೆಗೆ 11 ಜನರು ಸಾವನ್ನಪ್ಪಿದ್ದಾರೆ ಮತ್ತು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಪುರುಷರು, ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ. ಅವರಲ್ಲಿ ಹಲವರು ಗಂಭೀರ ಸ್ಥಿತಿಯಲ್ಲಿದ್ದಾರೆ. ಈ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಆರಂಭದಲ್ಲಿ ಎರಡರಿಂದ ಮೂರು ಪ್ರಯಾಣಿಕರು ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿತ್ತು. ಆದರೆ, ಗಾಯಾಳುಗಳ ಸಂಖ್ಯೆ ಹೆಚ್ಚಾಗಿದೆ.
ಇದನ್ನೂ ಓದಿ: ಛತ್ತೀಸ್‌ಗಢದ ಬಿಲಾಸ್ಪುರದಲ್ಲಿ ಭೀಕರ ಅಪಘಾತ; 2 ರೈಲುಗಳ ನಡುವೆ ಡಿಕ್ಕಿಯಾಗಿ 6 ಜನ ಸಾವು
ಛತ್ತೀಸ್‌ಗಢದ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಮೃತರ ಕುಟುಂಬಗಳಿಗೆ 5 ಲಕ್ಷ ರೂ. ಮತ್ತು ಗಾಯಾಳುಗಳಿಗೆ 50,000 ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ. ಮೃತರ ಕುಟುಂಬಗಳಿಗೆ ಭಾರತೀಯ ರೈಲ್ವೆಯಿಂದ 10 ಲಕ್ಷ ರೂ.ಗಳವರೆಗೆ ಪರಿಹಾರ ಘೋಷಿಸಲಾಗಿದೆ. ಅಪಘಾತಕ್ಕೆ ನಿಖರವಾದ ಕಾರಣವನ್ನು ನಿರ್ಧರಿಸಲು ಮತ್ತು ಭವಿಷ್ಯದಲ್ಲಿ ಇಂತಹ ದುರಂತಗಳನ್ನು ತಪ್ಪಿಸಲು ಕ್ರಮಗಳನ್ನು ತೆಗೆದುಕೊಳ್ಳಲು ರೈಲ್ವೆ ಸುರಕ್ಷತಾ ಆಯುಕ್ತರಿಂದ ವಿವರವಾದ ತನಿಖೆಗೆ ಆದೇಶಿಸಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




