AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಲ್ಕಿಸ್ ಬಾನು ಪ್ರಕರಣದ ದೋಷಿಗಳು ಜ.21ರೊಳಗೆ ಶರಣಾಗಲು ಸುಪ್ರೀಂಕೋರ್ಟ್ ಆದೇಶ

Bilkis Bano Case: 2002ರ ಗೋಧ್ರಾ ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನು ಮೇಲೆ ಅತ್ಯಾಚಾರವೆಸಗಿ ಆಕೆಯ ಕುಟುಂಬವರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ 11 ಅಪರಾಧಿಗಳನ್ನು ಗುಜರಾತ್ ಸರ್ಕಾರ ಎರಡು ವರ್ಷಗಳ ಹಿಂದೆ ಸ್ವಾತಂತ್ರ್ಯ ದಿನದಂದು ಬಿಡುಗಡೆ ಮಾಡಿತ್ತು. ಅವರ ಮುಂಚಿನ ಬಿಡುಗಡೆಯ ವಿರುದ್ಧದ ಮೇಲ್ಮನವಿಗಳನ್ನು ಈ ತಿಂಗಳ ಆರಂಭದಲ್ಲಿ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದ್ದು ಅಪರಾಧಿಗಳ ಬಿಡುಗಡೆಯನ್ನು ರದ್ದುಗೊಳಿಸಿತ್ತು.

ಬಿಲ್ಕಿಸ್ ಬಾನು ಪ್ರಕರಣದ ದೋಷಿಗಳು ಜ.21ರೊಳಗೆ ಶರಣಾಗಲು ಸುಪ್ರೀಂಕೋರ್ಟ್ ಆದೇಶ
ಬಿಲ್ಕಿಸ್ ಬಾನು ಅಪರಾಧಿಗಳು
ರಶ್ಮಿ ಕಲ್ಲಕಟ್ಟ
|

Updated on:Jan 19, 2024 | 2:32 PM

Share

ದೆಹಲಿ ಜನವರಿ 19: ಬಿಲ್ಕಿಸ್ ಬಾನು (Bilkis Bano Case) ಪ್ರಕರಣದ 11 ದೋಷಿಗಳು  ಅಧಿಕಾರಿಗಳ ಮುಂದೆ ಶರಣಾಗಲು ಮತ್ತು ಮತ್ತೆ ಜೈಲಿಗೆ ಹೋಗುವುದಕ್ಕೆ ಮತ್ತಷ್ಟು ಸಮಯ ಅನುಮತಿಸಬೇಕು ಎಂದು ಕೋರಿಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್ (Supreme Court) ಶುಕ್ರವಾರ ವಜಾಗೊಳಿಸಿದೆ. ನ್ಯಾಯಮೂರ್ತಿ ಬಿ.ವಿ.ನಾಗರತ್ನ (Justice BV Nagarathna) ನೇತೃತ್ವದ ಪೀಠವು ಅರ್ಜಿಗಳಿಗೆ ಅರ್ಹತೆಯ ಕೊರತೆಯಿದೆ ಮತ್ತು ಜನವರಿ 21(ಭಾನುವಾರದೊಳಗೆ) ಜೈಲು ಅಧಿಕಾರಿಗಳ ಮುಂದೆ ಶರಣಾಗುವಂತೆ ಆದೇಶಿಸಿದೆ.’ಅನಾರೋಗ್ಯ’, ‘ಚಳಿಗಾಲದ ಬೆಳೆಗಳ ಕೊಯ್ಲು’ ಮತ್ತು ‘ಮಗನ ಮದುವೆ’ ಕಾರಣ ನೀಡಿ ಅಪರಾಧಿಗಳು ಸಮಯವನ್ನು ವಿಸ್ತರಿಸಲು ಕೋರಿದ್ದಾರೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

2002ರ ಗೋಧ್ರಾ ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನು ಮೇಲೆ ಅತ್ಯಾಚಾರವೆಸಗಿ ಆಕೆಯ ಕುಟುಂಬವರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ 11 ದೋಷಿಗಳನ್ನು  ಗುಜರಾತ್ ಸರ್ಕಾರ ಎರಡು ವರ್ಷಗಳ ಹಿಂದೆ ಸ್ವಾತಂತ್ರ್ಯ ದಿನದಂದು ಬಿಡುಗಡೆ ಮಾಡಿತ್ತು. ಅವರ ಮುಂಚಿನ ಬಿಡುಗಡೆಯ ವಿರುದ್ಧದ ಮೇಲ್ಮನವಿಗಳನ್ನು ಈ ತಿಂಗಳ ಆರಂಭದಲ್ಲಿ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದ್ದು ಅಪರಾಧಿಗಳ ಬಿಡುಗಡೆಯನ್ನು ರದ್ದುಗೊಳಿಸಿತ್ತು.

ಗೋಧ್ರಾ ಗಲಭೆ ವೇಳೆ ಬಿಲ್ಕಿಸ್ ಬಾನು ಮೇಲೆ ಸಾಮಾೂಹಿಕ ಅತ್ಯಾಚಾರ ನಡೆಸಿ ಅವರ ಕುಟುಂಬ ಏಳು ಮಂದಿಯನ್ನು ಹತ್ಯೆಗೈದ ಪ್ರಕರಣದಲ್ಲಿ 11 ಮಂದಿ ಅಪರಾಧಿಗಳಿಗೆ ಕ್ಷಮಾದಾನ ನೀಡುವ ಪ್ರಕ್ರಿಯೆಯಲ್ಲಿ ಗುಜರಾತ್ ಸರ್ಕಾರ ತನ್ನ ವಿವೇಚನಾ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಸುಪ್ರೀಂಕೋರ್ಟ್ ಗುಜರಾತ್ ಸರ್ಕಾರವನ್ನು ಟೀಕಿಸಿತ್ತು.  ಮಹಿಳೆಯ ನಂಬಿಕೆಗಳು ಏನೇ ಇದ್ದಿರಲಿ, ಆಕೆಯ ಮತ ಯಾವುದೇ ಆಗಿರಲಿ, ‘ಮಹಿಳೆಯರನ್ನು ಗುರಿಯಾಗಿಸಿ ಹೇಯ ಅಪರಾಧ ಎಸಗಿದವರು ಕ್ಷಮಾದಾನಕ್ಕೆ ಅರ್ಹರೇ’ ಎಂದು   ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಉಜ್ಜಲ್ ಭೂಯಾನ್ ಅವರು ಇದ್ದ ವಿಭಾಗೀಯ ಪೀಠ ಕೇಳಿದ್ದು, ಗುಜರಾತ್ ಸರ್ಕಾರವು ಸರಿಯಾದ ಆಲೋಚನೆಯನ್ನೇ ಮಾಡದೆ ಅವರಿಗೆ ಕ್ಷಮಾದಾನ ನೀಡಿತ್ತು ಎಂದಿದೆ.

ಆಡಳಿತಾರೂಢ ಬಿಜೆಪಿಗೆ ಸಂಬಂಧ ಹೊಂದಿರುವ ವ್ಯಕ್ತಿಗಳನ್ನು ಒಳಗೊಂಡಿರುವ ಸಮಿತಿಯನ್ನು ಅನ್ನು ಸಂಪರ್ಕಿಸಿದ ನಂತರ ಗುಜರಾತ್ ಸರ್ಕಾರವು ಅಪರಾಧಿಗಳನ್ನು ಬಿಡುಗಡೆ ಮಾಡಿತ್ತು. ಸಮಿತಿಯು ಅತ್ಯಾಚಾರಿಗಳು ಮತ್ತು ಕೊಲೆಗಾರರನ್ನು “ಸುಸಂಸ್ಕೃತ ಬ್ರಾಹ್ಮಣರು” ಎಂದು ಘೋಷಿಸಿತು. ಈ ಸಮಿತಿ 1992 ರ ಕ್ಷಮಾದಾನ ನೀತಿಯನ್ನು ಉಲ್ಲೇಖಿಸಿ ಅವರ ಬಿಡುಗಡೆಗೆ ಶಿಫಾರಸು ಮಾಡಿತು, ನಂತರ ಅದನ್ನು ತಿದ್ದಿ ಬರೆಯಲಾಗಿದೆ.

ಇದನ್ನೂ ಓದಿ:  Bilkis Bano case ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣ: ಜೀವಾವಧಿ ಶಿಕ್ಷೆಗೊಳಗಾಗಿದ್ದ 11 ಅಪರಾಧಿಗಳ ಬಿಡುಗಡೆ

ಜೈಲಿನಿಂದ ಹೊರಬಂದ ವ್ಯಕ್ತಿಗಳಿಗೆ ಹೂವಿನ ಹಾರ ಹಾಕಿ ಸ್ವಾಗತ ನೀಡಲಾಯಿತು.ಇವರು ಬಿಜೆಪಿ ಸಂಸದ ಮತ್ತು ಶಾಸಕರೊಂದಿಗೆ ವೇದಿಕೆ ಹಂಚಿಕೊಂಡಿರುವುದು ಕಂಡುಬಂದಿದೆ. ಬಿಲ್ಕಿಸ್ ಬಾನು ಅತ್ಯಾಚಾರಕ್ಕೊಳಗಾದಾಗ ಆಕೆಗೆ 21 ವರ್ಷ ಮತ್ತು ಐದು ತಿಂಗಳ ಗರ್ಭಿಣಿಯಾಗಿದ್ದರು ಗಲಭೆಯಲ್ಲಿ ಹತ್ಯೆಯಾದ ಏಳು ಕುಟುಂಬದ ಸದಸ್ಯರಲ್ಲಿ ಆಕೆಯ ಮೂರು ವರ್ಷದ ಮಗಳೂ ಇದ್ದಳು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:57 pm, Fri, 19 January 24

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು