ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣ: ಗುಜರಾತ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಸುಪ್ರೀಂ
ಬಿಲ್ಕಿಸ್ ಬಾನು ಅತ್ಯಾಚಾರಿಗಳ ಬಿಡುಗಡೆಗೆ ಸಂಬಂಧಿಸಿದಂತೆ ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ದೆಹಲಿ: ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ 11 ಅಪರಾಧಿಗಳ ಬಿಡುಗಡೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುಜರಾತ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 11 ಅಪರಾಧಿಗಳಿಗೆ ಗುಜರಾತ್ ಸರ್ಕಾರ ವಿನಾಯತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ.
ಸಿಪಿಐ(ಎಂ) ಪಾಲಿಟ್‌ಬ್ಯುರೊ ಸದಸ್ಯೆ ಸುಭಾಷಿಣಿ ಅಲಿ, ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಮತ್ತು ಮಹಿಳಾ ಹಕ್ಕುಗಳ ಕಾರ್ಯಕರ್ತರು ಸಲ್ಲಿಸಿರುವ ಅರ್ಜಿಗಳನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಮಂಗಳವಾರ ಒಪ್ಪಿಗೆ ನೀಡಿದೆ.
Published On - 12:42 pm, Thu, 25 August 22