ತಮಿಳುನಾಡು: ಸರಕಾರಿ ಶಾಲೆಯ ಮಕ್ಕಳಿಗೆ ವೃತ್ತಿಪರ ಶಿಕ್ಷಣದಲ್ಲಿ 7.5% ಮೀಸಲಾತಿ ನೀಡುವ ಮಸೂದೆ ಮಂಡಿಸಿದ ಸರ್ಕಾರ

ತಮಿಳುನಾಡಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ವೃತ್ತಿಪರ ಶಿಕ್ಷಣದಲ್ಲಿ ಮತ್ತಷ್ಟು ಸಕ್ರಿಯರಾಗಿ ತೊಡಗಿಕೊಳ್ಳಲು ಪ್ರೋತ್ಸಾಹಿಸುವ ಸಲುವಾಗಿ ಅಲ್ಲಿನ ಸರ್ಕಾರ ಮೀಸಲಾತಿಯನ್ನು ವಿಧಾನಸಭೆಯಲ್ಲಿ ಮಂಡಿಸಿದೆ. ವಿರೋಧ ಪಕ್ಷವಾದ ಎಐಡಿಎಂಕೆ ಇದನ್ನು ಸ್ವಾಗತಿಸಿದ್ದು, ಮಸೂದೆ ವಿಧಾನಸಭೆಯಲ್ಲಿ ಅವಿರೋಧವಾಗಿ ಅಂಗೀಕಾರವಾಗುವ ನಿರೀಕ್ಷೆ ಇದೆ.

ತಮಿಳುನಾಡು: ಸರಕಾರಿ ಶಾಲೆಯ ಮಕ್ಕಳಿಗೆ ವೃತ್ತಿಪರ ಶಿಕ್ಷಣದಲ್ಲಿ 7.5% ಮೀಸಲಾತಿ ನೀಡುವ ಮಸೂದೆ ಮಂಡಿಸಿದ ಸರ್ಕಾರ
ತಮಿಳುನಾಡು ಸಿ.ಎಂ ಎಂ.ಕೆ.ಸ್ಟಾಲಿನ್
Follow us
TV9 Web
| Updated By: shivaprasad.hs

Updated on: Aug 26, 2021 | 2:14 PM

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದ ಮಕ್ಕಳಿಗೆ 7.5% ಮೀಸಲಾತಿ ನೀಡುವ ನೂತನ ಮಸೂದೆಯನ್ನು ಸದನದ ಮುಂದೆ ಮಂಡಿಸಿದ್ದಾರೆ. ವೃತ್ತಿಪರ ಕೋರ್ಸ್​ಗಳಾದ ಇಂಜಿನಿಯರಿಂಗ್, ಕೃಷಿ, ಮೀನುಗಾರಿಕೆ ಹಾಗೂ ಕಾನೂನು ವಿಷಯಗಳನ್ನು ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಈ ನಿಯಮವನ್ನು ರೂಪಿಸಲಾಗಿದೆ. ಈ ತಿಂಗಳ ಪ್ರಾರಂಭದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಈ ವಿಷಯವನ್ನು ಘೋಷಿಸಿದ್ದ ಸ್ಟಾಲಿನ್, ಬಜೆಟ್ ಅಧಿವೇಶನದಲ್ಲಿ ನೂತನ ಮಸೂದೆಯನ್ನು ಮಂಡಿಸಲಾಗುವುದು ಎಂದು ತಿಳಿಸಿದ್ದರು. ಅದರಂತೆ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ.

ಮಸೂದೆಯನ್ನು ಮಂಡಿಸಿದ ನಂತರ ವಿಧಾನಸಭೆಯಲ್ಲಿ ಮಾತನಾಡಿದ ಸ್ಟಾಲಿನ್, ಬಡ ಕುಟುಂಬದ ಹಿನ್ನೆಲೆ ಮತ್ತು ಅರಿವಿನ ಕೊರತೆಯಿಂದಾಗಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವುದು ಕಡಿಮೆ. ಅವರಿಗೆ ಉಪಯೋಗವಾಗುವಂತೆ ಈ ಮಸೂದೆ ರೂಪಿಸಲಾಗಿದೆ ಎಂದಿದ್ದಾರೆ. 2006 ರಲ್ಲಿ ಅಂದಿನ ಡಿಎಂಕೆ ಸರ್ಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪರೀಕ್ಷೆಯನ್ನು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರದ್ದುಗೊಳಿಸಿದ್ದನ್ನು ನೆನಪಿಸಿಕೊಂಡ ಸ್ಟಾಲಿನ್, “ಸರ್ಕಾರಿ ಕೋರ್ಸ್‌ಗಳಲ್ಲಿ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಅನೇಕ ಸಮಸ್ಯೆಗಳಿವೆ. ಅವರು ಖಾಸಗಿ ಶಾಲೆಗಳ ವಿದ್ಯಾರ್ಥಿಗಳೊಂದಿಗೆ ಸ್ಪರ್ಧಿಸಬೇಕು” ಎಂದು ಸ್ಟಾಲಿನ್ ಹೇಳಿದರು.

ವಿರೋಧ ಪಕ್ಷ ನಾಯಕ ಎಡಪ್ಪಾಡಿ.ಕೆ. ಪಳನಿಸ್ವಾಮಿ ಮಸೂದೆಯನ್ನು ಸ್ವಾಗತಿಸಿದ್ದು, ಎಐಎಡಿಎಂಕೆ ಪಕ್ಷದ ಸದಸ್ಯರು ಮಸೂದೆಗೆ ಒಪ್ಪಿಗೆ ಸೂಚಿಸಿದ್ದಾರೆ. ಆದ್ದರಿಂದ ವಿಧೇಯಕವು ಸದನದಲ್ಲಿ ಸರ್ವಾನುಮತದಿಂದ ಅಂಗೀಕಾರವಾಗುವ ನಿರೀಕ್ಷೆಯಿದೆ. ಡಿಎಂಕೆ ಸರ್ಕಾರದಿಂದ ಜೂನ್ 15 ರಂದು ರಚನೆಯಾದ ನಿವೃತ್ತ ನ್ಯಾಯಮೂರ್ತಿ ಡಿ.ಮುರುಗೇಶನ್ ಸಮಿತಿಯ ಶಿಫಾರಸಿನ ಆಧಾರದ ಮೇಲೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ವಿಶೇಷ ಮೀಸಲಾತಿ ನೀಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ವೃತ್ತಿಪರ ಕೋರ್ಸ್‌ಗಳಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಪ್ರಾತಿನಿಧ್ಯ ಕಡಿಮೆ ಇರುವ ಕಾರಣಗಳನ್ನು ಸಮಿತಿಯು ಪರಿಶೀಲಿಸಿ, ಸಮಸ್ಯೆಯ ಪರಿಹಾರಕ್ಕಾಗಿ ಕೆಲವು ಕ್ರಮಗಳನ್ನು ಶಿಫಾರಸು ಮಾಡಿತ್ತು.

ಆಯೋಗದ ವರದಿಗಳನ್ನು ಜುಲೈ 21 ರಂದು ಸಲ್ಲಿಸಲಾಗಿದ್ದು, ವೃತ್ತಿಪರ ಕೋರ್ಸ್‌ಗಳ ಪ್ರವೇಶದಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲು ಆಯೋಗ ವರದಿಯಲ್ಲಿ ತಿಳಿಸಿತ್ತು. ಆಯೋಗದ ತಿಳಿಸಿದ್ದ ಪ್ರಕಾರ, ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ 10% ಕ್ಕಿಂತ ಅಧಿಕ ಕೋಟಾವನ್ನು ನೀಡಲು ಶಿಫಾರಸು ಮಾಡಿತ್ತು. ಆದಾಗ್ಯೂ, ವಿವಿಧ ಅಂಶಗಳನ್ನು ವಿಶ್ಲೇಷಿಸಿದ ನಂತರ ಸರ್ಕಾರವು 7.5% ಕೋಟಾವನ್ನು ಜಾರಿಗೆ ತರಲು ನಿರ್ಧರಿಸಿದೆ.

ಇದನ್ನೂ ಓದಿ:

ದೇಶದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿ ಆಗಬಹುದಾದ ಕರ್ನಾಟಕ ಮೂಲದ ನ್ಯಾ| ಬಿ.ವಿ.ನಾಗರತ್ನ ಪರಿಚಯ ಇಲ್ಲಿದೆ

ಕರ್ನಾಟಕ ರೈತರ ಮನವಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ

(Bill tabled in Tamil Nadu assembly to provide 7.5% reservation for government school students in Professional Courses)

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ