AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ಅಧಿಕಾರಿಗಳ ನೇಮಕ ಕುರಿತ ಮಸೂದೆ; ಇದು ಬಿಲ್ಡೋಜರ್ ಎಂದ ರಾಘವ್ ಚಡ್ಡಾ

ಅವರು ಭಾರತದ ಮುಖ್ಯ ನ್ಯಾಯಾಧೀಶರನ್ನು ಆಯ್ಕೆ ಸಮಿತಿಯಿಂದ ತೆಗೆದುಹಾಕಿದ್ದಾರೆ. ಅವರ ಬದಲಿಗೆ ಕ್ಯಾಬಿನೆಟ್ ಮಂತ್ರಿಯನ್ನು ನೇಮಿಸಿದ್ದಾರೆ. ಇದು ಸರ್ಕಾರಕ್ಕೆ ಎರಡು ಮತಗಳನ್ನು ನೀಡುತ್ತದೆ. ಆದ್ದರಿಂದ ಈ 2: 1 ಬಹುಮತದೊಂದಿಗೆ, ಅವರು ಯಾರನ್ನಾದರೂ ನೇಮಕ ಮಾಡಬಹುದು ಎಂದು ರಾಜ್ಯಸಭೆಯಲ್ಲಿ ಮಾತನಾಡಿದ ರಾಘವ್ ಚಡ್ಡಾ ಹೇಳಿದ್ದಾರೆ.

ಚುನಾವಣಾ ಅಧಿಕಾರಿಗಳ ನೇಮಕ ಕುರಿತ ಮಸೂದೆ; ಇದು ಬಿಲ್ಡೋಜರ್ ಎಂದ ರಾಘವ್ ಚಡ್ಡಾ
ರಾಘವ್ ಚಡ್ಡಾ
ರಶ್ಮಿ ಕಲ್ಲಕಟ್ಟ
|

Updated on: Dec 12, 2023 | 7:50 PM

Share

ದೆಹಲಿ ಡಿಸೆಂಬರ್ 12: ಪ್ರಮುಖ ಮೂವರು ಚುನಾವಣಾ ಅಧಿಕಾರಿಗಳ ನೇಮಕ ಕುರಿತ ವಿವಾದಾತ್ಮಕ ಮಸೂದೆಯನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷದ (AAP) ರಾಘವ್ ಚಡ್ಡಾ (Raghav Chandha) ಅವರು ಇಂದು ರಾಜ್ಯಸಭೆಯಲ್ಲಿ (Rajya sabha) ತೀವ್ರ ಪ್ರತಿಭಟನೆ ನಡೆಸಿದರು. ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ (ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರದ ಅವಧಿ) ಮಸೂದೆ, 2023 ರ ಮೇಲಿನ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಚಡ್ಡಾ, ಮಸೂದೆಯಲ್ಲಿ ಮಾಡಲಾದ ಬದಲಾವಣೆಗಳು ಬಿಜೆಪಿಗೆ ಈ ನಿರ್ಣಾಯಕ ಹುದ್ದೆಯಲ್ಲಿ ಯಾರನ್ನು ಬೇಕಾದರೂ ನೇಮಿಸಲು ಅನುವು ಮಾಡಿಕೊಡುತ್ತದೆ ಎಂದು ಹೇಳಿದರು.

“ಅವರು ಭಾರತದ ಮುಖ್ಯ ನ್ಯಾಯಾಧೀಶರನ್ನು ಆಯ್ಕೆ ಸಮಿತಿಯಿಂದ ತೆಗೆದುಹಾಕಿದ್ದಾರೆ. ಅವರ ಬದಲಿಗೆ ಕ್ಯಾಬಿನೆಟ್ ಮಂತ್ರಿಯನ್ನು ನೇಮಿಸಿದ್ದಾರೆ. ಇದು ಸರ್ಕಾರಕ್ಕೆ ಎರಡು ಮತಗಳನ್ನು ನೀಡುತ್ತದೆ. ಆದ್ದರಿಂದ ಈ 2: 1 ಬಹುಮತದೊಂದಿಗೆ, ಅವರು ಯಾರನ್ನಾದರೂ ನೇಮಕ ಮಾಡಬಹುದು, ಅವರು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಅವರನ್ನು ನೇಮಕ ಮಾಡಿದರೆ ಪರಿಸ್ಥಿತಿ ಊಹಿಸಿಕೊಳ್ಳಿ ಎಂದು ಚಡ್ಡಾ ಹೇಳಿದಾಗ ಸದನದಲ್ಲಿ ನಗುವಿನ ವಾತಾವಾರಣ.

“ಇದು ಮಸೂದೆಯಲ್ಲ, ಇದು ‘ಬಿಲ್ಡೋಜರ್’, ಇದು ಸುಪ್ರೀಂ ಕೋರ್ಟ್ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಮಾಡಿದ ಅವಮಾನ ಎಂದಿದ್ದಾರೆ ಚಡ್ಡಾ. ಸ್ವಲ್ಪ ಸಮಯದ ನಂತರ, ಮಸೂದೆಯನ್ನು ರಾಜ್ಯಸಭೆ ಅಂಗೀಕರಿಸಿತು.

ಮಸೂದೆಯ ಈ ನಿಬಂಧನೆಯ ವಿರುದ್ಧ ಪ್ರತಿಪಕ್ಷಗಳು ವಾದಿಸಿದ್ದು, ಇದು ಆಯ್ಕೆ ಪ್ರಕ್ರಿಯೆಯಲ್ಲಿ ಎಲ್ಲಾ ಸಮತೋಲನ ಮತ್ತು ಪಾರದರ್ಶಕತೆಯನ್ನು ಕೊನೆಗೊಳಿಸುತ್ತದೆ ಎಂದು ಹೇಳಿದೆ. ಈ ಬದಲಾವಣೆಯು ಸುಪ್ರೀಂ ಕೋರ್ಟ್ ಆದೇಶದ ಉಲ್ಲಂಘನೆಯಾಗಿದೆ ಎಂದು ವಿಪಕ್ಷ ವಾದಿಸಿದೆ.

ಇದನ್ನೂ ಓದಿ: Rajasthan New CM: ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್‌ಲಾಲ್ ಶರ್ಮಾ ಆಯ್ಕೆ

ಪ್ರಧಾನಮಂತ್ರಿ, ಭಾರತದ ಮುಖ್ಯ ನ್ಯಾಯಮೂರ್ತಿ ಮತ್ತು ವಿರೋಧ ಪಕ್ಷದ ನಾಯಕರ ತ್ರಿಸದಸ್ಯ ಸಮಿತಿಯು ಮುಖ್ಯ ಚುನಾವಣಾ ಆಯುಕ್ತ ಮತ್ತು ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವಂತೆ ಮಾರ್ಚ್‌ನಲ್ಲಿ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ವಿರೋಧ ಪಕ್ಷದ ನಾಯಕರ ಅನುಪಸ್ಥಿತಿಯಲ್ಲಿ, ಏಕೈಕ ದೊಡ್ಡ ವಿರೋಧ ಪಕ್ಷದ ಪ್ರತಿನಿಧಿ ಸಮಿತಿಯಲ್ಲಿರುತ್ತಾರೆ ಎಂದು ನ್ಯಾಯಾಲಯ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ