Biporjoy cyclone: ಬಿಪರ್​ಜಾಯ್​​ ಚಂಡಮಾರುತ ಆರ್ಭಟ; ಈ ರಾಜ್ಯಗಳಲ್ಲಿ ಮುಂದಿನ 4 ದಿನ ಭಾರಿ ಮಳೆ; ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

|

Updated on: Jun 10, 2023 | 12:26 PM

ಅರಬ್ಬಿ ಸಮುದ್ರದಲ್ಲಿ ಬಿಪರ್​ಜಾಯ್​​ ಚಂಡಮಾರುತದ ಆರ್ಭಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಉತ್ತರ-ಈಶಾನ್ಯದತ್ತ ಚಲಿಸುತ್ತಿದೆ. ಈ ಹಿನ್ನೆಲೆ ಮುಂದಿನ 4 ದಿನಗಳ ಕಾಲ ದಕ್ಷಿಣ ಭಾರತದಲ್ಲಿ ಭಾರಿ ಮಳೆ ಸಾಧ್ಯತೆ ಇದೆ.

Biporjoy cyclone: ಬಿಪರ್​ಜಾಯ್​​ ಚಂಡಮಾರುತ ಆರ್ಭಟ; ಈ ರಾಜ್ಯಗಳಲ್ಲಿ ಮುಂದಿನ 4 ದಿನ ಭಾರಿ ಮಳೆ; ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ
ಮಳೆ
Follow us on

ನವದೆಹಲಿ: ಅರಬ್ಬಿ ಸಮುದ್ರದಲ್ಲಿ (Arabian Sea) ಬಿಪರ್​ಜಾಯ್​​ ಚಂಡಮಾರುತದ (Biporjoy Cyclone) ಆರ್ಭಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಉತ್ತರ-ಈಶಾನ್ಯದತ್ತ ಚಲಿಸುತ್ತಿದೆ. ಈ ಹಿನ್ನೆಲೆ ಮುಂದಿನ 4 ದಿನಗಳ ಕಾಲ ದಕ್ಷಿಣ ಭಾರತದಲ್ಲಿ ಭಾರಿ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (India Meteorological Department) ಮುನ್ಸೂಚನೆ ನೀಡಿದೆ. ಕರ್ನಾಟಕ, ಕೇರಳದಲ್ಲಿ ಜೂನ್ 12ರವರೆಗೆ ಭಾರಿ ಮಳೆಯಾಗುವ ಸಂಭವಿದೆ. ಇನ್ನು ಲಕ್ಷದ್ವೀಪ, ಕೇರಳದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ಇದ್ದು, ಕೇರಳದ ಎಂಟು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟು, ಆಲಪ್ಪುಳಂ, ಇಡುಕ್ಕಿ, ಕೊಟ್ಟಾಯಂ, ಕೋಯಿಕ್ಕೋಡ್, ಕಣ್ಣೂರಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಗುಜರಾತ್​​ನ ಕರಾವಳಿ ಭಾಗದಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಗುಜರಾತ್​ ಬೀಚ್​​ಗಳಿಗೆ ಪ್ರವೇಶಿಸದಂತೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಅಲ್ಲದೇ ಮೀನುಗಾರರು ಕೂಡ ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ.

ಚಂಡಮಾರುತದ ಕಾರಣದಿಂದಾಗಿ ಕಠಿಣ ಹವಾಮಾನ ಮತ್ತು ಸಮುದ್ರದ ತೀರದಲ್ಲಿ ಮುಂದಿನ ಮೂರು-ನಾಲ್ಕು ದಿನ ಗಾಳಿಯ ವೇಗವು ಗಂಟೆಗೆ 135-145 ಕಿ.ಮೀ ರಿಂದ 160 ಕಿ.ಮೀ. ಇರಲಿದೆ. ಈ ಹಿನ್ನೆಲೆ ಕೇರಳ, ಕರ್ನಾಟಕ ಮತ್ತು ಲಕ್ಷದ್ವೀಪದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: Karnataka Rain: ಮುಳುಗುತ್ತಾ ಬೆಂಗಳೂರು? ದಾಖಲೆ ಮಳೆ ಮುನ್ಸೂಚನೆ ಇದ್ದರೂ ತಯಾರಾಗದ ಬಿಬಿಎಂಪಿ, ರಾಜಕಾಲುವೆ ಒತ್ತುವರಿ ತೆರವು ಬಾಕಿ

ಮುಂದಿನ ನಾಲ್ಕು ದಿನಗಳಲ್ಲಿ ಈಶಾನ್ಯ ಪ್ರದೇಶದಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಜೂನ್ 12 ಮತ್ತು 13 ರಂದು ಅಸ್ಸಾಂ ಮತ್ತು ಮೇಘಾಲಯ, ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಜೂನ್ 10 ಮತ್ತು 12 ರಂದು ಮಣಿಪುರ ಮತ್ತು ಮಿಜೋರಾಂನಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ ಎರಡು ದಿನಗಳಲ್ಲಿ ಕೇರಳ ಮತ್ತು ಕರಾವಳಿ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಮತ್ತು ಇಂದು ಲಕ್ಷದ್ವೀಪದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜೂನ್ 11 ರವರೆಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮತ್ತು ಉಪ-ಹಿಮಾಲಯನ್ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಭಾರೀ ಮಳೆ ನಿರೀಕ್ಷಿಸಲಾಗಿದೆ. ಮತ್ತೊಂದೆಡೆ, ಬಿಹಾರದ ಕೆಲವು ಭಾಗಗಳಲ್ಲಿ ಜೂನ್ 11 ರವರೆಗೆ ಬಿಸಿಗಾಳಿಯಿಂದ ತೀವ್ರ ಶಾಖದ ಅಲೆಗಳು ಮುಂದುವರಿಯುವ ಸಾಧ್ಯತೆಯಿದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ