Bird Flu: ಕೇರಳದಲ್ಲಿ ಹೆಚ್ಚಿದ ಹಕ್ಕಿ ಜ್ವರ; ಕೊಟ್ಟಾಯಂನಲ್ಲಿ 6,000ಕ್ಕೂ ಹೆಚ್ಚು ಪಕ್ಷಿಗಳ ಹತ್ಯೆ

| Updated By: ಸುಷ್ಮಾ ಚಕ್ರೆ

Updated on: Dec 25, 2022 | 1:26 PM

ಹಕ್ಕಿ ಜ್ವರ ಹರಡುತ್ತದೆ ಎಂಬ ಮುನ್ನೆಚ್ಚರಿಕೆಯಿಂದ ಕೇರಳದ ಕೊಟ್ಟಾಯಂ ಜಿಲ್ಲೆಯ 3 ಪ್ರತ್ಯೇಕ ಪಂಚಾಯತ್‌ಗಳಲ್ಲಿ 6,000ಕ್ಕೂ ಹೆಚ್ಚು ಪಕ್ಷಿಗಳನ್ನು ಕೊಲ್ಲಲಾಗಿದೆ.

Bird Flu: ಕೇರಳದಲ್ಲಿ ಹೆಚ್ಚಿದ ಹಕ್ಕಿ ಜ್ವರ; ಕೊಟ್ಟಾಯಂನಲ್ಲಿ 6,000ಕ್ಕೂ ಹೆಚ್ಚು ಪಕ್ಷಿಗಳ ಹತ್ಯೆ
ಹಕ್ಕಿ ಜ್ವರ
Follow us on

ಕೊಟ್ಟಾಯಂ: ಕೇರಳದ ಕೊಟ್ಟಾಯಂನಲ್ಲಿ (Kottayam) ಕಳೆದ ಕೆಲವು ದಿನಗಳಿಂದ ಹಕ್ಕಿ ಜ್ವರ (Bird Flu) ಕಾಣಿಸಿಕೊಂಡಿದ್ದು, ತೀವ್ರ ಆತಂಕವನ್ನು ಉಂಟುಮಾಡಿದೆ. ಹಕ್ಕಿ ಜ್ವರ ಹರಡುತ್ತದೆ ಎಂಬ ಮುನ್ನೆಚ್ಚರಿಕೆಯಿಂದ ಕೇರಳದ (Kerala) ಕೊಟ್ಟಾಯಂ ಜಿಲ್ಲೆಯ 3 ಪ್ರತ್ಯೇಕ ಪಂಚಾಯತ್‌ಗಳಲ್ಲಿ 6,000ಕ್ಕೂ ಹೆಚ್ಚು ಪಕ್ಷಿಗಳನ್ನು ಕೊಲ್ಲಲಾಗಿದೆ. ಕೊಟ್ಟಾಯಂ ಜಿಲ್ಲೆಯ ವೇಚೂರು, ನೀಂದೂರು ಮತ್ತು ಅರ್ಪೂಕರ ಪಂಚಾಯಿತಿ ವ್ಯಾಪ್ತಿಯಲ್ಲಿ ಶನಿವಾರ 6,017 ಪಕ್ಷಿಗಳು ಅವುಗಳಲ್ಲೂ ಹೆಚ್ಚಾಗಿ ಬಾತುಕೋಳಿಗಳನ್ನು ಹತ್ಯೆ ಮಾಡಲಾಗಿದೆ.

ಈ ಬಗ್ಗೆ ಕೊಟ್ಟಾಯಂ ಜಿಲ್ಲಾಡಳಿತ ಮಾಹಿತಿ ನೀಡಿದೆ. ಅಧಿಕೃತ ಮಾಹಿತಿಯ ಪ್ರಕಾರ, ವೇಚೂರಿನಲ್ಲಿ ಸುಮಾರು 133 ಬಾತುಕೋಳಿಗಳು ಮತ್ತು 156 ಕೋಳಿಗಳು, ನೀಂದೂರಿನಲ್ಲಿ 2,753 ಬಾತುಕೋಳಿಗಳು ಮತ್ತು ಅರ್ಪೂಕರದಲ್ಲಿ 2,975 ಬಾತುಕೋಳಿಗಳು ಸಾವನ್ನಪ್ಪಿವೆ ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ಮಹಾರಾಷ್ಟ್ರದ ಥಾಣೆಯಲ್ಲಿ ಹಕ್ಕಿ ಜ್ವರ ಭೀತಿ; ಕೋಳಿ ಫಾರಂನಲ್ಲಿ 25,000 ಕೋಳಿಗಳನ್ನು ಕೊಲ್ಲಲು ಆದೇಶ

ಲಕ್ಷದ್ವೀಪ ಆಡಳಿತವು ಇದೀಗ ಕೇರಳದಲ್ಲಿ ಹಕ್ಕಿಜ್ವರದ ಹರಡುವಿಕೆಯಿಂದಾಗಿ ದ್ವೀಪಗಳಿಗೆ ಕೋಳಿಯನ್ನು ಸಾಗಿಸುವುದನ್ನು ನಿಷೇಧಿಸಿದೆ. ಇಂದು ಮುಂಜಾನೆ, ರೈತರು ಕೊಳಗಳಲ್ಲಿ ಇಳಿದು ಬಾತುಕೋಳಿಗಳನ್ನು ಹಿಡಿದು ಅವುಗಳನ್ನು ಕೊಲ್ಲಲು ಗೊತ್ತುಪಡಿಸಿದ ಪ್ರದೇಶಕ್ಕೆ ತೆಗೆದುಕೊಂಡು ಹೋಗಿ, ಆ ಬಾತುಕೋಳಿಗಳನ್ನು ಆರೋಗ್ಯ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.

ಈ ವರ್ಷದ ಅಕ್ಟೋಬರ್ ಅಂತ್ಯದಲ್ಲಿ ಕೇರಳ ರಾಜ್ಯದ ಅಲಪ್ಪುಳ ಜಿಲ್ಲೆಯಲ್ಲಿ ಹಕ್ಕಿ ಜ್ವರ ವರದಿಯಾಗಿತ್ತು. ಹರಿಪಾಡು ಪುರಸಭೆಯಲ್ಲಿ ರೋಗ ಹರಡುವುದನ್ನು ತಡೆಯಲು ಕಾರ್ಯಾಚರಣೆ ನಡೆಸಲಾಗಿತ್ತು. ಭಾರತದಲ್ಲಿ, ಹಕ್ಕಿ ಜ್ವರ ಮುಖ್ಯವಾಗಿ ಸೆಪ್ಟೆಂಬರ್ ಮತ್ತು ಮಾರ್ಚ್ ನಡುವಿನ ಚಳಿಗಾಲದ ತಿಂಗಳುಗಳಲ್ಲಿ ಹೆಚ್ಚಾಗುತ್ತವೆ. ಈ ಸಂದರ್ಭದಲ್ಲಿ ದೇಶಕ್ಕೆ ಬರುವ ವಲಸೆ ಹಕ್ಕಿಗಳಿಂದ ಈ ರೋಗ ಹರಡುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ