ಮುಕುಲ್ ರಾಯ್ ನಂತರ ತೃಣಮೂಲ ಕಾಂಗ್ರೆಸ್ ಸೇರಿದ ಬಿಜೆಪಿ ಶಾಸಕ ತನ್ಮಯ್ ಘೋಷ್

Tanmay Ghosh: ಮಮತಾ ಬ್ಯಾನರ್ಜಿ ಕೈಗೊಂಡ ಬೃಹತ್ ಅಭಿವೃದ್ಧಿ ಮತ್ತು ಸಾಮಾಜಿಕ ಕಲ್ಯಾಣ ಯೋಜನೆಗಳ ಭಾಗವಾಗಿರಲು ನಾನು ಎಲ್ಲಾ ಪಕ್ಷಗಳ ಜನಪ್ರತಿನಿಧಿಗಳನ್ನು ಟಿಎಂಸಿಗೆ ಸೇರಲು ಆಹ್ವಾನಿಸುತ್ತೇನೆ. ಆಕೆಯ ಸಮರ್ಪಣೆ ಮತ್ತು ಕಾರ್ಯಕ್ಷಮತೆ ನನ್ನನ್ನು ಟಿಎಂಸಿ ಕಡೆಗೆ ಸೆಳೆಯಿತು ಎಂದು ಘೋಷ್ ಹೇಳಿದರು

ಮುಕುಲ್ ರಾಯ್ ನಂತರ ತೃಣಮೂಲ ಕಾಂಗ್ರೆಸ್ ಸೇರಿದ ಬಿಜೆಪಿ ಶಾಸಕ ತನ್ಮಯ್ ಘೋಷ್
ತನ್ಮಯ್ ಘೋಷ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Aug 30, 2021 | 6:25 PM

ಕೊಲ್ಕತ್ತಾ: ಮಾರ್ಚ್-ಏಪ್ರಿಲ್ ತಿಂಗಳಲ್ಲಿ ನಡೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಂಕುರಾ ಜಿಲ್ಲೆಯ ಬಿಷ್ಣುಪುರ ಸ್ಥಾನವನ್ನು ಗೆದ್ದ ತನ್ಮಯ್ ಘೋಷ್ ಇದೀಗ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಗೆ ಸೇರಿದ್ದಾರೆ. ಹಾಗಾಗಿ ವಿಧಾನಸಭೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಬಲವು ಸೋಮವಾರ 73 ಕ್ಕೆ ಕುಸಿಯಿತು. ಘೋಷ್ ಅವರು ಪಕ್ಷಾಂತರ ವಿರೋಧಿ ಕಾನೂನಿನ ಅಡಿಯಲ್ಲಿ ಕ್ರಮಗಳನ್ನು ತಪ್ಪಿಸಲು ವಿಧಾನಸಭೆಗೆ ರಾಜೀನಾಮೆ ನೀಡುತ್ತಾರೆಯೇ ಎಂಬುದರ ಕುರಿತು ನೇರ ಉತ್ತರ ನೀಡದಿದ್ದರೂ, ಅವರನ್ನು ಪಕ್ಷಕ್ಕೆ ಸೇರಿಸಿಕೊಂಡ ಶಿಕ್ಷಣ ಸಚಿವ ಬ್ರಾತ್ಯ ಬಸು, “ಎಲ್ಲವನ್ನೂ ನಿಯಮಗಳ ಪ್ರಕಾರ ಮಾಡಲಾಗುವುದು” ಎಂದು ಹೇಳಿದರು. ಮಮತಾ ಬ್ಯಾನರ್ಜಿ ಕೈಗೊಂಡ ಬೃಹತ್ ಅಭಿವೃದ್ಧಿ ಮತ್ತು ಸಾಮಾಜಿಕ ಕಲ್ಯಾಣ ಯೋಜನೆಗಳ ಭಾಗವಾಗಿರಲು ನಾನು ಎಲ್ಲಾ ಪಕ್ಷಗಳ ಜನಪ್ರತಿನಿಧಿಗಳನ್ನು ಟಿಎಂಸಿಗೆ ಸೇರಲು ಆಹ್ವಾನಿಸುತ್ತೇನೆ. ಆಕೆಯ ಸಮರ್ಪಣೆ ಮತ್ತು ಕಾರ್ಯಕ್ಷಮತೆ ನನ್ನನ್ನು ಟಿಎಂಸಿ ಕಡೆಗೆ ಸೆಳೆಯಿತು ಎಂದು ಘೋಷ್ ಹೇಳಿದರು. ಈ ವರ್ಷದ ಆರಂಭದಲ್ಲಿ ಬಿಜೆಪಿ 77 ಸ್ಥಾನಗಳನ್ನು ಗೆದ್ದ ನಂತರ ವಿರೋಧ ಪಕ್ಷದಿಂದ ಟಿಎಂಸಿಗೆ ಬಂದ ಎರಡನೇ ಶಾಸಕರಾಗಿದ್ದಾರೆ ಘೋಷ್.

ಘೋಷ್ ಮೊದಲು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಮುಕುಲ್ ರಾಯ್ ಅವರು ಜೂನ್ 11 ರಂದು ಟಿಎಂಸಿಗೆ ಮರಳಿದರು. ಆದರೆ ಕೃಷ್ಣನಗರ ಉತ್ತರದಿಂದ ಶಾಸಕರು ಈವರೆಗೆ ಬಿಜೆಪಿಗೆ ರಾಜೀನಾಮೆ ನೀಡಿಲ್ಲ. ಅವರನ್ನು ವಿಧಾನಸಭೆಯ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಪಕ್ಷಾಂತರ ನಿಷೇಧ ಕಾನೂನಿನ ಅಡಿಯಲ್ಲಿ ಬಿಜೆಪಿ ಅವರನ್ನು ಅನರ್ಹಗೊಳಿಸಲು ಕೋರಿದೆ.

ಈ ಹಿಂದೆ ಇತರ ಇಬ್ಬರು ಬಿಜೆಪಿ ಶಾಸಕರು ಪ್ರಮಾಣವಚನ ಸ್ವೀಕರಿಸಲಿಲ್ಲ. ಆದರೆ ತಮ್ಮ ಲೋಕಸಭಾ ಸ್ಥಾನಗಳನ್ನು ಉಳಿಸಿಕೊಳ್ಳಲು ರಾಜೀನಾಮೆ ನೀಡಿದ್ದು 294 ಸದಸ್ಯರ ವಿಧಾನಸಭೆಯಲ್ಲಿ ಪಕ್ಷದ ಸಂಖ್ಯೆಯನ್ನು 75 ಕ್ಕೆ ಇಳಿಸಲು ಕಾರಣವಾದರು.

ಟಿಎಂಸಿ 213 ಸ್ಥಾನಗಳನ್ನು ಪಡೆದುಕೊಂಡಿದೆ. ಚುನಾವಣೆಗೆ ಮುನ್ನ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಇಬ್ಬರು ಅಭ್ಯರ್ಥಿಗಳು ಮೃತಪಟ್ಟಿದ್ದರಿಂದ 292 ಸ್ಥಾನಗಳಲ್ಲಿ ಮತದಾನ ನಡೆಯಿತು. ಎಡ ಮತ್ತು ಕಾಂಗ್ರೆಸ್ ಯಾವುದೇ ಸ್ಥಾನವನ್ನು ಗೆಲ್ಲಲು ಸಾಧ್ಯವಾಗಲಿಲ್ಲ.

ಬಂಗಾಳದಲ್ಲಿ ಬಿಜೆಪಿಗೆ ತಳಮಟ್ಟದಲ್ಲಿ ಯಾವುದೇ ನೆಲೆಯಿಲ್ಲ. ಎಲ್ಲವೂ ಮೇಲ್ನೋಟಕ್ಕೆ ಕಾಣಿಸುವಂತದ್ದು ಮಾತ್ರ. ಅದು ಎಂದಿಗೂ 200 ಸ್ಥಾನಗಳನ್ನು ಗೆಲ್ಲಲು ಸಾಧ್ಯವಿಲ್ಲ. ನಾಯಕರು ಜೋರಾಗಿ ಶಬ್ದ ಮಾಡುತ್ತಿದ್ದರು. ಗೆದ್ದವರು ತಮ್ಮ ಸ್ವಂತ ಶಕ್ತಿ ಮತ್ತು ವರ್ಚಸ್ಸಿನಿಂದಾಗಿ ಗೆದ್ದಿದ್ದಾರೆ ಎಂದು ಘೋಷ್ ಹೇಳಿದರು. ಘೋಷ್ ಅವರ ಅನುಪಸ್ಥಿತಿಯಿಂದ ಬಿಜೆಪಿಗೆ ಯಾವುದೇ ವ್ಯತ್ಯಾಸವಾಗುವುದಿಲ್ಲ ಮತ್ತು ಪಕ್ಷವು ಪಕ್ಷಾಂತರದ ವಿರುದ್ಧ ಕಾನೂನಿನ ಅಡಿಯಲ್ಲಿ ಕ್ರಮವನ್ನು ತೆಗೆದುಕೊಳ್ಳುತ್ತದೆ ಎಂದು ಬಂಗಾಳ ಬಿಜೆಪಿಯ ಮುಖ್ಯ ವಕ್ತಾರ ಸಮೀಕ್ ಭಟ್ಟಾಚಾರ್ಯ ಹೇಳಿದರು.

ಇದನ್ನೂ ಓದಿ: Tomato Rate: ಬಹುತೇಕ ರಾಜ್ಯಗಳಲ್ಲಿ ಟೊಮೆಟೊ ಬೆಲೆ ಅಪ್ಪಚ್ಚಿ; ಕೇಜಿಗೆ 4 ರೂಪಾಯಿಯಂತೆ ಪಾತಾಳ ತಲುಪಿದ ದರ

ಇದನ್ನೂ ಓದಿ: ಹಳ್ಳಿಗಳನ್ನು ನಿರ್ಲಕ್ಷಿಸಿದ್ದು ದೊಡ್ಡ ತಪ್ಪಾಯ್ತು: ತಾಲಿಬಾನ್​ಗೆ ಶಕ್ತಿ ತುಂಬಿದ್ದು ಅಫ್ಘಾನ್ ಸರ್ಕಾರದ ತಪ್ಪು ಕೃಷಿ ನೀತಿಗಳು

(Bishnupur BJP MLA Tanmay Ghosh joins Trinamool Congress)

ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ