ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಬಿಜೆಪಿ ಮತ್ತು ಇತರ ವಿಪಕ್ಷಗಳ ಒತ್ತಾಯ

Parambir Singh Letter: ಬಿಜೆಪಿ ಸಂಸದ ನಾರಾಯಣ್ ರಾಣೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದಿದ್ದು, ಪೊಲೀಸ್ ಅಧಿಕಾರಿ ಸಚಿನ್ ವಾಜೆ ಬಳಿ ಮನ್​ಸುಖ್ ಹಿರೇನ್ ಅವರ ಹತ್ಯೆ ಮಾಡಲು ಸೂಚನೆ ನೀಡಲಾಗಿತ್ತು ಎಂದು ಆರೋಪಿಸಿದ್ದಾರೆ. 

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಬಿಜೆಪಿ ಮತ್ತು ಇತರ ವಿಪಕ್ಷಗಳ ಒತ್ತಾಯ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​​ ಠಾಕ್ರೆ
Follow us
guruganesh bhat
| Updated By: ಸಾಧು ಶ್ರೀನಾಥ್​

Updated on: Mar 22, 2021 | 12:34 PM

ಮುಂಬೈ: ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ಮೇಲೆ ಕೇಳಿಬಂದ 100 ಕೋಟಿ ರೂಪಾಯಿ ವಸೂಲಿ ಆರೋಪದ ಬೆನ್ನಲ್ಲೇ ಬಿಜೆಪಿ ಮತ್ತು ಇತರ ಪ್ರತಿಪಕ್ಷಗಳು ಮಹಾರಾಷ್ಟ್ರ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಹೇರಲು ರಾಜ್ಯಪಾಲರನ್ನು ಆಗ್ರಹಿಸಿವೆ. ಬಿಜೆಪಿ ನಾಯಕ ಸುಧೀರ್ ಮುಂಗಂಟಿವಾರ, ರಾಜ್ಯಪಾಲರನ್ನು ಭೇಟಿಯಾಗಿ ರಾಷ್ಟ್ರಪತಿಗಳಿಗೆ ಬಳಿ ಮಹಾರಾಷ್ಟ್ರ ಸರ್ಕಾರವನ್ನು ವಜಾಗೊಳಿಸುವಂತೆ ಸಲಹೆ ನೀಡಬೇಕೆಂದು ಮನವಿ ಮಾಡುವುದಾಗಿ ತಿಳಿಸಿದ್ದಾರೆ. ಅಲ್ಲದೇ, ಬಿಜೆಪಿ ಸಂಸದ ನಾರಾಯಣ್ ರಾಣೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದಿದ್ದು, ಪೊಲೀಸ್ ಅಧಿಕಾರಿ ಸಚಿನ್ ವಾಜೆ ಬಳಿ ಮನ್​ಸುಖ್ ಹಿರೇನ್ ಅವರ ಹತ್ಯೆ ಮಾಡಲು ಸೂಚನೆ ನೀಡಲಾಗಿತ್ತು ಎಂದು ಆರೋಪಿಸಿದ್ದಾರೆ. 

ವಂಚಿತ್ ಬಹುಜನ್ ಅಘಾಡಿಯ ನಾಯಕ ಅವರು ಸಹ ಮಹಾರಾಷ್ಟ್ರದಲ್ಲಿ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸುವಂತೆ ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಮಾಡುವುದಾಗಿ ತಿಳಿಸಿದ್ದಾರೆ.  ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ರಾಮ್​ದಾಸ್ ಅಠಾವಳೆ, ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದು ಮಹಾರಾಷ್ಟ್ರ ಸರ್ಕಾರವನ್ನು ವಜಾಗೊಳಿಸುವಂತೆ ಪತ್ರ ಬರೆದು ಮನವಿ ಮಾಡುವುದಾಗಿ ತಿಳಿಸಿದ್ದಾರೆ.

ಸರ್ಕಾರದ ಮೇಲೆ ಕೊಂಚವೂ ದುಷ್ಪರಿಣಾಮ ಬೀರಲ್ಲ; ಶರದ್ ಪವಾರ್

ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ಮೇಲೆ ಕೇಳಿಬಂದಿರುವ ಭ್ರಷ್ಟಾಚಾರ ಆರೋಪದಿಂದ ಮಹಾರಾಷ್ಟ್ರ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ನಿನ್ನೆ ಎನ್​ಸಿಪಿ ವರಿಷ್ಠ ಶರದ್ ಪವಾರ್ ಸ್ಪಷ್ಟಪಡಿಸಿದ್ದರು. ಸಚಿನ್ ವಾಜೆ ಮೇಲೆ ಪ್ರತಿ ತಿಂಗಳು 100 ಕೋಟಿ ವಸೂಲು ಮಾಡುವಂತೆ ಒತ್ತಡ ಹೇರಿದ್ದರು ಎಂಬ ಆರೋಪದ ಕುರಿತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಯಾವುದೇ ರೀತಿಯ ತನಿಖೆಯನ್ನು ನಡೆಸಲು ಸ್ವಾತಂತ್ರ್ಯ ಹೊಂದಿದ್ದಾರೆ ಎಂದು ಶರದ್ ಪವಾರ್ ತಿಳಿಸಿದ್ದರು. ಈ ಮೂಲಕ ಶಿವಸೇನೆ- ಎನ್​ಸಿಪಿ ದೋಸ್ತಿ ಸರ್ಕಾರವನ್ನು ಈ ಪ್ರಕರಣದಲ್ಲಿ ಬಲಿ ಕೊಡುವುದಿಲ್ಲ ಎಂಬ ಸೂಚನೆ ತಿಳಿಸಿದ್ದರು.

ಇನ್ನೊಂದು ಬೆಳವಣಿಗೆಯಲ್ಲಿ ಮಹಾರಾಷ್ಟ್ರ ನವ ನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ, ಗೃಹ ಸಚಿವ ಅನಿಲ್ ದೇಶ್​ಮುಖ್ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ. ಮುಕೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ಇರಿಸಿದವರು ನಿಜವಾಗಿಯೂ ಯಾರು ಎಂಬುದನ್ನು ಕೇಂದ್ರ ಸರ್ಕಾರವೇ ತನಿಖೆ ನಡೆಸಬೇಕು ಎಂದು ರಾಜ್ ಠಾಕ್ರೆ ಆಗ್ರಹಿಸಿದ್ದಾರೆ. ಅಲ್ಲದೇ ಹಲವು ಬಿಜೆಪಿ ನಾಯಕರು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಗೃಹ ಸಚಿವ ಅನಿಲ್ ದೇಶ್​ಮುಖ್ ವಿರುದ್ಧ ಪತ್ರ ಬರೆದಿದ್ದಾಗಿ ಪರಮ್​ವೀರ್ ಸಿಂಗ್ ಖಚಿತಪಡಿಸಿದ್ದಾರೆ. ಅನಿಲ್ ದೇಶ್​ಮುಖ್ ಮುಂಬೈನ ಬಾರ್ ಮತ್ತು ರೆಸ್ಟೊರೆಂಟ್​ಗಳಿಂದ 100 ಕೋಟಿ ಹಣವನ್ನು ವಸೂಲು ಮಾಡಬೇಕೆಂದು ಸಸ್ಪೆಂಡ್ ಆಗಿರುವ ಪೊಲಿಸ್ ಅಧಿಕಾರಿ ಸಚಿನ್ ವಾಜೆ ಮೇಲೆ ಒತ್ತಡ ಹೇರಿದ್ದರು ಎಂದು ಪರಮ್​ವೀರ್ ಸಿಂಗ್ ಪತ್ರದಲ್ಲಿ ಉಲ್ಲೇಖಿಸಿದ್ದರು. ನಂತರ ತಡರಾತ್ರಿ ಮಹಾರಾಷ್ಟ್ರ ಸರ್ಕಾರ ಮತ್ತು ಶಿವಸೇನೆ ‘ಅದು ಪರಮ್​ವೀರ್ ಸಿಂಗ್ ಬರೆದ ಪತ್ರವಲ್ಲ. ಪತ್ರದ ಮೂಲದ ಕುರಿತು ಅಧಿಕೃತತೆಯಿಲ್ಲ’ ಎಂದು ಹೇಳಿತ್ತು. ಆದರೆ ಇಂದು (ಮಾರ್ಚ್ 21) ಬೆಳಗ್ಗೆ ಪರಮ್​ವೀರ್ ಸಿಂಗ್ ಸ್ವತಃ ತಾವೇ ಪತ್ರ ಬರೆದಿದ್ದಾಗಿ ಖಚಿತಪಡಿಸಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕಚೇರಿಗೆ ಸಹಿ ಮಾಡಿದ ಪತ್ರವನ್ನು ಕಳಿಸಿದ್ದಾಗಿ ಅವರು ತಿಳಿಸಿದ್ದಾರೆ.

ಶಿವಸೇನೆಯ ಉದ್ಧವ್ ಠಾಕ್ರೆ  ಮಹಾರಾಷ್ಟ್ರದ ಮುಖ್ಯಮಂತ್ರಿಯಾದರೂ ಮೈತ್ರಿಕೂಟದ ಎನ್​ಸಿಪಿ ಪಕ್ಷದ ಅನಿಲ್ ದೇಶ್​ಮುಖ್ ಗೃಹ ಸಚಿವರಾಗಿದ್ದಾರೆ.  ಸರ್ಕಾರದ ಚುಕ್ಕಾಣಿಯಲ್ಲಿ ಕುಳಿತಿರುವ ಇಬ್ಬರ ನಡುವೆ ಅಭಿಪ್ರಾಯ ಬೇಧ, ಸಣ್ಣಪುಟ್ಟ ವೈಮನಸ್ಸು ಉದ್ಭವಿಸಿದ ಉದಾಹರಣೆಗಳಿವೆ. ಗೃಹ ಸಚಿವ ಅನಿಲ್ ದೇಶ್​ಮುಖ್ ಮೇಲೆ ಪರಮ್​ವೀರ್ ಸಿಂಗ್ ಮಾಡಿರುವ ಪ್ರತಿ ತಿಂಗಳು 100 ಕೋಟಿ ಸಂಗ್ರಹಿಸುವ ಆರೋಪ ಮಹಾರಾಷ್ಟ್ರ ಸರ್ಕಾರಕ್ಕೆ ಕುತ್ತು ತರುವ ಶಕ್ತಿ ಹೊಂದಿದೆ. ಪರಮ್​ವೀರ್ ಸಿಂಗ್ ಗೃಹ ಸಚಿವರ ಮೇಲೇ ಆರೋಪ ಮಾಡಿರುವುದು ಶಿವಸೇನೆ-ಎನ್​ಸಿಪಿಯ ದೋಸ್ತಿ ಸರ್ಕಾರದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ.

ಇದನ್ನೂ ಓದಿ: ಗೃಹ ಸಚಿವ ಅನಿಲ್ ದೇಶ್​ಮುಖ್ ಪ್ರತಿ ತಿಂಗಳು 100 ಕೋಟಿ ಸಂಗ್ರಹಿಸಲು ಸಚಿನ್ ವಾಜೆ ಮೇಲೆ ಒತ್ತಡ ಹೇರಿದ್ದರು; ಉದ್ಧವ್ ಠಾಕ್ರೆಗೆ ಪತ್ರ ಬರೆದ ಪರಮ್​ವೀರ್ ಸಿಂಗ್

ಮುಂಬೈ ಪೊಲೀಸ್ ಕಮಿಷನರ್ ಹುದ್ದೆ ಕಳೆದುಕೊಂಡ ಪರಮ್​ವೀರ್ ಸಿಂಗ್​ ಮೈಮೇಲೆ ಎಳೆದುಕೊಂಡಿದ್ದ ವಿವಾದಗಳು ಒಂದೆರೆಡಲ್ಲ..

ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ