ಬಿಜೆಪಿ, ಮೋದಿಗೆ ರಾಹುಲ್ ಗಾಂಧಿಯ ಸರ್ಟಿಫಿಕೆಟ್ ಅಗತ್ಯವಿಲ್ಲ; ಕಿಶನ್ ರೆಡ್ಡಿ ಟೀಕೆ
ಪ್ರಧಾನಿ ಮೋದಿಯವರ ವಿಶ್ವಾಸವು 140 ಕೋಟಿ ಭಾರತೀಯರಿಂದ ಬಂದಿದೆ. ಆದರೆ, ರಾಹುಲ್ ಗಾಂಧಿಯ ವಿಶ್ವಾಸವು ಭಾರತ ವಿರೋಧಿ ಚಟುವಟಿಕೆಗಳಿಂದ ಬಂದಿದೆ ಎಂದು ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಹುಲ್ ಗಾಂಧಿಯವರ ಪ್ರಚಾರದ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ್ದಾರೆ.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣಾ ರ್ಯಾಲಿ ನಡೆಸಿರುವ ಕಾಂಗ್ರೆಸ್ ನಾಯಕ ಹಾಗೂ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬಿಜೆಪಿ, ಆರ್‌ಎಸ್‌ಎಸ್ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ ರಾಹುಲ್ ಗಾಂಧಿ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. ಕಳೆದ 3 ಚುನಾವಣೆಗಳಲ್ಲಿ ರಾಹುಲ್ ಗಾಂಧಿಯವರ ಪಕ್ಷದ ಒಟ್ಟು ಮೊತ್ತವು 2024ರ ಲೋಕಸಭೆಯೊಂದರ ಬಿಜೆಪಿಯ ಲೆಕ್ಕಾಚಾರವನ್ನು ದಾಟಲು ಸಾಧ್ಯವಾಗಲಿಲ್ಲ ಎಂದು ಲೇವಡಿ ಮಾಡಿದ್ದಾರೆ.
ಬಿಜೆಪಿ ಮತ್ತು ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಅವರ ಪ್ರಮಾಣಪತ್ರಗಳ ಅಗತ್ಯವಿಲ್ಲ. ಏಕೆಂದರೆ ಭಾರತದ ಜನರು ಮೋದಿಯ ಈ ಹಿಂದಿನ ಕೆಲಸ ಮತ್ತು ಆಡಳಿತದಿಂದ ಸಂತುಷ್ಟರಾಗಿದ್ದಾರೆ. ಅದೇ ಕಾರಣಕ್ಕೆ ಮೋದಿ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ ಎಂದು ಕಿಶನ್ ರೆಡ್ಡಿ ಹೇಳಿದ್ದಾರೆ.
ಇದನ್ನೂ ಓದಿ: ಮರೆಯಲಾಗದ ಕ್ಷಣ; ಮೋದಿ ನ್ಯೂಯಾರ್ಕ್ ಭೇಟಿಯ ಹೈಲೈಟ್ಸ್ ಇಲ್ಲಿದೆ
ಕಾಂಗ್ರೆಸ್ ಪಕ್ಷದ ಮಿತ್ರನಾದ ಒಮರ್ ಅಬ್ದುಲ್ಲಾ ಅವರು 2 ಸ್ಥಾನಗಳಿಂದ ಸ್ಪರ್ಧಿಸಲು ತಮ್ಮ ಸಾಮರ್ಥ್ಯದ ಮೇಲೆ ವಿಶ್ವಾಸ ಹೊಂದಿಲ್ಲ. ಇಡೀ ಜಗತ್ತಿಗೆ ಭಾರತದ ಸಾಮರ್ಥ್ಯ ಮತ್ತು ಪ್ರಧಾನಿ ಮೋದಿಯವರ ಆಡಳಿತದ ಮೇಲೆ ವಿಶ್ವಾಸವಿದೆ. ಪ್ರಧಾನಿ ಮೋದಿಯವರ ಇತ್ತೀಚಿನ ಯುಎಸ್ ಪ್ರವಾಸದಲ್ಲಿ, ಅಮೆರಿಕಾದ ಭದ್ರತಾ ಮೂಲಸೌಕರ್ಯ ಮತ್ತು ಯುಎಸ್ ಮಿತ್ರರಾಷ್ಟ್ರಗಳಿಗೆ ಚಿಪ್ಗಳನ್ನು ಪೂರೈಸಲು ಭಾರತದ ಮೇಲೆ ನಂಬಿಕೆಯಿಟ್ಟಿದೆ ಎಂದು ಕಿಶನ್ ರೆಡ್ಡಿ ಹೇಳಿದ್ದಾರೆ.
ಇದನ್ನೂ ಓದಿ: ಬಿಜೆಪಿ, ಆರ್‌ಎಸ್‌ಎಸ್ ಭಾರತದಲ್ಲಿ ದ್ವೇಷ, ಹಿಂಸಾಚಾರವನ್ನು ಹರಡುತ್ತಿದೆ; ಪೂಂಚ್‌ನಲ್ಲಿ ರಾಹುಲ್ ಗಾಂಧಿ ಟೀಕೆ
ಖಟಾಖತ್ ಯೋಜನೆಗಳ ಮೂಲಕ ಜನರನ್ನು ನಿರ್ಲಜ್ಜವಾಗಿ ವಂಚಿಸಿದ ನಂತರವೂ ಕಾಂಗ್ರೆಸ್ ಪಕ್ಷವು 2024ರ ಲೋಕಸಭೆ ಚುನಾವಣೆಯಲ್ಲಿ ಎರಡಂಕಿ ದಾಟಲು ಸಾಧ್ಯವಾಗಲಿಲ್ಲ. ಜಮ್ಮು ಮತ್ತು ಕಾಶ್ಮೀರದಲ್ಲಿ ಆತ್ಮವಿಶ್ವಾಸದ ಕೊರತೆಯಿಂದಾಗಿ ಕಾಂಗ್ರೆಸ್ ಪಕ್ಷವು ದೇಶ ವಿರೋಧಿ ಹೇಳಿಕೆಗಳನ್ನು ನೀಡುತ್ತಿದೆ ಮತ್ತು ಭಾರತ ವಿರೋಧಿ ಶಕ್ತಿಗಳೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿದೆ ಎಂದು ಕಿಶನ್ ರೆಡ್ಡಿ ಟೀಕಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ