AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ; ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಸೇರಿ 8 ಹಾಲಿ ಸದಸ್ಯರಿಗಿಲ್ಲ ಟಿಕೆಟ್

ಉತ್ತರ ಪ್ರದೇಶದ 10 ರಾಜ್ಯಸಭಾ ಸ್ಥಾನಗಳಿಗೆ ನಡೆಯಲಿರುವ ಮುಂಬರುವ ಚುನಾವಣೆಗೆ ಬಿಜೆಪಿ ಇಂದು ತನ್ನ 8 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಬಿಜೆಪಿಯು ಉತ್ತರ ಪ್ರದೇಶದ ಶಾಸಕ ಧರಂಪಾಲ್ ಸಿಂಗ್, ಹಿರಿಯ ನಾಯಕರಾದ ರಾಧಾಕಾಂತ್ ಓಜಾ, ಗೋಪಿ ಕೃಷ್ಣ ಪಾಂಡೆ ಮತ್ತು ಪ್ರಕಾಶ್ ಪಾಲ್ ಸೇರಿದಂತೆ 8 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿಯ ಪ್ರಮುಖ ದಲಿತ ನಾಯಕ ಎಂದು ಪರಿಗಣಿಸಲ್ಪಟ್ಟಿರುವ ಮಾಜಿ ಲೋಕಸಭಾ ಸದಸ್ಯ ಹಾಗೂ ಮಾಜಿ ಶಾಸಕ ವಿದ್ಯಾಸಾಗರ್ ಸೋಂಕರ್ ಅವರಿಗೂ ಬಿಜೆಪಿ ಟಿಕೆಟ್ ನೀಡಿದೆ.

ಉತ್ತರ ಪ್ರದೇಶ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ; ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಸೇರಿ 8 ಹಾಲಿ ಸದಸ್ಯರಿಗಿಲ್ಲ ಟಿಕೆಟ್
ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನವೀನ್Image Credit source: PTI
ಸುಷ್ಮಾ ಚಕ್ರೆ
|

Updated on: Oct 05, 2026 | 6:06 PM

Share

ನವದೆಹಲಿ, ಅಕ್ಟೋಬರ್ 5: ಉತ್ತರ ಪ್ರದೇಶದ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿ ಇಂದು (ಸೋಮವಾರ) ತನ್ನ 8 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ವಿಶೇಷವೆಂದರೆ, ಬಿಜೆಪಿಯು ತನ್ನ ಹಾಲಿ 8 ರಾಜ್ಯಸಭಾ ಸಂಸದರೆಲ್ಲರ ಹೆಸರುಗಳನ್ನು ಪಟ್ಟಿಯಿಂದ ಕೈಬಿಟ್ಟಿದೆ. ಅಕ್ಟೋಬರ್ 16ರಂದು ನಡೆಯಲಿರುವ ಈ ದ್ವೈವಾರ್ಷಿಕ ಚುನಾವಣೆಗೆ ಕೇಂದ್ರ ಸಚಿವರಾದ ಹರ್ದೀಪ್ ಸಿಂಗ್ ಪುರಿ ಮತ್ತು ಬಿ.ಎಲ್. ವರ್ಮಾ ಸೇರಿದಂತೆ 8 ಹಾಲಿ ಸದಸ್ಯರಿಗೆ ಟಿಕೆಟ್ ನಿರಾಕರಿಸಲಾಗಿದೆ. ಈ ಬಾರಿ 8 ಸ್ಥಾನಗಳಿಗೂ ಬಿಜೆಪಿ ಹೊಸ ಮುಖಗಳನ್ನು ಕಣಕ್ಕೆ ಇಳಿಸಿದೆ.

ಅಚ್ಚರಿಯ ಬೆಳವಣಿಗೆಯಲ್ಲಿ, ಪ್ರಸ್ತುತ ರಾಜ್ಯಸಭಾ ಸದಸ್ಯರಾಗಿರುವ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಹಾಗೂ ಕೇಂದ್ರ ಸಚಿವ ಬನ್ವಾರಿ ಲಾಲ್ ವರ್ಮಾ (ಬಿ.ಎಲ್. ವರ್ಮಾ) ಅವರನ್ನು ಬಿಜೆಪಿ ಈ ಬಾರಿ ಕೈಬಿಟ್ಟಿದೆ.

ಇದನ್ನೂ ಓದಿ: ಎಸ್​​ಐಆರ್ ಫಾರ್ಮ್ 7 ವಾರ್: ಸಿಎಂ ಡಿಕೆ ಶಿವಕುಮಾರ್, ಸಚಿವರ ವಿರುದ್ಧ ಬಿಜೆಪಿ ದೂರು

ಬಿಜೆಪಿ ಬಿಡುಗಡೆ ಮಾಡಿರುವ ನೂತನ ಪಟ್ಟಿಯಲ್ಲಿ ಮಾಜಿ ಲೋಕಸಭಾ ಸಂಸದೆ ಪ್ರಿಯಾಂಕಾ ಸಿಂಗ್ ರಾವತ್ ಮತ್ತು ಜಾರ್ಖಂಡ್ ರಾಜ್ಯಪಾಲ ಸಂತೋಷ್ ಗಂಗ್ವಾರ್ ಅವರ ಪುತ್ರಿ ಹಾಗೂ ಉತ್ತರ ಪ್ರದೇಶ ಬಿಜೆಪಿಯ ಪ್ರಮುಖ ನಾಯಕಿ ಶ್ರುತಿ ಗಂಗ್ವಾರ್ ಅವರಿಗೆ ಸ್ಥಾನ ನೀಡಲಾಗಿದೆ. ಈ ಇಬ್ಬರೂ ಮಹಿಳಾ ಅಭ್ಯರ್ಥಿಗಳಾಗಿದ್ದಾರೆ. ಇನ್ನುಳಿದ ಅಭ್ಯರ್ಥಿಗಳಾಗಿ ಧರಂಪಾಲ್ ಸಿಂಗ್, ರಾಧಾಕಾಂತ್ ಓಜಾ, ಪ್ರಕಾಶ್ ಪಾಲ್, ವಿದ್ಯಾಸಾಗರ್ ಸೋಂಕರ್, ಗೋಪಿ ಕೃಷ್ಣ ಪಾಂಡೆ ಮತ್ತು ರಾಮ್ ಪ್ರತಾಪ್ ಸಿಂಗ್ ಚೌಹಾಣ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.

ಉತ್ತರ ಪ್ರದೇಶದಿಂದ ಹಾಲಿ ರಾಜ್ಯಸಭಾ ಸದಸ್ಯರಾಗಿದ್ದ ಅರುಣ್ ಸಿಂಗ್, ಸೀಮಾ ದ್ವಿವೇದಿ, ಬಿ.ಎಲ್. ವರ್ಮಾ, ಹರ್ದೀಪ್ ಸಿಂಗ್ ಪುರಿ, ನೀರಜ್ ಶೇಖರ್, ಬ್ರಿಜ್‌ಲಾಲ್ ಮತ್ತು ಗೀತಾ ಶ್ಯಾಕ್ಯಾ ಸೇರಿದಂತೆ 7 ಜನರಿಗೆ ಈ ಬಾರಿ ಸ್ಥಾನ ಸಿಕ್ಕಿಲ್ಲ. ಮತ್ತೊಬ್ಬ ನಿರ್ಗಮಿತ ಸಂಸದ ದಿನೇಶ್ ಶರ್ಮಾ ಅವರು ಪ್ರಸ್ತುತ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಉಪರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇದನ್ನೂ ಓದಿ: ಯುಪಿ, ಉತ್ತರಾಖಂಡದ 11 ರಾಜ್ಯಸಭಾ ಸ್ಥಾನಗಳಿಗೆ ಅ.16ರಂದು ಚುನಾವಣೆ: ಹರ್ದೀಪ್ ಪುರಿ ಸೇರಿ ದಿಗ್ಗಜರ ಭವಿಷ್ಯ ನಿರ್ಧಾರ

ಉತ್ತರ ಪ್ರದೇಶದಲ್ಲಿ ಒಟ್ಟು 10 ರಾಜ್ಯಸಭಾ ಸ್ಥಾನಗಳು ಖಾಲಿಯಾಗುತ್ತಿದ್ದು, ಅವುಗಳಲ್ಲಿ 8 ಸ್ಥಾನಗಳು ಬಿಜೆಪಿಯ ವಶದಲ್ಲಿದ್ದರೆ, ಸಮಾಜವಾದಿ ಪಾರ್ಟಿ (ಎಸ್​ಪಿ) ಮತ್ತು ಬಹುಜನ ಸಮಾಜ ಪಾರ್ಟಿ (ಬಿಎಸ್​ಪಿ) ತಲಾ ಒಂದು ಸ್ಥಾನವನ್ನು ಹೊಂದಿವೆ.

ಬಿಜೆಪಿಯ ನೂತನ ಅಭ್ಯರ್ಥಿಗಳ ಪಟ್ಟಿಯಲ್ಲಿ 3 ಹಿಂದುಳಿದ ವರ್ಗದ (ಒಬಿಸಿ) ಅಭ್ಯರ್ಥಿಗಳು, ಇಬ್ಬರು ಪರಿಶಿಷ್ಟ ಜಾತಿ (ಎಸ್​ಸಿ) ಅಭ್ಯರ್ಥಿಗಳು ಹಾಗೂ 3 ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ. 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಜಾತಿ ಪ್ರಾತಿನಿಧ್ಯ, ಪ್ರಾದೇಶಿಕ ಸಮತೋಲನ ಹಾಗೂ ಸಾಂಸ್ಥಿಕ ಅನುಭವಕ್ಕೆ ಆದ್ಯತೆ ನೀಡಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.

245 ಸದಸ್ಯ ಬಲದ ರಾಜ್ಯಸಭೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರಸ್ತುತ 150 ಸದಸ್ಯರನ್ನು ಹೊಂದಿದ್ದು, ಮೇಲ್ಮನೆಯಲ್ಲಿ ಸ್ಪಷ್ಟ ಬಹುಮತವನ್ನು ಕಾಯ್ದುಕೊಂಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More