AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಸಭಾ ಚುನಾವಣೆಗೆ 9 ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ; ಬಿಹಾರದಿಂದ ಪಕ್ಷದ ಮುಖ್ಯಸ್ಥ ನಿತಿನ್ ನಬಿನ್ ಕಣಕ್ಕೆ

ಮಾರ್ಚ್ 16ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಇಂದು 9 ಅಭ್ಯರ್ಥಿಗಳ ಹೆಸರುಗಳನ್ನು ಘೋಷಿಸಿದ್ದು, ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಬಿಹಾರದಿಂದ ಸ್ಪರ್ಧಿಸಲಿದ್ದಾರೆ. ಬಿಹಾರದಿಂದ ರಾಜ್ಯಸಭಾ ಚುನಾವಣೆಗೆ ನಿತಿನ್ ನಬಿನ್ ಮತ್ತು ಶಿವೇಶ್ ರಾಮ್ ಅವರನ್ನು ನಾಮನಿರ್ದೇಶನ ಮಾಡಲಾಗಿದೆ. ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 5. ಮಾರ್ಚ್ 16ರಂದು ಮತದಾನ ನಡೆಯಲಿದೆ. ಅದೇ ದಿನ ಮತ ಎಣಿಕೆ ನಡೆಯಲಿದ್ದು, ಫಲಿತಾಂಶಗಳನ್ನು ಪ್ರಕಟಿಸಲಾಗುವುದು.

ರಾಜ್ಯಸಭಾ ಚುನಾವಣೆಗೆ 9 ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ; ಬಿಹಾರದಿಂದ ಪಕ್ಷದ ಮುಖ್ಯಸ್ಥ ನಿತಿನ್ ನಬಿನ್ ಕಣಕ್ಕೆ
Nitin Nabin
ಸುಷ್ಮಾ ಚಕ್ರೆ
|

Updated on: Mar 03, 2026 | 5:35 PM

Share

ನವದೆಹಲಿ, ಮಾರ್ಚ್ 3: ಬಿಜೆಪಿ ಇಂದು ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ (Nitin Nabin) ಅವರನ್ನು ಸಹ ನಾಮನಿರ್ದೇಶನ ಮಾಡಲಾಗಿದೆ. ಬಿಹಾರದಿಂದ ರಾಜ್ಯಸಭಾ ಚುನಾವಣೆಗೆ ನಿತಿನ್ ನಬಿನ್ ಮತ್ತು ಶಿವೇಶ್ ರಾಮ್ ಅವರನ್ನು ನಾಮನಿರ್ದೇಶನ ಮಾಡಲಾಗಿದೆ. ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 5. ಮಾರ್ಚ್ 16ರಂದು ಮತದಾನ ನಡೆಯಲಿದೆ. ಅದೇ ದಿನ ಫಲಿತಾಂಶಗಳನ್ನು ಪ್ರಕಟವಾಗಲಿದೆ.

ಬಿಹಾರದಿಂದ ಬಿಜೆಪಿ ನಿತಿನ್ ನಬಿನ್ ಮತ್ತು ಶಿವೇಶ್ ಕುಮಾರ್ ಅವರನ್ನು ಕಣಕ್ಕಿಳಿಸಿದೆ. ಅಸ್ಸಾಂನಲ್ಲಿ ಬಿಜೆಪಿ ತೇರಶ್ ಗೋವಲ್ಲ ಮತ್ತು ಜೋಗೆನ್ ಮೋಹನ್ ಅವರನ್ನು ನಾಮನಿರ್ದೇಶನ ಮಾಡಿದೆ. ಛತ್ತೀಸ್‌ಗಢದಲ್ಲಿ ಲಕ್ಷ್ಮಿ ವರ್ಮಾ ಅವರನ್ನು ತನ್ನ ಅಭ್ಯರ್ಥಿಯಾಗಿ ಹೆಸರಿಸಿದೆ. ಹರಿಯಾಣದಿಂದ ಸಂಜಯ್ ಭಾಟಿಯಾ ಅವರನ್ನು ಆಯ್ಕೆ ಮಾಡಿದೆ. ಒಡಿಶಾದಲ್ಲಿ ಬಿಜೆಪಿ ಸುಜೀತ್ ಕುಮಾರ್ ಜೊತೆಗೆ ರಾಜ್ಯ ಘಟಕದ ಮುಖ್ಯಸ್ಥ ಮನಮೋಹನ್ ಸಮಲ್ ಅವರನ್ನು ನಾಮನಿರ್ದೇಶನ ಮಾಡಿದೆ. ಪಶ್ಚಿಮ ಬಂಗಾಳದಿಂದ ಬಿಜೆಪಿ ರಾಹುಲ್ ಸಿನ್ಹಾ ಅವರನ್ನು ಕಣಕ್ಕಿಳಿಸಿದೆ.

ಇದನ್ನೂ ಓದಿ: ಬಿಹಾರದ ನೂತನ ಮಂತ್ರಿಗಳಿಗೆ ಖಾತೆ ಹಂಚಿಕೆ; ನಿತೀಶ್ ಕುಮಾರ್ ಸಂಪುಟದ ಸಚಿವರ ಪಟ್ಟಿ ಇಲ್ಲಿದೆ

ಬಿಹಾರದ ಐವರು ರಾಜ್ಯಸಭಾ ಸದಸ್ಯರ ಅವಧಿ ಏಪ್ರಿಲ್‌ನಲ್ಲಿ ಕೊನೆಗೊಳ್ಳಲಿದೆ. ಅವರೆಂದರೆ ಉಪ ಸಭಾಪತಿ ಹರಿವಂಶ ನಾರಾಯಣ ಸಿಂಗ್, ಪ್ರೇಮಚಂದ್ ಗುಪ್ತಾ, ಕೇಂದ್ರ ಸಚಿವರಾದ ರಾಮನಾಥ್ ಠಾಕೂರ್, ಅಮರೇಂದ್ರ ಧರಿ ಸಿಂಗ್ ಮತ್ತು ಉಪೇಂದ್ರ ಕುಶ್ವಾಹ. ಹರಿವಂಶ್ ನಾರಾಯಣ್ ಸಿಂಗ್ ಮತ್ತು ರಾಮನಾಥ್ ಠಾಕೂರ್ ಅವರು ಜೆಡಿಯು ಪಕ್ಷವನ್ನು ಪ್ರತಿನಿಧಿಸುತ್ತಿದ್ದಾರೆ. ಪ್ರೇಮಚಂದ್ ಗುಪ್ತಾ ಮತ್ತು ಅಮರೇಂದ್ರ ಧಾರಿ ಸಿಂಗ್ ಅವರು ಆರ್‌ಜೆಡಿಯನ್ನು ಪ್ರತಿನಿಧಿಸುತ್ತಿದ್ದಾರೆ. ಉಪೇಂದ್ರ ಕುಶ್ವಾಹ ಅವರು ರಾಷ್ಟ್ರೀಯ ಲೋಕ ಮೋರ್ಚಾವನ್ನು ಪ್ರತಿನಿಧಿಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೊಲಂಬಿಯಾದಲ್ಲಿ ಭಾರೀ ದುರಂತ; 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ
ಕೊಲಂಬಿಯಾದಲ್ಲಿ ಭಾರೀ ದುರಂತ; 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!