
ನವದೆಹಲಿ, ಮಾರ್ಚ್ 3: ಬಿಜೆಪಿ ಇಂದು ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ (Nitin Nabin) ಅವರನ್ನು ಸಹ ನಾಮನಿರ್ದೇಶನ ಮಾಡಲಾಗಿದೆ. ಬಿಹಾರದಿಂದ ರಾಜ್ಯಸಭಾ ಚುನಾವಣೆಗೆ ನಿತಿನ್ ನಬಿನ್ ಮತ್ತು ಶಿವೇಶ್ ರಾಮ್ ಅವರನ್ನು ನಾಮನಿರ್ದೇಶನ ಮಾಡಲಾಗಿದೆ. ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 5. ಮಾರ್ಚ್ 16ರಂದು ಮತದಾನ ನಡೆಯಲಿದೆ. ಅದೇ ದಿನ ಫಲಿತಾಂಶಗಳನ್ನು ಪ್ರಕಟವಾಗಲಿದೆ.
ಬಿಹಾರದಿಂದ ಬಿಜೆಪಿ ನಿತಿನ್ ನಬಿನ್ ಮತ್ತು ಶಿವೇಶ್ ಕುಮಾರ್ ಅವರನ್ನು ಕಣಕ್ಕಿಳಿಸಿದೆ. ಅಸ್ಸಾಂನಲ್ಲಿ ಬಿಜೆಪಿ ತೇರಶ್ ಗೋವಲ್ಲ ಮತ್ತು ಜೋಗೆನ್ ಮೋಹನ್ ಅವರನ್ನು ನಾಮನಿರ್ದೇಶನ ಮಾಡಿದೆ. ಛತ್ತೀಸ್‌ಗಢದಲ್ಲಿ ಲಕ್ಷ್ಮಿ ವರ್ಮಾ ಅವರನ್ನು ತನ್ನ ಅಭ್ಯರ್ಥಿಯಾಗಿ ಹೆಸರಿಸಿದೆ. ಹರಿಯಾಣದಿಂದ ಸಂಜಯ್ ಭಾಟಿಯಾ ಅವರನ್ನು ಆಯ್ಕೆ ಮಾಡಿದೆ. ಒಡಿಶಾದಲ್ಲಿ ಬಿಜೆಪಿ ಸುಜೀತ್ ಕುಮಾರ್ ಜೊತೆಗೆ ರಾಜ್ಯ ಘಟಕದ ಮುಖ್ಯಸ್ಥ ಮನಮೋಹನ್ ಸಮಲ್ ಅವರನ್ನು ನಾಮನಿರ್ದೇಶನ ಮಾಡಿದೆ. ಪಶ್ಚಿಮ ಬಂಗಾಳದಿಂದ ಬಿಜೆಪಿ ರಾಹುಲ್ ಸಿನ್ಹಾ ಅವರನ್ನು ಕಣಕ್ಕಿಳಿಸಿದೆ.
BJP announces its candidates for the upcoming Rajya Sabha elections.
Nitin Nabin, Shivesh Kumar from Bihar.
Terash Gowalla, Jogen Mohan from Assam.
Laxmi Verma from Chhattisgarh.
Sanjay Bhatia from Haryana.
Manmohan Samal, Sujeet Kumar from Odisha
Rahul Sinha from West Bengal. pic.twitter.com/jM3afnPLLi— ANI (@ANI) March 3, 2026
ಇದನ್ನೂ ಓದಿ: ಬಿಹಾರದ ನೂತನ ಮಂತ್ರಿಗಳಿಗೆ ಖಾತೆ ಹಂಚಿಕೆ; ನಿತೀಶ್ ಕುಮಾರ್ ಸಂಪುಟದ ಸಚಿವರ ಪಟ್ಟಿ ಇಲ್ಲಿದೆ
ಬಿಹಾರದ ಐವರು ರಾಜ್ಯಸಭಾ ಸದಸ್ಯರ ಅವಧಿ ಏಪ್ರಿಲ್‌ನಲ್ಲಿ ಕೊನೆಗೊಳ್ಳಲಿದೆ. ಅವರೆಂದರೆ ಉಪ ಸಭಾಪತಿ ಹರಿವಂಶ ನಾರಾಯಣ ಸಿಂಗ್, ಪ್ರೇಮಚಂದ್ ಗುಪ್ತಾ, ಕೇಂದ್ರ ಸಚಿವರಾದ ರಾಮನಾಥ್ ಠಾಕೂರ್, ಅಮರೇಂದ್ರ ಧರಿ ಸಿಂಗ್ ಮತ್ತು ಉಪೇಂದ್ರ ಕುಶ್ವಾಹ. ಹರಿವಂಶ್ ನಾರಾಯಣ್ ಸಿಂಗ್ ಮತ್ತು ರಾಮನಾಥ್ ಠಾಕೂರ್ ಅವರು ಜೆಡಿಯು ಪಕ್ಷವನ್ನು ಪ್ರತಿನಿಧಿಸುತ್ತಿದ್ದಾರೆ. ಪ್ರೇಮಚಂದ್ ಗುಪ್ತಾ ಮತ್ತು ಅಮರೇಂದ್ರ ಧಾರಿ ಸಿಂಗ್ ಅವರು ಆರ್‌ಜೆಡಿಯನ್ನು ಪ್ರತಿನಿಧಿಸುತ್ತಿದ್ದಾರೆ. ಉಪೇಂದ್ರ ಕುಶ್ವಾಹ ಅವರು ರಾಷ್ಟ್ರೀಯ ಲೋಕ ಮೋರ್ಚಾವನ್ನು ಪ್ರತಿನಿಧಿಸುತ್ತಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ