ತಮಿಳುನಾಡಿನಲ್ಲಿ ಮತ್ತೆ ಬಿಜೆಪಿ-ಎಐಎಡಿಎಂಕೆ ಮೈತ್ರಿ; ಎಡಪ್ಪಾಡಿ ಪಳನಿಸ್ವಾಮಿ ಸಿಎಂ ಅಭ್ಯರ್ಥಿ
2026ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೂ ಮುನ್ನ ತಮಿಳುನಾಡಿನಲ್ಲಿ ಎಐಎಡಿಎಂಕೆ ಜೊತೆ ಬಿಜೆಪಿ ಮೈತ್ರಿ ಘೋಷಿಸಿದೆ. ಎಐಎಡಿಎಂಕೆ ನಾಯಕ ಎಡಪ್ಪಾಡಿ ಕೆ. ಪಳನಿಸ್ವಾಮಿ ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. ಈ ಮೂಲಕ ತಮಿಳುನಾಡಿನಲ್ಲಿ ಈಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಚೆನ್ನೈ, ಏಪ್ರಿಲ್ 11: ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (AIADMK) ಮತ್ತೆ ಮೈತ್ರಿ ಮಾಡಿಕೊಂಡಿವೆ ಎಂದು ಚೆನ್ನೈನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಇಂದು ಘೋಷಿಸಿದ್ದಾರೆ. ಎಐಎಡಿಎಂಕೆ ನಾಯಕ ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದಲ್ಲಿ ಮೈತ್ರಿಕೂಟ ವಿಧಾನಸಭಾ ಚುನಾವಣೆಯಲ್ಲಿ ಎದುರಿಸಲಿದೆ ಎಂದು ಅಮಿತ್ ಶಾ ಹೇಳಿದ್ದಾರೆ. ನಿರ್ಗಮಿತ ಬಿಜೆಪಿ ತಮಿಳುನಾಡು ಮುಖ್ಯಸ್ಥ ಅಣ್ಣಾಮಲೈ ಮತ್ತು ಎಐಎಡಿಎಂಕೆ ನಾಯಕ ಎಡಪ್ಪಾಡಿ ಕೆ. ಪಳನಿಸ್ವಾಮಿ ಕೂಡ ಈ ವೇಳೆ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
“ನಾನು ನಿಮಗೆ ಶುಭ ಸುದ್ದಿಯನ್ನು ಹೇಳಲು ಬಂದಿದ್ದೇನೆ. ತಮಿಳುನಾಡಿನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಪಳನಿಸ್ವಾಮಿ ಎನ್‌ಡಿಎ ಮೈತ್ರಿಕೂಟವನ್ನು ಮುನ್ನಡೆಸಲಿದ್ದಾರೆ. ಈ ಚುನಾವಣೆಗಳು ರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಮತ್ತು ರಾಜ್ಯ ಮಟ್ಟದಲ್ಲಿ ಎಐಎಡಿಎಂಕೆ ನಾಯಕ ಎಡಪ್ಪಾಡಿ ಕೆ. ಪಳನಿಸ್ವಾಮಿ ನೇತೃತ್ವದಲ್ಲಿ ನಡೆಯಲಿವೆ” ಎಂದು ಅಮಿತ್ ಶಾ ಹೇಳಿದರು.‘
ಇದನ್ನೂ ಓದಿ: ಎಐಎಡಿಎಂಕೆ ನಾಯಕರಿಂದ ಮೈತ್ರಿ ಬಗ್ಗೆ ಅಮಿತ್ ಶಾ ಭೇಟಿ; ಮಾತಿನ ವರಸೆಯನ್ನೇ ಬದಲಿಸಿದ ಅಣ್ಣಾಮಲೈ
#WATCH | Chennai, Tamil Nadu: On NDA alliance for Tamil Nadu Vidhan Sabha elections, Union Home Minister Amit Shah says, “These elections will be contested under the leadership of PM Modi on a national level and under the leadership of AIADMK leader Edappadi K. Palaniswami on the… pic.twitter.com/NHgNC4SviR
— ANI (@ANI) April 11, 2025
1998ರಿಂದ ಎಐಎಡಿಎಂಕೆ ಮತ್ತು ಬಿಜೆಪಿ ಎನ್‌ಡಿಎ ಬಣದ ಭಾಗವಾಗಿದ್ದು, ಎಐಎಡಿಎಂಕೆ ನಾಯಕಿ ಜಯಲಲಿತಾ ಮತ್ತು ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಒಟ್ಟಿಗೆ ಕೆಲಸ ಮಾಡಿದ್ದಾರೆ ಎಂಬುದನ್ನು ಮತ್ತೊಮ್ಮೆ ಉಲ್ಲೇಖಿಸಿದ ಗೃಹ ಸಚಿವ ಅಮಿತ್ ಶಾ, “ತಮಿಳುನಾಡಿನಲ್ಲಿ ಎನ್‌ಡಿಎ ಪೂರ್ಣ ಬಹುಮತ ಪಡೆದು ಸರ್ಕಾರ ರಚಿಸುತ್ತದೆ ಎಂಬ ಭರವಸೆ ನನಗಿದೆ” ಎಂದು ಹೇಳಿದ್ದಾರೆ.
#WATCH | Chennai, Tamil Nadu: On NDA alliance for Tamil Nadu Vidhan Sabha elections, Union Home Minister Amit Shah says, “AIADMK has no conditions and demands… We will have no interference in the internal matters of the AIADMK… This alliance is going to be beneficial to both… pic.twitter.com/9sUeKCkI62
— ANI (@ANI) April 11, 2025
ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಎಐಎಡಿಎಂಕೆ ಯಾವುದೇ ಷರತ್ತುಗಳು ಮತ್ತು ಬೇಡಿಕೆಗಳನ್ನು ನೀಡಿಲ್ಲ ಎಂದ ಅಮಿತ್ ಶಾ, “ಎಐಎಡಿಎಂಕೆಯ ಆಂತರಿಕ ವಿಷಯಗಳಲ್ಲಿ ನಮಗೆ ಯಾವುದೇ ಹಸ್ತಕ್ಷೇಪವಿರುವುದಿಲ್ಲ. ಈ ಮೈತ್ರಿಕೂಟವು ಎನ್‌ಡಿಎ ಮತ್ತು ಎಐಎಡಿಎಂಕೆ ಎರಡಕ್ಕೂ ಪ್ರಯೋಜನಕಾರಿಯಾಗಲಿದೆ” ಎಂದು ಹೇಳಿದರು.
ಇದನ್ನೂ ಓದಿ: ಕರ್ನಾಟಕದಲ್ಲಿ 30 ಸಾವಿರ ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ; ಸದನದಲ್ಲಿ ಅಮಿತ್ ಶಾ ಪ್ರಸ್ತಾಪ
#WATCH | Chennai, Tamil Nadu: AIADMK and BJP leaders have decided that AIADMK, BJP and all the alliance parties will contest the upcoming Vidhan Sabha elections in Tamil Nadu together as NDA: Union Home Minister Amit Shah pic.twitter.com/YaS3S6yfSq
— ANI (@ANI) April 11, 2025
ತಮಿಳುನಾಡು ಚುನಾವಣೆಗೆ ಬಿಜೆಪಿ-ಎಐಎಡಿಎಂಕೆ ಮೈತ್ರಿಕೂಟದ ಕುರಿತು ಮಾತನಾಡಿದ ಅಮಿತ್ ಶಾ, “ಮುಂಬರುವ ತಮಿಳುನಾಡು ಚುನಾವಣೆಯಲ್ಲಿ ಡಿಎಂಕೆಯ ಭ್ರಷ್ಟಾಚಾರ, ಕಾನೂನು ಸುವ್ಯವಸ್ಥೆಯ ಸಮಸ್ಯೆಗಳು, ದಲಿತರು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ಗಮನಿಸಿ ಜನರು ಮತ ಚಲಾಯಿಸುತ್ತಾರೆ ಎಂಬ ವಿಶ್ವಾಸವಿದೆ. ಡಿಎಂಕೆ ಸರ್ಕಾರವು 39,000 ಕೋಟಿ ರೂ.ಗಳ ಮದ್ಯ ಹಗರಣ, ಮರಳು ಗಣಿಗಾರಿಕೆ ಹಗರಣ, ಇಂಧನ ಹಗರಣ, ಎಲ್‌ಸಿಒಟಿ ಹಗರಣ, ಸಾರಿಗೆ ಹಗರಣ, ಹಣ ವರ್ಗಾವಣೆ ಹಗರಣ ಸೇರಿದಂತೆ ಹಲವು ಹಗರಣಗಳಲ್ಲಿ ಭಾಗಿಯಾಗಿದೆ. ತಮಿಳುನಾಡಿನ ಜನರು ಉದಯನಿಧಿ ಮತ್ತು ಸ್ಟಾಲಿನ್ ಅವರಿಂದ ಉತ್ತರಗಳನ್ನು ಹುಡುಕುತ್ತಿದ್ದಾರೆ” ಎಂದಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ