Rajasthan New CM: ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್‌ಲಾಲ್ ಶರ್ಮಾ ಆಯ್ಕೆ
Bhajanlal Sharma: ಬಿಜೆಪಿ ಶಾಸಕಾಂಗ ಸಭೆಯಲ್ಲಿ ರಾಜಸ್ಥಾನದ ನೂತನ ಸಿಎಂ ಹೆಸರು ಘೋಷಣೆ ಮಾಡಲಾಗಿದೆ. ವಸುಂಧರಾ ರಾಜೇ ಅವರು ಭಜನ್‌ಲಾಲ್ ಶರ್ಮಾ ಅವರನ್ನು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಘೋಷಿಸಿದ್ದಾರೆ.
ದೆಹಲಿ ಡಿಸೆಂಬರ್ 12: ರಾಜಸ್ಥಾನದ (Rajasthan) ನೂತನ ಮುಖ್ಯಮಂತ್ರಿಯಾಗಿ ಭಜನ್‌ಲಾಲ್ ಶರ್ಮಾ (Bhajanlal Sharma) ಅವರನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿ (BJP) ಶಾಸಕಾಂಗ ಸಭೆಯಲ್ಲಿ ಹೆಸರು ಘೋಷಣೆ ಮಾಡಲಾಗಿದೆ. ವಸುಂಧರಾ ರಾಜೇ ಅವರು ನೂತನ ಸಿಎಂ ಹೆಸರು ಘೋಷಣೆ ಮಾಡಿದ್ದಾರೆ. ಶರ್ಮಾ ಅವರು ಸಂಗನೇರ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ. ಅವರು ನಾಲ್ಕು ಬಾರಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.
ನೂತನ ಡಿಸಿಎಂ ಪ್ರೇಮ್ಚಂದ್ ಭೈರ್ವಾ ಮತ್ತು ದಿಯಾ ಕುಮಾರಿ ಅವರನ್ನು ಆಯ್ಕೆ ಮಾಡಲಾಗಿದೆ. ಶಾಸಕ ವಾಸುದೇವ್ ದೇವನಾನಿ ಸ್ಪೀಕರ್ ಆಗಲಿದ್ದಾರೆ. ಇವರು ಅಜ್ಮೀರ್ ಮೂಲದವರಾಗಿದ್ದು, ಈ ಹಿಂದೆ ರಾಜ್ಯ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಡಿಸೆಂಬರ್ 15ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.
#WATCH | BJP names Bhajanlal Sharma as the new Chief Minister of Rajasthan pic.twitter.com/j3awHnmH7k
— ANI (@ANI) December 12, 2023
ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್ ಪ್ರಕಾರ, 56 ವರ್ಷದ ಶರ್ಮಾ ಸ್ನಾತಕೋತ್ತರ ಪದವೀಧರರಾಗಿದ್ದಾರೆ. ಅವರ ಒಟ್ಟು ಘೋಷಿತ ಆಸ್ತಿ 1.5 ಕೋಟಿ ರೂ.ಗಳಾಗಿದ್ದು, ಇದರಲ್ಲಿ 43.6 ಲಕ್ಷ ಚರ ಆಸ್ತಿ ಮತ್ತು 1 ಕೋಟಿ ಸ್ಥಿರ ಆಸ್ತಿಗಳು ಸೇರಿವೆ. ಒಟ್ಟು ಘೋಷಿತ ಆದಾಯ 11.1 ಲಕ್ಷ ರೂ. ಇದರಲ್ಲಿ 6.9 ಲಕ್ಷ ಸ್ವಯಂ ಆದಾಯವಿದೆ.
ರಾಜಸ್ಥಾನದ ಮಾಜಿ ಸಿಎಂ ವಸುಂಧರಾ ರಾಜೇ ಅವರು ಭಜನ್‌ಲಾಲ್ ಶರ್ಮಾ ಅವರ ಹೆಸರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಪ್ರಸ್ತಾಪಿಸಿದ್ದು, ಅದಕ್ಕೆ ಸರ್ವಾನುಮತದಿಂದ ಒಪ್ಪಿಗೆ ನೀಡಲಾಗಿದೆ ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಜೈಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಇದನ್ನೂ ಓದಿ: ರಾಜಸ್ಥಾನ ಮುಖ್ಯಮಂತ್ರಿ ರೇಸ್ನಿಂದ ಹೊರಬಿದ್ದರೇ ಬಾಬಾ ಬಾಲಕನಾಥ್? ಮಾರ್ಮಿಕ ನುಡಿಗಳು ಇಲ್ಲಿವೆ
ಭಜನ್ ಲಾಲ್ ಶರ್ಮಾ ಯಾರು?
ಬಿಜೆಪಿಯ ಭಜನ್ ಲಾಲ್ ಶರ್ಮಾ ಅವರ ರಾಜಕೀಯ ಪಯಣವು ಗಮನಾರ್ಹ ಸಾಧನೆಗಳಿಂದ ಗುರುತಿಸಲ್ಪಟ್ಟಿದೆ. ನಾಲ್ಕು ಬಾರಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. 2023ರ ಚುನಾವಣೆಯಲ್ಲಿ 97,081 ಮತಗಳನ್ನು ಪಡೆದು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಪುಷ್ಪೇಂದ್ರ ಭಾರದ್ವಾಜ್ ವಿರುದ್ಧ 145,162 ಮತಗಳನ್ನು ಗಳಿಸುವ ಮೂಲಕ ಶರ್ಮಾ ಸಂಗನೇರ್ ಅಸೆಂಬ್ಲಿ ಸ್ಥಾನವನ್ನು ಗೆದ್ದಿದ್ದರು. ಇವರು ಮೊದಲ ಬಾರಿಗೆ ಶಾಸಕರಾಗಿದ್ದಾರೆ. ಶರ್ಮಾ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮತ್ತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೊಂದಿಗೆ ಸಂಬಂಧ ಹೊಂದಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 4:29 pm, Tue, 12 December 23