2022 ವಿಧಾನಸಭಾ ಚುನಾವಣೆಗೆ ಬಿಜೆಪಿ ಉಸ್ತುವಾರಿ ನೇಮಕ; ಉತ್ತರ ಪ್ರದೇಶಕ್ಕೆ ಧರ್ಮೇಂದ್ರ ಪ್ರಧಾನ್, ಉತ್ತರಾಖಂಡಕ್ಕೆ ಪ್ರಲ್ಹಾದ್ ಜೋಶಿ

2022 Assembly polls: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ರಾಜಕೀಯವಾಗಿ ಮಹತ್ವದ ಉತ್ತರಪ್ರದೇಶದ ಉಸ್ತುವಾರಿ ನೀಡಲಾಗಿದೆ. ಅವರ ಸಹ-ಉಸ್ತುವಾರಿಗಳಾಗಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಕೇಂದ್ರ ಸಚಿವ ಅನುರಾಗ್ ಠಾಕೂರ್, ರಾಜ್ಯ ಸಚಿವ (ಎಂಒಎಸ್), ಸಂಸದೀಯ ವ್ಯವಹಾರಗಳ ಸಚಿವ ಅರ್ಜುನ್ ರಾಮ್ ಮೇಘ್ವಾಲ್...

2022 ವಿಧಾನಸಭಾ ಚುನಾವಣೆಗೆ ಬಿಜೆಪಿ ಉಸ್ತುವಾರಿ ನೇಮಕ; ಉತ್ತರ ಪ್ರದೇಶಕ್ಕೆ ಧರ್ಮೇಂದ್ರ ಪ್ರಧಾನ್, ಉತ್ತರಾಖಂಡಕ್ಕೆ ಪ್ರಲ್ಹಾದ್ ಜೋಶಿ
ಬಿಜೆಪಿ ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Sep 08, 2021 | 2:44 PM

ದೆಹಲಿ: ಭಾರತೀಯ ಜನತಾ ಪಾರ್ಟಿ (BJP) ಮುಂಬರುವ ವಿಧಾನಸಭಾ ಚುನಾವಣೆ  (2022 Assembly polls) ನಡೆಯಲಿರುವ ನಾಲ್ಕು ರಾಜ್ಯಗಳ ಉಸ್ತುವಾರಿ ವಹಿಸಲಿರುವ ನಾಯಕರ ಹೆಸರು ಘೋಷಿಸಿದೆ. ರಾಜ್ಯ ಮತ್ತು ಪಕ್ಷದ ಪದಾಧಿಕಾರಿಗಳ ನೆರವಿನಿಂದ ಕೇಂದ್ರ ಸಚಿವರಿಗೆ ಉತ್ತರ ಪ್ರದೇಶ, ಉತ್ತರಾಖಂಡ, ಮಣಿಪುರ ಮತ್ತು ಗೋವಾದಂತಹ ರಾಜ್ಯಗಳ ಉಸ್ತುವಾರಿಯನ್ನು ನೀಡಲಾಗಿದೆ, ಅಲ್ಲಿ ಪಕ್ಷವು ಅಧಿಕಾರ ಉಳಿಸಿಕೊಳ್ಳಲು ಸ್ಪರ್ಧಿಸುತ್ತಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ರಾಜಕೀಯವಾಗಿ ಮಹತ್ವದ ಉತ್ತರಪ್ರದೇಶದ ಉಸ್ತುವಾರಿ ನೀಡಲಾಗಿದೆ. ಅವರ ಸಹ-ಉಸ್ತುವಾರಿಗಳಾಗಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಕೇಂದ್ರ ಸಚಿವ ಅನುರಾಗ್ ಠಾಕೂರ್, ರಾಜ್ಯ ಸಚಿವ (ಎಂಒಎಸ್), ಸಂಸದೀಯ ವ್ಯವಹಾರಗಳ ಸಚಿವ ಅರ್ಜುನ್ ರಾಮ್ ಮೇಘ್ವಾಲ್, ಕೃಷಿ ಮತ್ತು ರೈತರ ಕಲ್ಯಾಣದ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಶಿಕ್ಷಣ ಸಚಿವಾಲಯದ ರಾಜ್ಯ ಸಚಿವೆ ಅನ್ನಪೂರ್ಣ ದೇವಿ, ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸರೋಜ್ ಪಾಂಡೆ, ಸಂಸದರಾದ ವಿವೇಕ್ ಠಾಕೂರ್ ಮತ್ತು ಹರ್ಯಾಣದ ಮಾಜಿ ಸಚಿವ ಕ್ಯಾಪ್ಟನ್ ಅಭಿಮನ್ಯು ಅವರಿಗೆ ಹೊಣೆ ನೀಡಲಾಗಿದೆ.

ಸಂಸದೀಯ ವ್ಯವಹಾರಗಳ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಉತ್ತರಾಖಂಡದ ಉಸ್ತುವಾರಿ ನೀಡಲಾಗಿದೆ. ಒಂದು ವರ್ಷದೊಳಗೆ ಬಿಜೆಪಿ ಮೂವರು ಮುಖ್ಯಮಂತ್ರಿಗಳನ್ನು ಬದಲಿಸಿದ ರಾಜ್ಯಕ್ಕೆ ಪಶ್ಚಿಮ ಬಂಗಾಳದ ಸಂಸದ ಲಾಕೆಟ್ ಚಟರ್ಜಿ ಮತ್ತು ಪಕ್ಷದ ವಕ್ತಾರ ಆರ್ ಪಿ ಸಿಂಗ್ ಅವರು ಸಹ-ಉಸ್ತುವಾರಿಗಳಾಗಿರುತ್ತಾರೆ. ಜಲಶಕ್ತಿ ಕೇಂದ್ರ ಸಚಿವ ಗಜೇಂದ್ರ ಶೇಖಾವತ್ ಅವರಿಗೆ ಪಂಜಾಬ್ ಉಸ್ತುವಾರಿಯನ್ನು ನೀಡಲಾಗಿದೆ, ಅಲ್ಲಿ ಪಕ್ಷವು ತನ್ನ ಮಿತ್ರ ಪಕ್ಷವಾದ ಶಿರೋಮಣಿ ಅಕಾಲಿ ದಳದೊಂದಿಗೆ ತನ್ನ ಸಂಬಂಧವನ್ನು ಕಡಿದುಕೊಂಡ ನಂತರ ಮೊದಲ ಬಾರಿಗೆ ಸ್ವಂತವಾಗಿ ಸ್ಪರ್ಧಿಸಲಿದೆ. ಪಕ್ಷವು ರಾಜ್ಯದಲ್ಲಿ ಕಠಿಣ ಕೆಲಸವನ್ನು ಎದುರಿಸುತ್ತಿದೆ, ಅಲ್ಲಿನ ರೈತರು ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಧರಣಿಯಲ್ಲಿ ಮುಂಚೂಣಿಯಲ್ಲಿದ್ದಾರೆ. ನಗರಾಭಿವೃದ್ಧಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಮತ್ತು ಲೋಕಸಭಾ ಸಂಸದ ವಿನೋದ್ ಚಾವ್ಡಾ ಪಂಜಾಬಿನಲ್ಲಿ ಸಹ-ಉಸ್ತುವಾರಿಗಳಾಗಿರುತ್ತಾರೆ.

ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಮತ್ತು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆಯ ಸಚಿವ ಭೂಪೇಂದ್ರ ಯಾದವ್ ಮಣಿಪುರದ ಉಸ್ತುವಾರಿ ವಹಿಸಲಿದ್ದಾರೆ. ಸಾಮಾಜಿಕ ನ್ಯಾಯ ಸಚಿವಾಲಯದ ರಾಜ್ಯ ಸಚಿವೆ ಪ್ರತಿಮಾ ಭೌಮಿಕ್ ಮತ್ತು ಅಸ್ಸಾಂ ಸಚಿವ ಅಶೋಕ್ ಸಿಂಘಾಲ್ ಅವರನ್ನು ಮಣಿಪುರಕ್ಕೆ ಸಹ-ಉಸ್ತುವಾರಿಗಳನ್ನಾಗಿ ನೇಮಿಸಲಾಗಿದೆ.

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಗೋವಾ ಉಸ್ತುವಾರಿಯಾಗಿ ನೇಮಿಸಲಾಗಿದೆ. ರೈಲ್ವೆ ಮತ್ತು ಜವಳಿ ರಾಜ್ಯ ಸಚಿವ ದರ್ಶನಾ ಜರ್ದೋಷ್ ಮತ್ತು ಈಶಾನ್ಯ ಪ್ರದೇಶದ ಸಂಸ್ಕೃತಿ, ಪ್ರವಾಸೋದ್ಯಮ ಮತ್ತು ಅಭಿವೃದ್ಧಿಯ ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಅವರು ಗೋವಾದ ಸಹ-ಉಸ್ತುವಾರಿಗಳಾಗಿರುತ್ತಾರೆ.

ಇದನ್ನೂ ಓದಿಪಶ್ಚಿಮ ಬಂಗಾಳ ಬಿಜೆಪಿ ಸಂಸದನ ಮನೆ ಹೊರಗೆ ಮೂರು ಬಾಂಬ್​ ಸ್ಫೋಟ; ಟಿಎಂಸಿ ಮೇಲೆ ಆರೋಪ

(BJP announces state in-charges for 2022 Assembly polls for four states)

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್