AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ ವಿಧಾನಸಭಾ ಚುನಾವಣೆ ಉಸ್ತುವಾರಿಯಾಗಿ ಬಿಜೆಪಿಯಿಂದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ನೇಮಕ

ಬಿಹಾರದ ಎಲ್ಲಾ 243 ಕ್ಷೇತ್ರಗಳಿಗೆ ವಿಧಾನಸಭೆ ಚುನಾವಣೆ ಅಕ್ಟೋಬರ್ ಅಥವಾ ನವೆಂಬರ್ 2025ರಲ್ಲಿ ನಡೆಯಲಿದೆ. ಹಿಂದಿನ ವಿಧಾನಸಭಾ ಚುನಾವಣೆಗಳು ಅಕ್ಟೋಬರ್-ನವೆಂಬರ್ 2020ರಲ್ಲಿ ನಡೆದಿದ್ದವು. ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗಳಿಗೆ ನಾಯಕತ್ವದ ಕುರಿತು ಬಿಜೆಪಿ ಮಹತ್ವದ ಘೋಷಣೆ ಮಾಡಿದೆ. ನವೆಂಬರ್‌ನಲ್ಲಿ ನಡೆಯಲಿರುವ ನಿರ್ಣಾಯಕ ಬಿಹಾರ ಚುನಾವಣೆಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಚುನಾವಣಾ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.

ಬಿಹಾರ ವಿಧಾನಸಭಾ ಚುನಾವಣೆ ಉಸ್ತುವಾರಿಯಾಗಿ ಬಿಜೆಪಿಯಿಂದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ನೇಮಕ
Dharmendra Pradhan
ಸುಷ್ಮಾ ಚಕ್ರೆ
|

Updated on:Sep 25, 2025 | 5:29 PM

Share

ನವದೆಹಲಿ, ಸೆಪ್ಟೆಂಬರ್ 25: ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗೆ (Bihar Election Elections) ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಚುನಾವಣಾ ಉಸ್ತುವಾರಿಯನ್ನಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಇಂದು ನೇಮಿಸಿದೆ. ಅವರ ಜೊತೆಗೆ, ಕೇಂದ್ರ ಸಚಿವ ಸಿ.ಆರ್ ಪಾಟೀಲ್ ಮತ್ತು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರನ್ನು ಸಹ-ಪ್ರಭಾರಿಗಳನ್ನಾಗಿ ಹೆಸರಿಸಲಾಗಿದೆ.

ಬಿಹಾರ ವಿಧಾನಸಭೆಯ ಎಲ್ಲಾ 243 ಸ್ಥಾನಗಳಿಗೆ ಚುನಾವಣೆ ಅಕ್ಟೋಬರ್-ನವೆಂಬರ್ 2025ರಲ್ಲಿ ನಡೆಯಲಿದೆ. ಹಿಂದಿನ ಚುನಾವಣೆಗಳು ಅಕ್ಟೋಬರ್-ನವೆಂಬರ್ 2020ರಲ್ಲಿ ನಡೆದವು. ನಂತರ ಎನ್‌ಡಿಎ ನಿತೀಶ್ ಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ಮಾಡಿ ಸರ್ಕಾರ ರಚಿಸಿತು. ಆಗಸ್ಟ್ 2022ರಲ್ಲಿ ಜೆಡಿಯು ಎನ್‌ಡಿಎ ಜೊತೆಗಿನ ಸಂಬಂಧವನ್ನು ಮುರಿದು ಆರ್‌ಜೆಡಿ ನೇತೃತ್ವದ ಮಹಾಘಟಬಂಧನ್‌ಗೆ ಸೇರಿತು. ಆದರೆ ಜನವರಿ 2024ರಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಗೆ ಮರಳಿತು. ಇದರಿಂದ ಮತ್ತೊಮ್ಮೆ ನಿತೀಶ್ ಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸಿತು.

ಇದನ್ನೂ ಓದಿ: ನುಸುಳುಕೋರರನ್ನು ದೇಶದಿಂದ ಹೊರಹಾಕುತ್ತೇವೆ; ಬಿಹಾರ ರ್ಯಾಲಿಯಲ್ಲಿ ಆರ್‌ಜೆಡಿ, ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಪಶ್ಚಿಮ ಬಂಗಾಳ ಚುನಾವಣಾ ಉಸ್ತುವಾರಿ:

ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಕೇಂದ್ರ ಸಚಿವ ಭೂಪೇಂದರ್ ಯಾದವ್ ಅವರನ್ನು ಚುನಾವಣಾ ಉಸ್ತುವಾರಿಯನ್ನಾಗಿ ನೇಮಿಸಿದೆ. ತ್ರಿಪುರದ ಮಾಜಿ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಅವರನ್ನು ಸಹ-ಪ್ರಭಾರಿಯಾಗಿ ಹೆಸರಿಸಲಾಗಿದೆ.

ಇದನ್ನೂ ಓದಿ: ಬಿಹಾರದಲ್ಲಿ ಹೊಸ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ; ಏನಿದರ ವಿಶೇಷತೆ?

ತಮಿಳುನಾಡು ಚುನಾವಣಾ ಉಸ್ತುವಾರಿ:

ಬಿಜೆಪಿ ಬೈಜಯಂತ್ ಪಾಂಡ ಅವರನ್ನು ತಮಿಳುನಾಡಿಗೆ ಪಕ್ಷದ ಚುನಾವಣಾ ಉಸ್ತುವಾರಿಯನ್ನಾಗಿ ನೇಮಿಸಿದ್ದರೆ, ಮುರಳೀಧರ್ ಮೊಹೋಲ್ ಅವರನ್ನು ಬಿಹಾರ ವಿಧಾನಸಭಾ ಚುನಾವಣೆಗೆ ಸಹ-ಪ್ರಭಾರಿಯಾಗಿ ನೇಮಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:27 pm, Thu, 25 September 25

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ