
ನವದೆಹಲಿ, ಸೆಪ್ಟೆಂಬರ್ 25: ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗೆ (Bihar Election Elections) ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಚುನಾವಣಾ ಉಸ್ತುವಾರಿಯನ್ನಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಇಂದು ನೇಮಿಸಿದೆ. ಅವರ ಜೊತೆಗೆ, ಕೇಂದ್ರ ಸಚಿವ ಸಿ.ಆರ್ ಪಾಟೀಲ್ ಮತ್ತು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರನ್ನು ಸಹ-ಪ್ರಭಾರಿಗಳನ್ನಾಗಿ ಹೆಸರಿಸಲಾಗಿದೆ.
ಬಿಹಾರ ವಿಧಾನಸಭೆಯ ಎಲ್ಲಾ 243 ಸ್ಥಾನಗಳಿಗೆ ಚುನಾವಣೆ ಅಕ್ಟೋಬರ್-ನವೆಂಬರ್ 2025ರಲ್ಲಿ ನಡೆಯಲಿದೆ. ಹಿಂದಿನ ಚುನಾವಣೆಗಳು ಅಕ್ಟೋಬರ್-ನವೆಂಬರ್ 2020ರಲ್ಲಿ ನಡೆದವು. ನಂತರ ಎನ್‌ಡಿಎ ನಿತೀಶ್ ಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ಮಾಡಿ ಸರ್ಕಾರ ರಚಿಸಿತು. ಆಗಸ್ಟ್ 2022ರಲ್ಲಿ ಜೆಡಿಯು ಎನ್‌ಡಿಎ ಜೊತೆಗಿನ ಸಂಬಂಧವನ್ನು ಮುರಿದು ಆರ್‌ಜೆಡಿ ನೇತೃತ್ವದ ಮಹಾಘಟಬಂಧನ್‌ಗೆ ಸೇರಿತು. ಆದರೆ ಜನವರಿ 2024ರಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಗೆ ಮರಳಿತು. ಇದರಿಂದ ಮತ್ತೊಮ್ಮೆ ನಿತೀಶ್ ಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸಿತು.
BJP appoints party leader Dharmendra Pradhan as its Bihar election incharge. Party’s CR Paatil and Keshav Prasad Maurya appointed as co-incharges. pic.twitter.com/cZFz09ybO8
— ANI (@ANI) September 25, 2025
ಇದನ್ನೂ ಓದಿ: ನುಸುಳುಕೋರರನ್ನು ದೇಶದಿಂದ ಹೊರಹಾಕುತ್ತೇವೆ; ಬಿಹಾರ ರ್ಯಾಲಿಯಲ್ಲಿ ಆರ್‌ಜೆಡಿ, ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
ಪಶ್ಚಿಮ ಬಂಗಾಳ ಚುನಾವಣಾ ಉಸ್ತುವಾರಿ:
ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಕೇಂದ್ರ ಸಚಿವ ಭೂಪೇಂದರ್ ಯಾದವ್ ಅವರನ್ನು ಚುನಾವಣಾ ಉಸ್ತುವಾರಿಯನ್ನಾಗಿ ನೇಮಿಸಿದೆ. ತ್ರಿಪುರದ ಮಾಜಿ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಅವರನ್ನು ಸಹ-ಪ್ರಭಾರಿಯಾಗಿ ಹೆಸರಿಸಲಾಗಿದೆ.
ಇದನ್ನೂ ಓದಿ: ಬಿಹಾರದಲ್ಲಿ ಹೊಸ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ; ಏನಿದರ ವಿಶೇಷತೆ?
BJP appoints party leader Baijayant Panda as its Tamil Nadu election incharge. Murlidhar Mohol appointed Tamil Nadu election co-incharge pic.twitter.com/BFfed3swAr
— ANI (@ANI) September 25, 2025
ತಮಿಳುನಾಡು ಚುನಾವಣಾ ಉಸ್ತುವಾರಿ:
ಬಿಜೆಪಿ ಬೈಜಯಂತ್ ಪಾಂಡ ಅವರನ್ನು ತಮಿಳುನಾಡಿಗೆ ಪಕ್ಷದ ಚುನಾವಣಾ ಉಸ್ತುವಾರಿಯನ್ನಾಗಿ ನೇಮಿಸಿದ್ದರೆ, ಮುರಳೀಧರ್ ಮೊಹೋಲ್ ಅವರನ್ನು ಬಿಹಾರ ವಿಧಾನಸಭಾ ಚುನಾವಣೆಗೆ ಸಹ-ಪ್ರಭಾರಿಯಾಗಿ ನೇಮಿಸಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:27 pm, Thu, 25 September 25