ಬಿಜೆಪಿ ಉಸ್ತುವಾರಿಯಾಗಿ ಮಹಾರಾಷ್ಟ್ರ ಚುನಾವಣೆಗೆ ಭೂಪೇಂದರ್ ಯಾದವ್, ಜಾರ್ಖಂಡ್‌ಗೆ ಶಿವರಾಜ್ ಸಿಂಗ್ ಚೌಹಾಣ್ ನೇಮಕ

|

Updated on: Jun 17, 2024 | 4:28 PM

ಮುಂಬರುವ 4 ರಾಜ್ಯಗಳ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಮೇಲುಸ್ತುವಾರಿಗಳನ್ನು ನೇಮಕ ಮಾಡಿದೆ. ಕೇಂದ್ರ ಸಚಿವರಾದ ಭೂಪೇಂದರ್ ಯಾದವ್, ಶಿವರಾಜ್ ಸಿಂಗ್ ಚೌಹಾಣ್, ಅಶ್ವಿನಿ ವೈಷ್ಣವ್, ಧರ್ಮೇಂದ್ರ ಪ್ರಧಾನ್, ಜಿ. ಕಿಶನ್ ರೆಡ್ಡಿ ಮತ್ತು ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ ಮತ್ತು ತ್ರಿಪುರಾ ಮಾಜಿ ಸಿಎಂ ಬಿಪ್ಲಬ್ ಕುಮಾರ್ ದೇಬ್ ಅವರನ್ನು ನೇಮಿಸಲಾಗಿದೆ.

ಬಿಜೆಪಿ ಉಸ್ತುವಾರಿಯಾಗಿ ಮಹಾರಾಷ್ಟ್ರ ಚುನಾವಣೆಗೆ ಭೂಪೇಂದರ್ ಯಾದವ್, ಜಾರ್ಖಂಡ್‌ಗೆ ಶಿವರಾಜ್ ಸಿಂಗ್ ಚೌಹಾಣ್ ನೇಮಕ
ಭೂಪೇಂದರ್ ಯಾದವ್
Follow us on

ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ಇಂದು (ಸೋಮವಾರ) ಮಹಾರಾಷ್ಟ್ರ (Maharashtra Bypolls) ಮತ್ತು ಜಾರ್ಖಂಡ್‌ನಲ್ಲಿ (Jharkhand Bypolls) ಮುಂಬರುವ ವಿಧಾನಸಭೆ ಚುನಾವಣೆಗೆ ಕ್ರಮವಾಗಿ ಕೇಂದ್ರ ಸಚಿವರಾದ ಭೂಪೇಂದರ್ ಯಾದವ್ ಮತ್ತು ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಚುನಾವಣಾ ಉಸ್ತುವಾರಿಗಳನ್ನಾಗಿ ನೇಮಿಸಿದೆ. ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವರಾದ ಭೂಪೇಂದರ್ ಯಾದವ್ ಅವರಿಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮಹಾರಾಷ್ಟ್ರದ ಚುನಾವಣಾ ಸಹ-ಪ್ರಭಾರಿಯಾಗಿ ಸಹಾಯ ಮಾಡುತ್ತಾರೆ. ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಚುನಾವಣಾ ಸಹ-ಪ್ರಭಾರಿಯಾಗಿ ಬೆಂಬಲಿಸುತ್ತಾರೆ.

ಬಿಜೆಪಿಯು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಕಲ್ಲಿದ್ದಲು ಸಚಿವ ಜಿ. ಕಿಶನ್ ರೆಡ್ಡಿ ಅವರನ್ನು ಕ್ರಮವಾಗಿ ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಚುನಾವಣಾ ಉಸ್ತುವಾರಿಗಳನ್ನಾಗಿ ನೇಮಿಸಿದೆ. ಹರಿಯಾಣದಲ್ಲಿ ಚುನಾವಣಾ ಸಹ-ಪ್ರಭಾರಿಯಾಗಿ ತ್ರಿಪುರಾ ಮಾಜಿ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಅವರು ಧರ್ಮೇಂದ್ರ ಪ್ರಧಾನ್ ಅವರಿಗೆ ಸಹಾಯ ಮಾಡುತ್ತಾರೆ.

ಮಹಾರಾಷ್ಟ್ರ, ಹರಿಯಾಣ ಮತ್ತು ಜಾರ್ಖಂಡ್ ಈ ವರ್ಷದ ಕೊನೆಯಲ್ಲಿ ಚುನಾವಣೆಗಳು ನಡೆಯಲಿವೆ. ಆದರೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್​ಗೂ ಮೊದಲು ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ಇದನ್ನೂ ಓದಿ: ಬಿಜೆಪಿಗೆ ದುರಹಂಕಾರ ಎಂದು ಟೀಕಿಸಿದ ನಂತರ ಯು-ಟರ್ನ್ ಹೊಡೆದ ಆರ್​ಎಸ್​ಎಸ್​ ನಾಯಕ

ಬಿಜೆಪಿ ತನ್ನ ಮಿತ್ರಪಕ್ಷಗಳೊಂದಿಗೆ ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ಅಧಿಕಾರ ನಡೆಯುತ್ತಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ, ಶಿವಸೇನೆ (ಶಿಂಧೆ ಬಣ) ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ- ಅಜಿತ್ ಪವಾರ್) ಮೈತ್ರಿ ಮಾಡಿಕೊಂಡಿದ್ದು, ಏಕನಾಥ್ ಶಿಂಧೆ ಮುಖ್ಯಮಂತ್ರಿಯಾಗಿದ್ದಾರೆ. ಬಿಜೆಪಿಯ ನಯಾಬ್ ಸಿಂಗ್ ಸೈನಿ ಅವರು ಸ್ವತಂತ್ರ ಮತ್ತು ಸಣ್ಣ ಪಕ್ಷಗಳ ಬೆಂಬಲದೊಂದಿಗೆ ಹರಿಯಾಣ ಮುಖ್ಯಮಂತ್ರಿಯಾಗಿದ್ದಾರೆ.

ಜಾರ್ಖಂಡ್‌ನಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಮತ್ತು ಕಾಂಗ್ರೆಸ್ ಮೈತ್ರಿಕೂಟ ಅಧಿಕಾರದಲ್ಲಿದೆ. ಹೇಮಂತ್ ಸೋರೆನ್ ಬಂಧನದ ನಂತರ ಜೆಎಂಎಂನ ಚಂಪೈ ಸೊರೆನ್ ಮುಖ್ಯಮಂತ್ರಿಯಾಗಿದ್ದಾರೆ.

ಮತ್ತೊಂದು ಬೆಳವಣಿಗೆಯಲ್ಲಿ, ಆಮ್ ಆದ್ಮಿ ಪಕ್ಷ ಮತ್ತು ಬಿಜೆಪಿ ಪಂಜಾಬ್‌ನ ಜಲಂಧರ್ ಪಶ್ಚಿಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆಗೆ ತಮ್ಮ ಅಭ್ಯರ್ಥಿಗಳನ್ನು ಘೋಷಿಸಿ, ಇತ್ತೀಚಿನ ದಿನಗಳಲ್ಲಿ ಪಕ್ಷಗಳನ್ನು ಬದಲಾಯಿಸಿದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಆಮ್ ಆದ್ಮಿ ಪಕ್ಷ ತನ್ನ ಅಭ್ಯರ್ಥಿಯಾಗಿ ಮೊಹಿಂದರ್ ಭಗತ್ ಅವರನ್ನು ಹೆಸರಿಸಿದರೆ, ಬಿಜೆಪಿಯು ಉಪಚುನಾವಣೆಗೆ ಶೀತಲ್ ಅಂಗುರಾಲ್ ಅವರನ್ನು ಕಣಕ್ಕಿಳಿಸಿದೆ.

ಇದನ್ನೂ ಓದಿ: ಪಂಜಾಬ್, ಪಶ್ಚಿಮ ಬಂಗಾಳ ವಿಧಾನಸಭಾ ಉಪಚುನಾವಣೆಗೆ ಬಿಜೆಪಿಯಿಂದ ಅಭ್ಯರ್ಥಿಗಳ ಘೋಷಣೆ

ಜಲಂಧರ್ ಪಶ್ಚಿಮ ವಿಧಾನಸಭಾ ಕ್ಷೇತ್ರಕ್ಕೆ ಜುಲೈ 10ರಂದು ಉಪಚುನಾವಣೆ ನಡೆಯಲಿದ್ದು, ಜುಲೈ 13ರಂದು ಮತ ಎಣಿಕೆ ನಡೆಯಲಿದೆ. ಅಂಗುರಲ್ ಅವರು ಆಮ್ ಆದ್ಮಿ ಪಕ್ಷದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಉಪಚುನಾವಣೆ ಅನಿವಾರ್ಯವಾಗಿತ್ತು. ಮೊಹಿಂದರ್ ಭಗತ್ ಅವರು ಹಿಂದಿನ ಎಸ್ಎಡಿ-ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಭಗತ್ ಚುನ್ನಿ ಲಾಲ್ ಅವರ ಮಗ. ಅವರು ಕಳೆದ ವರ್ಷ ಭಗತ್ ಬಿಜೆಪಿ ತೊರೆದು ಎಎಪಿ ಸೇರಿದ್ದರು. ಅವರು 2022ರ ಪಂಜಾಬ್ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನಲ್ಲಿ ಜಲಂಧರ್ ಪಶ್ಚಿಮ ಕ್ಷೇತ್ರದಿಂದ ಸ್ಪರ್ಧಿಸಿ ಸೋಲನ್ನು ಅನುಭವಿಸಿದ್ದರು.

ಜಲಂಧರ್ ಪಶ್ಚಿಮ ಕ್ಷೇತ್ರದಿಂದ ಎಎಪಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಅಂಗುರಲ್ ಅವರೊಂದಿಗೆ ಬಿಜೆಪಿ ತೆರಳಿದೆ. 2022ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಅಂಗುರಲ್ ಅವರು ಆಗ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸುಶೀಲ್ ರಿಂಕು ಅವರನ್ನು ಸೋಲಿಸುವ ಮೂಲಕ ಜಲಂಧರ್ ಪಶ್ಚಿಮ ವಿಧಾನಸಭಾ ಕ್ಷೇತ್ರದಿಂದ ಗೆದ್ದಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:27 pm, Mon, 17 June 24