ಲೋಕಸಭೆ ಚುನಾವಣೆಗೆ ಮುನ್ನ 4 ರಾಜ್ಯಗಳ ಅಧ್ಯಕ್ಷರನ್ನು ನೇಮಕ ಮಾಡಿದ ಬಿಜೆಪಿ

ತೆಲಂಗಾಣ ಬಿಜೆಪಿ ಅಧ್ಯಕ್ಷರಾಗಿ ಜಿ ಕಿಶನ್ ರೆಡ್ಡಿ, ಆಂಧ್ರಪ್ರದೇಶದ ರಾಜ್ಯಾಧ್ಯಕ್ಷರಾಗಿ ಡಿ ಪುರಂದೇಶ್ವರಿ, ಜಾರ್ಖಂಡ್‌ನ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಾಬುಲಾಲ್ ಮರಾಂಡಿ ಮತ್ತು ಪಂಜಾಬ್ ಪಕ್ಷದ ರಾಜ್ಯಾಧ್ಯಕ್ಷರಾಗಿ ಸುನೀಲ್ ಜಾಖರ್ ಅವರನ್ನು ನೇಮಕ ಮಾಡಲಾಗಿದೆ.

ಲೋಕಸಭೆ ಚುನಾವಣೆಗೆ ಮುನ್ನ 4 ರಾಜ್ಯಗಳ ಅಧ್ಯಕ್ಷರನ್ನು ನೇಮಕ ಮಾಡಿದ ಬಿಜೆಪಿ
ಜೆಪಿ ನಡ್ಡಾ
Follow us
ರಶ್ಮಿ ಕಲ್ಲಕಟ್ಟ
|

Updated on:Jul 04, 2023 | 4:04 PM

ದೆಹಲಿ: ಪ್ರಮುಖ ರಾಜ್ಯಗಳ ಚುನಾವಣೆಗಳು ಮತ್ತು 2024ರ ಲೋಕಸಭೆ ಚುನಾವಣೆಗೆ (2024 Lok Sabha polls) ಮುನ್ನ ಬಿಜೆಪಿ (BJP) ಮಂಗಳವಾರ ನಾಲ್ಕು ರಾಜ್ಯಗಳಲ್ಲಿ ತನ್ನ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಿದೆ. ತೆಲಂಗಾಣ (Telangana) ಬಿಜೆಪಿ ಅಧ್ಯಕ್ಷರಾಗಿ ಜಿ ಕಿಶನ್ ರೆಡ್ಡಿ (G Kishan Reddy), ಆಂಧ್ರಪ್ರದೇಶದ ರಾಜ್ಯಾಧ್ಯಕ್ಷರಾಗಿ ಡಿ ಪುರಂದೇಶ್ವರಿ, ಜಾರ್ಖಂಡ್‌ನ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಾಬುಲಾಲ್ ಮರಾಂಡಿ ಮತ್ತು ಪಂಜಾಬ್ ಪಕ್ಷದ ರಾಜ್ಯಾಧ್ಯಕ್ಷರಾಗಿ ಸುನೀಲ್ ಜಾಖರ್ ಅವರನ್ನು ನೇಮಕ ಮಾಡಲಾಗಿದೆ. ವಿಶೇಷವೆಂದರೆ ಜಾಖರ್ ಈ ಹಿಂದೆ ಪಂಜಾಬ್‌ನಲ್ಲಿ ಕಾಂಗ್ರೆಸ್‌ನ ರಾಜ್ಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ.

ತೆಲಂಗಾಣದಲ್ಲಿ ಚುನಾವಣಾ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಈಟಾಲ ರಾಜೇಂದರ್ ಅವರನ್ನು ನೇಮಿಸುವುದಾಗಿ ಬಿಜೆಪಿ ಘೋಷಿಸಿತು. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ ಎಲ್ ಸಂತೋಷ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಕ್ಷದಲ್ಲಿ ಸಂಘಟನಾ ಪುನರ್ರಚನೆಯ ಬಗ್ಗೆ ಚರ್ಚೆ ನಡೆದಿದೆ.

ಇದನ್ನೂ ಓದಿ: PM Modi in SCO Meet: ಭಯೋತ್ಪಾದನೆ ವಿಚಾರದಲ್ಲಿ ಯಾವುದೇ ದ್ವಂದ್ವ ನೀತಿ ಇರಬಾರದು: ಎಸ್‌ಸಿಒ ಸಭೆಯಲ್ಲಿ ಪ್ರಧಾನಿ ಮೋದಿ ಮಾತು

ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರ ರಾಜಧಾನಿಯಲ್ಲಿ ಸಚಿವರ ಮಂಡಳಿಯ ಸಭೆಯ ಅಧ್ಯಕ್ಷತೆ ವಹಿಸಿದ ಒಂದು ದಿನದ ನಂತರ ಈ ಘೋಷಣೆ ಬಂದಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:42 pm, Tue, 4 July 23

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ