AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಢೀರ್​ ಎಂದು ವಿದೇಶಕ್ಕೆ ಹೊರಟು ನಿಂತ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಬ್ರಿಟನ್​ನ ಆಕ್ಸ್​ಫರ್ಡ್ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ಫೆಲೋಶಿಪ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಯುಕೆ ವಿದೇಶಾಂಗ ಕಚೇರಿಯು 20 ವರ್ಷಗಳಿಗೂ ಹೆಚ್ಚು ಕಾಲ ಫೆಲೋಶಿಪ್ ಕಾರ್ಯಕ್ರಮವನ್ನು ನಡೆಸುತ್ತಿದೆ.

ದಿಢೀರ್​ ಎಂದು ವಿದೇಶಕ್ಕೆ ಹೊರಟು ನಿಂತ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ
ಅಣ್ಣಾಮಲೈ
ನಯನಾ ರಾಜೀವ್
|

Updated on: Aug 06, 2024 | 11:25 AM

Share

ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ವಿದೇಶಕ್ಕೆ ಹೊರಟು ನಿಂತಿದ್ದಾರೆ. ಉನ್ನತ ವ್ಯಾಸಂಗಕ್ಕಾಗಿ ಬ್ರಿಟನ್​ನ ಆಕ್ಸ್​ಫರ್ಡ್​ ವಿಶ್ವವಿದ್ಯಾಲಯಕ್ಕೆ ತೆರಳಲಿದ್ದಾರೆ. ಅಣ್ಣಾಮಲೈ ಅವರ ಈ ಮನವಿಗೆ ಬಿಜೆಪಿ ಅನುಮೋದನೆ ನೀಡಿದೆ ಆದರೆ ಅಲ್ಲಿಯವರೆಗೆ ತಮಿಳುನಾಡು ಬಿಜೆಪಿಯ ಅಲ್ಪಾವಧಿಗೆ ಯಾರನ್ನೂ ರಾಜ್ಯಾಧ್ಯಕ್ಷರನ್ನಾಗಿ ಮಾಡುವುದಿಲ್ಲ ಎನ್ನುವ ಮಾತು ಕೂಡ ಕೇಳಿಬರುತ್ತಿದೆ. ಯುಕೆ ವಿದೇಶಾಂಗ ಕಚೇರಿಯು 20 ವರ್ಷಗಳಿಗೂ ಹೆಚ್ಚು ಕಾಲ ಫೆಲೋಶಿಪ್ ಕಾರ್ಯಕ್ರಮವನ್ನು ನಡೆಸುತ್ತಿದೆ. ಪ್ರತಿ ವರ್ಷವೂ ಭಾರತದಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಕೋರ್ಸ್​ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ರಾಜಕೀಯ ಮತ್ತು ಅಂತಾರಾಷ್ಟ್ರೀಯ ಸಂಬಂಧಗಳ ವಿಭಾಗದಲ್ಲಿ ನಡೆಯಲಿದೆ.

ಮೂರು ತಿಂಗಳ ಕಾಲ ಫೆಲೋಶಿಪ್ ಮುಂದುವರಿಸಲು ಮತ್ತು ಈ ಅವಧಿಯಲ್ಲಿ ಪಕ್ಷದ ಚಟುವಟಿಕೆಗಳಿಂದ ತಾತ್ಕಾಲಿಕ ವಿರಾಮವನ್ನು ತೆಗೆದುಕೊಳ್ಳುವಂತೆ ಅಣ್ಣಾಮಲೈ ಅವರ ಮನವಿಯನ್ನು ಪಕ್ಷದ ಹೈಕಮಾಂಡ್ ಒಪ್ಪಿಕೊಂಡಿದೆ ಎಂದು ಮೂಲವೊಂದು ದಿ ಪ್ರಿಂಟ್​ಗೆ ತಿಳಿಸಿದೆ. ಇದುವರೆಗೆ, ಅಣ್ಣಾಮಲೈ ಅನುಪಸ್ಥಿತಿಯಲ್ಲಿ ಬದಲಿ ಅಥವಾ ತಾತ್ಕಾಲಿಕ ವ್ಯವಸ್ಥೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ಪಕ್ಷದ ಚಟುವಟಿಕೆಗಳನ್ನುಎರಡನೇ ಹಂತದ ನಾಯಕರು ನೋಡಿಕೊಳ್ಳುತ್ತಾರೆ ಎಂದು ಮೂಲಗಳು ತಿಳಿಸಿದ್ದು, ಅಣ್ಣಾಮಲೈ ಅವರು ತಮ್ಮ ಫೆಲೋಶಿಪ್ ಮುಗಿದ ನಂತರ ಪಕ್ಷದ ಚಟುವಟಿಕೆಗಳಿಗೆ ಮರಳಲಿದ್ದಾರೆ ಎಂದು ಖಚಿತಪಡಿಸಿದ್ದಾರೆ.

ಒಂದು ತಿಂಗಳ ಹಿಂದೆ ಅಣ್ಣಾಮಲೈ ಫೆಲೋಶಿಪ್‌ಗೆ ಆಯ್ಕೆಯಾಗಿದ್ದರೂ, ಅವರು ಮತ್ತು ಇತರ ತಮಿಳುನಾಡು ಬಿಜೆಪಿ ನಾಯಕರು ಪಕ್ಷದ ಹೈಕಮಾಂಡ್ ಅವರಿಗೆ ಅನುಮತಿ ನೀಡಿದರೆ ಮಾತ್ರ ಮುಂದುವರೆಯುವುದಾಗಿ ಹೇಳಿದ್ದರು.

ಆಗಸ್ಟ್ 5 ರಂದು ಅಣ್ಣಾಮಲೈ ಅವರು ನವದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಉನ್ನತಾಧಿಕಾರಿಗಳಿಂದ ಹಸಿರು ನಿಶಾನೆ ದೊರೆತಿದೆ ಎಂದು ಮೂಲಗಳು ಖಚಿತಪಡಿಸಿವೆ. ಅವರು ಆಗಸ್ಟ್ 1 ರಂದು ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿ ಒಪ್ಪಿಗೆ ಪಡೆದಿದ್ದರು.

ಮತ್ತಷ್ಟು ಓದಿ: ಕರುಣಾನಿಧಿಯ ಮಗ ಆಗಿದ್ರೆ ಗೆಲ್ತಿದ್ದೆ, ನನ್ನಪ್ಪ ಕುಪ್ಪುಸ್ವಾಮಿ ಆದ ಕಾರಣ ಚುನಾವಣೆಯಲ್ಲಿ ಗೆಲ್ಲಲು ಸ್ವಲ್ಪ ಸಮಯ ಬೇಕು: ಅಣ್ಣಾಮಲೈ

ಭಾರತೀಯ ಪೊಲೀಸ್ ಸೇವೆಯ ಮಾಜಿ ಅಧಿಕಾರಿ ಅಣ್ಣಾಮಲೈ ಅವರು ಮೂರು ವರ್ಷಗಳಿಂದ ತಮಿಳುನಾಡಿನಲ್ಲಿ ಬಿಜೆಪಿಯನ್ನು ಮುನ್ನಡೆಸಿದ್ದಾರೆ. ಈ ಹಿಂದೆ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಜೊತೆ ಮೈತ್ರಿ ಮಾಡಿಕೊಳ್ಳುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಪಕ್ಷದ ಪ್ರಚಾರದ ಚುಕ್ಕಾಣಿ ಹಿಡಿದಿದ್ದರು, ಆದರೆ ಬಿಜೆಪಿ ಯಾವುದೇ ಸ್ಥಾನಗಳನ್ನು ಗೆಲ್ಲಲಿಲ್ಲ. ಬಿಜೆಪಿ ಭದ್ರಕೋಟೆ ಎಂದು ಪರಿಗಣಿಸಲಾದ ಕೊಯಮತ್ತೂರಿನಲ್ಲಿ ಗೆಲುವು ಸಾಧಿಸಲು ವಿಫಲರಾಗಿದ್ದಾರೆ.

ಐಪಿಎಸ್​ಗೆ ರಾಜೀನಾಮೆ ನೀಡಿದ ನಂತರ, ಅವರು ಆಗಸ್ಟ್ 2020 ರಲ್ಲಿ ಪಕ್ಷಕ್ಕೆ ಸೇರಿದರು. ಕೆಲವೇ ದಿನಗಳಲ್ಲಿ ಅವರನ್ನು ಉಪಾಧ್ಯಕ್ಷರನ್ನಾಗಿ ನೇಮಿಸಲಾಯಿತು. 8 ಜುಲೈ, 2021 ರಂದು, ಆಗಿನ ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್. ಮುರುಗನ್ ಅವರನ್ನು ಕೇಂದ್ರ ರಾಜ್ಯ ಸಚಿವರಾಗಿ ನೇಮಿಸಿದ ಕೂಡಲೇ, ಅಣ್ಣಾಮಲೈ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಬಡ್ತಿ ನೀಡಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ