AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assam Assembly Election Results: ಅಸ್ಸಾಂನಲ್ಲಿ ಮತ್ತೆ ಅಧಿಕಾರಕ್ಕೇರಲಿರುವ ಬಿಜೆಪಿ ನೀಡಿದ ಭರವಸೆಗಳೇನು?

ಅಸ್ಸಾಂ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಲು ಕ್ಷಣಗಣನೆ ಶುರುವಾಗಿದೆ. ಈಗಾಗಲೇ 126 ಸ್ಥಾನಗಳ ಪೈಕಿ 101 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿರುವ ಬಿಜೆಪಿ ಐತಿಹಾಸಿಕ ಗೆಲುವಿನ ಸಂಭ್ರಮದಲ್ಲಿದೆ. ಈ ಬಾರಿಯ ಚುನಾವಣೆಗೆ ಪ್ರಣಾಳಿಕೆಗಳನ್ನು ಬಿಡುಗಡೆ ಮಾಡುವಾಗ ಬಿಜೆಪಿ ಸಾಕಷ್ಟು ಅಧ್ಯಯನ ನಡೆಸಿತ್ತು. ಆಯಾ ರಾಜ್ಯಗಳ ಅವಶ್ಯಕತೆ, ವಿಪಕ್ಷದ ದೌರ್ಬಲ್ಯವನ್ನೆಲ್ಲ ಗಮನದಲ್ಲಿಟ್ಟುಕೊಂಡು ಸಂಕಲ್ಪ ಪತ್ರ ಬಿಡುಗಡೆ ಮಾಡಿತ್ತು. ಅಸ್ಸಾಂನಲ್ಲಿ ಬಿಜೆಪಿ ನೀಡಿದ ಭರವಸೆಗಳೇನು? ಯಾವ ಕಾರಣಕ್ಕೆ ಈ ಬಾರಿಯೂ ಮತದಾರರು ಬಿಜೆಪಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ?

Assam Assembly Election Results: ಅಸ್ಸಾಂನಲ್ಲಿ ಮತ್ತೆ ಅಧಿಕಾರಕ್ಕೇರಲಿರುವ ಬಿಜೆಪಿ ನೀಡಿದ ಭರವಸೆಗಳೇನು?
Pm Modi With Himanta Biswa SarmaImage Credit source: PTI
ಸುಷ್ಮಾ ಚಕ್ರೆ
|

Updated on: May 04, 2026 | 4:54 PM

Share

ಗುವಾಹಟಿ, ಮೇ 4: ಅಸ್ಸಾಂನಲ್ಲಿ ಈ ಬಾರಿಯೂ ಬಿಜೆಪಿ ಅಧಿಕಾರಕ್ಕೆ ಏರುವುದು ಖಚಿತವಾಗಿದೆ. ಮತ್ತೊಮ್ಮೆ ಹಿಮಂತ ಬಿಸ್ವ ಶರ್ಮಾ ಅವರೇ ಮುಖ್ಯಮಂತ್ರಿಯಾಗುವ ಸಾಧ್ಯತೆಯಿದೆ. ವಿಧಾನಸಭಾ ಚುನಾವಣೆಗೂ (Assam Assembly Elections) ಮುನ್ನ ಬಿಜೆಪಿ ನೀಡಿದ್ದ ಭರವಸೆಗಳೇನು? ಮತ್ತೊಮ್ಮೆ ಬಿಜೆಪಿಗೆ ಜನರು ಯಾವ ಕಾರಣಕ್ಕೆ ಮತ ಹಾಕಿರಬಹುದು? ಎಂಬ ಮಾಹಿತಿ ಇಲ್ಲಿದೆ. ಅಸ್ಸಾಂ ಜನರ ನಾಡಿಮಿಡಿತವನ್ನು ಅರ್ಥ ಮಾಡಿಕೊಂಡ ಬಿಜೆಪಿ ಅಲ್ಲಿನ ಜನರಿಗೆ 31 ಭರವಸೆಗಳನ್ನು ನೀಡಿತ್ತು. ಅವುಗಳಲ್ಲಿ ಪ್ರಮುಖ ಅಂಶಗಳ ಬಗ್ಗೆ ವಿವರ ಇಲ್ಲಿದೆ.

  1. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಮುಂದಿನ 3 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು.
  2. ‘ಲವ್ ಜಿಹಾದ್’ ಮತ್ತು ‘ಲ್ಯಾಂಡ್ ಜಿಹಾದ್’ ಅನ್ನು ಕೊನೆಗೊಳಿಸಲು ಪರಿಣಾಮಕಾರಿ ಕಾನೂನನ್ನು ಜಾರಿಗೆ ತರಲಾಗುವುದು.
  3. ಅಕ್ರಮ ವಲಸಿಗರ ಪತ್ತೆ ಮತ್ತು ತಳ್ಳುವಿಕೆ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ವಲಸಿಗರ (ಅಸ್ಸಾಂನಿಂದ ಹೊರಹಾಕುವಿಕೆ) ಕಾಯ್ದೆ, 1950 ಅನ್ನು ಜಾರಿಗೆ ತರುವ ಮೂಲಕ ಅಸ್ಸಾಂನ ಸ್ಥಳೀಯ ಜನರ ಭೂಮಿ, ಪರಂಪರೆ ಮತ್ತು ಘನತೆಯನ್ನು ರಕ್ಷಿಸಲಾಗುವುದು.
  4. ಛತ್ರಗಳು, ನಾಮ್‌ಘರ್‌ಗಳು, ದೇವಾಲಯಗಳು ಮತ್ತು ಇತರ ಪೂಜಾ ಸ್ಥಳಗಳ ಅತಿಕ್ರಮಣಗೊಂಡ ಭೂ ಭಾಗಗಳನ್ನು ಮುಕ್ತಗೊಳಿಸಲಾಗುವುದು.
  5. ಅಸ್ಸಾಂ ಅನ್ನು ಭಾರತದ ಪೂರ್ವ ದ್ವಾರವಾಗಿ ಇರಿಸಲು 5 ಲಕ್ಷ ಕೋಟಿ ರೂ.ಗಳನ್ನು ಹೂಡಿಕೆ ಮಾಡಲಾಗುವುದು.
  6. ರಾಜ್ಯವನ್ನು ಪ್ರವಾಹ ಮುಕ್ತಗೊಳಿಸಲು 18,000 ಕೋಟಿ ರೂ.ಗಳಿಗಿಂತ ಹೆಚ್ಚಿನ ಹೂಡಿಕೆಯೊಂದಿಗೆ ‘ಬಾದ್ ಮುಕ್ತ್ ಅಸ್ಸಾಂ ಮಿಷನ್’ ಅನ್ನು ಪ್ರಾರಂಭಿಸಲಾಗುವುದು.
  7. 2 ಲಕ್ಷ ಸರ್ಕಾರಿ ಉದ್ಯೋಗಗಳನ್ನು ಒದಗಿಸಲಾಗುವುದು.
  8. ಒಂದು ಜಿಲ್ಲೆಗೆ ಒಂದು ವೈದ್ಯಕೀಯ ಕಾಲೇಜು, ಒಂದು ವಿಶ್ವವಿದ್ಯಾಲಯ, ಒಂದು ಎಂಜಿನಿಯರಿಂಗ್ ಕಾಲೇಜು.
  9. ಒರುನೋಡಿ ಯೋಜನೆಯಡಿ ಮಹಿಳೆಯರಿಗೆ ಮಾಸಿಕ ನೇರ ಬ್ಯಾಂಕ್ ವರ್ಗಾವಣೆಯನ್ನು 3,000 ರೂ.ಗಳಿಗೆ ಹೆಚ್ಚಿಸಲಾಗುವುದು.
  10. ಮುಂದಿನ 5 ವರ್ಷಗಳಲ್ಲಿ ಟೀ ತೋಟದ ಕಾರ್ಮಿಕರ ವೇತನವನ್ನು ದಿನಕ್ಕೆ 500 ರೂ.ಗಳಿಗೆ ಹೆಚ್ಚಿಸಲಾಗುವುದು. ಚಹಾ ತೋಟದ ಕಾರ್ಮಿಕರಿಗೆ ಮನೆಯನ್ನೂ ನೀಡಲಾಗುವುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್