ಮುಂದಿನ ಚುನಾವಣೆಗಳಲ್ಲಿ ಬಿಜೆಪಿ ಸೋಲಿಸಲು ಕರ್ನಾಟಕ ತಂತ್ರವೇ ಮಾದರಿ: ರಾಹುಲ್ ಗಾಂಧಿ

ಮುಂದಿನ ಲೋಕಸಭಾ, ವಿಧಾನಸಭಾ ಚನಾವಣೆಗಳಲ್ಲಿ ಬಿಜೆಪಿಯನ್ನು ಸೋಲಿಸಲು ಕರ್ನಾಟಕದ ತಂತ್ರವೇ ನಮಗೆ ಮಾದರಿ ಎಂದು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ(Rahul Gandhi) ಹೇಳಿದ್ದಾರೆ.

ಮುಂದಿನ ಚುನಾವಣೆಗಳಲ್ಲಿ ಬಿಜೆಪಿ ಸೋಲಿಸಲು ಕರ್ನಾಟಕ ತಂತ್ರವೇ ಮಾದರಿ: ರಾಹುಲ್ ಗಾಂಧಿ
ರಾಹುಲ್ ಗಾಂಧಿ
Follow us
ನಯನಾ ರಾಜೀವ್
|

Updated on:Jun 01, 2023 | 9:30 AM

ಮುಂದಿನ ಲೋಕಸಭಾ, ವಿಧಾನಸಭಾ ಚನಾವಣೆಗಳಲ್ಲಿ ಬಿಜೆಪಿಯನ್ನು ಸೋಲಿಸಲು ಕರ್ನಾಟಕದ ತಂತ್ರವೇ ನಮಗೆ ಮಾದರಿ ಎಂದು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ(Rahul Gandhi) ಹೇಳಿದ್ದಾರೆ. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನ ಸಮರ್ಪಕ ಜಾರಿಗೆ ನಿರ್ಧಾರ ಮಾಡಲಾಗಿದೆ, ಈ ಮೂಲಕ ಲೋಕಾಸಭಾ ಚುನಾವಣೆಗೂ ಮುನ್ನ ರಾಜಕೀಯ ಆಡಳಿತದ ಮಾಡಲ್ ಸೃಷ್ಠಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ. ಬಿಜೆಪಿಯ ಗುಜರಾತ್ , ಉತ್ತರ ಪ್ರದೇಶ್ ಮಾಡೆಲ್‌ಗೆ ಬದಲಾಗಿ, ಕರ್ನಾಟಕ ಮಾಡೆಲ್‌ ರಚನೆಗೆ ಚಿಂತನೆ ನಡೆದಿದೆ.

ಉತ್ತಮ ಆಡಳಿತ ಜೊತೆ ಜೊತೆಗೆ ಸಮಾಜಿಕ ನ್ಯಾಯದ ಪರಿಕಲ್ಪನೆಯೂ ಇದೆ, ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಪರ ಸರ್ಕಾರ ಎಂಬ ಸಂದೇಶ ರವಾನಿಸಲು ಕಾಂಗ್ರೆಸ್ ಮುಂದಾಗಿದೆ. ಗ್ಯಾರಂಟಿ ಯೋಜನೆ ಜಾರಿ ಮೂಲಕ ಹೊಸದೊಂದು ಮಾದರಿ ಸೃಷ್ಟಿ ಮಾಡಲಾಗಿದೆ, ಈ ಮೂಲಕ ದೇಶದ ಇತರೆ ರಾಜ್ಯಗಳಿಗೆ ಸಂದೇಶ ರವಾನೆಗೆ ಯತ್ನಿಸಲಾಗುತ್ತಿದೆ.

ಅಮೆರಿಕದ ಸಾಂತಾ ಕ್ಲಾರಾದ ಕ್ಯಾಲಿಫೋರ್ನಿಯಾ ವಿವಿ ಕ್ಯಾಂಪಸ್‌ನಲ್ಲಿ ನಡೆದ ಸಮಾರಂಭದಲ್ಲಿ ಸಭಿಕರೊಂದಿಗೆ ಸಂವಾದ ನಡೆಸಿದ ಗಾಂಧಿ, ಬಿಜೆಪಿಯಲ್ಲಿನ ದೌರ್ಬಲ್ಯಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ. ಒಬ್ಬ ರಾಜಕೀಯ ನಿಪುಣನಾಗಿ ನನಗೆ ಅವರ ದೌರ್ಬಲ್ಯ ಎದ್ದು ಕಾಣುತ್ತಿವೆ. ಪ್ರತಿಪಕ್ಷಗಳು ಸರಿಯಾಗಿ ಹೊಂದಾಣಿಕೆಯಾದರೆ ಬಿಜೆಪಿಯನ್ನು ಸೋಲಿಸಬಹುದು ಎಂದರು.

ಮತ್ತಷ್ಟು ಓದಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ ಶುರು; ಡಿಕೆ ಶಿವಕುಮಾರ್ ಪಟ್ಟಿಯಲ್ಲಿ ಯಾರಿಗೆಲ್ಲ ಸ್ಥಾನ? ಇಲ್ಲಿದೆ ವಿವರ

2024ರ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಿಪಕ್ಷಗಳು ಒಗ್ಗಟ್ಟಾಗಬೇಕು. ಜತೆಗೆ ಆಡಳಿತಾರೂಢ ಬಿಜೆಪಿಯನ್ನು ಸೋಲಿಸಲು ದೇಶಕ್ಕೆ ಪರ್ಯಾಯ ದೃಷ್ಟಿಕೋನದ ಅಗತ್ಯವಿದೆ. ಪ್ರತಿಪಕ್ಷಗಳ ಏಕತೆಯ ವಿಷಯದಲ್ಲಿ, ನಾವು ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದರು.

ವ್ಯವಸ್ಥೆಗಳು ನೇರವಾಗಿ ಜನರನ್ನು ಸಂಪರ್ಕಿಸಬೇಕು ಎಂಬ ಕಾರಣಕ್ಕೆ ನಾವು ಭಾರತ್‌ ಜೋಡೋ ಯಾತ್ರೆಯನ್ನು ಆರಂಭಿಸಿದೆವು. ಕೆಲವು ವಿಷಯಗಳನ್ನು ರಾಜಕೀಯವಾಗಿ ಕಾರ್ಯರೂಪಕ್ಕೆ ತರುವುದು ಕಷ್ಟ. ಹೀಗಾಗಿ ದಕ್ಷಿಣದ ತುದಿಯಿಂದ ಉತ್ತರ ಭಾರತದವರೆಗೂ ಪಾದಯಾತ್ರೆ ನಡೆಸಿದೆವು ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:30 am, Thu, 1 June 23

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ