ಪಶ್ಚಿಮ ಬಂಗಾಳವನ್ನು ಸೋನಾರ್ ಬಾಂಗ್ಲಾ ಮಾಡುತ್ತೇವೆ; ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಭರವಸೆ

ಇದೇ ವೇಳೆ ನಟಿ ಪಾಯೆಲ್ ಸರ್ಕಾರ್ ಅವರು ಜೆ.ಪಿ. ನಡ್ಡಾ ಮತ್ತು ಪಶ್ಚಿಮ ಬಂಗಾಳ ಬಿಜೆಪಿ ಪದಾಧಿಕಾರಿಗಳ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.

ಪಶ್ಚಿಮ ಬಂಗಾಳವನ್ನು ಸೋನಾರ್ ಬಾಂಗ್ಲಾ ಮಾಡುತ್ತೇವೆ; ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಭರವಸೆ
ಬಿಜೆಪಿಗೆ ಸೇರ್ಪಡೆಯಾದ ನಟಿ ಪಾಯೆಲ್ ಸರ್ಕಾರ್
Follow us
guruganesh bhat
|

Updated on:Feb 25, 2021 | 1:17 PM

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಡೆಂಗ್ಯೂ ಹಬ್ಬುತ್ತಿದ್ದು ರಾಜ್ಯ ಸರ್ಕಾರ ಈ ಕುರಿತು ನಿರ್ಲಕ್ಷ್ಯ ವಹಿಸಿದೆ. ಕೇಂದ್ರ ಸರ್ಕಾರ ಈ ಕುರಿತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಂದ ವರದಿ ಕೇಳಿದರೂ ಅವರು ಯಾವುದೇ ವರದಿ ನೀಡದೇ ರಾಜ್ಯದ ಜನರ ಆರೋಗ್ಯದ ಕುರಿತು ನಿಷ್ಕಾಳಜಿ ತೋರಿದ್ದಾರೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಆರೋಪಿಸಿದ್ದಾರೆ.

ಅಲ್ಲದೇ ಭರವಸೆಗಳ ಮಹಾಪೂರ ನೀಡಿದ ಅವರು, ಪಶ್ಚಿಮ ಬಂಗಾಳದ ಸ್ವಾಮಿ ವಿವೇಕಾನಂದ, ಸುಭಾಷ್ ಚಂದ್ರ ಬೋಸ್, ಶ್ಯಾಮ್ ಪ್ರಸಾದ್ ಮುಖರ್ಜಿ, ಈಶ್ವರಚಂದ್ರ ವಿದ್ಯಾಸಾಗರ್ ಅವರುಗಳ ಆದರ್ಶದ ದಾರಿಯಲ್ಲಿ ರಾಜ್ಯವನ್ನು ಮುನ್ನಡೆಸಿ ಸೋನಾರ್ ಬಾಂಗ್ಲಾವನ್ನು ಸಾಧಿಸುವುದಾಗಿ ಘೋಷಿಸಿದರು. ಇದೇ ವೇಳೆ ನಟಿ ಪಾಯಲ್ ಸರ್ಕಾರ್ ಅವರು ಜೆ.ಪಿ. ನಡ್ಡಾ ಮತ್ತು ಪಶ್ಚಿಮ ಬಂಗಾಳ ಬಿಜೆಪಿ ಪದಾಧಿಕಾರಿಗಳ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

ರಾಜ್ಯದ ಮುಖ್ಯ ಪ್ರದೇಶಗಳಲ್ಲಿ 30 ಸಾವಿರ ಸಲಹಾ ಪೆಟ್ಟಿಗೆಗಳನ್ನು ಇರಿಸಲು ಯೋಜಿಸಲಾಗಿದ್ದು, ಈಗಾಗಲೇ 2 ಕೋಟಿ ಸಲಹೆಗಳನ್ನು ಸ್ವೀಕರಿಸಲಾಗಿದೆ. ಬಿಜೆಪಿ ಕಾರ್ಯಕರ್ತರು ಸಹ ಮನೆಮನೆಗೆ ಸಲಹಾ ಪೆಟ್ಟಿಗೆಗಳ ಮೂಲಕ ಸಾರ್ವಜನಿಕರ ಸಲಹೆಗಳನ್ನು ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮವನ್ನು ಮಾರ್ಚ್ 3ರಿಂದ 20ರವರೆಗೆ ಹಮ್ಮಿಕೊಳ್ಳಲು ನಿರ್ಧರಿಸಿದ್ದೇವೆ ಎಂದು ಅವರು ತಿಳಿಸಿದರು.

ಸದ್ಯದಲ್ಲೇ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಯಲ್ಲಿ ಪಶ್ಚಿಮ ಬಂಗಾಳ ಭೇಟಿಯಲ್ಲಿರುವ ಅವರು, ಟಿಎಂಸಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ದೇಶದಲ್ಲಿ 10 ಕೋಟಿಯಷ್ಟು ರೈತರಿದ್ದು ಅವರಲ್ಲಿ 73 ಲಕ್ಷ ರೈತರು ಪಶ್ಚಿಮ ಬಂಗಾಳ ರಾಜ್ಯವೊಂದರಲ್ಲೇ ಇದ್ದಾರೆ. ರೈತ ಸಮುದಾಯಕ್ಕೆ ವರದಾಯಕವಾದ ಈಗಾಗಲೇ 7 ಕಂತುಗಳಲ್ಲಿ ಬಿಡುಗಡೆಯಾಗಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಪಶ್ಚಿಮ ಬಂಗಾಳದ ರೈತರಿಗೆ ದೊರೆಯಲಿಲ್ಲ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೈಗೊಂಡ ನಿರ್ಧಾರವೇ ರೈತರಿಗೆ ಈ ಯೋಜನೆಯ ಹಣ ದೊರೆಯದಿರಲು ಕಾರಣ ಎಂದು ಅವರು ಆರೋಪಿಸಿದರು. ಅಲ್ಲದೇ, ಈ ಸಲದ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಬಂಗಾಳದ ರೈತ ಸಮುದಾಯಕ್ಕೂ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ದೊರೆಯುವಂತೆ ಮಾಡುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಿಳಿಸಿದ್ದಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ತಿಳಿಸಿದರು.

ಭರ್ಜರಿ ಪ್ರಚಾರ ನಿರತ ಬಿಜೆಪಿ

ಚುನಾವಣೆಗೆ ಸಿದ್ಧವಾಗಿರುವ ಪಶ್ಚಿಮ ಬಂಗಾಳಕ್ಕೆ ಇತ್ತೀಚಿಗಷ್ಟೇ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, ಪಶ್ಚಿಮ ಬಂಗಾಳದಲ್ಲಿ ರೈಲ್ವೆ ಮತ್ತು ಮೆಟ್ರೊ ಸಂಪರ್ಕ ಸುಧಾರಣೆ ಪ್ರಕ್ರಿಯೆ ಆರಂಭವಾಗಲಿದೆ. ಸಂಪರ್ಕ ಸುಧಾರಣೆಯ ಸಾಕಷ್ಟು ಹೊಸ ಕಾಮಗಾರಿಗಳಿಗೆ ಶೀಘ್ರ ಚಾಲನೆ ಸಿಗಲಿದೆ. ಬಂಗಾಳದ ಅಭಿವೃದ್ಧಿಗೆ ನಮ್ಮ ಪ್ರಯತ್ನ ಸತತವಾಗಿ ನಡೆಯಲಿದೆ ಎಂದಿದ್ದರು. ವಿಶ್ವದಲ್ಲಿ ಎಷ್ಟೋ ದೇಶಗಳು ಬಡತನದಿಂದ ಹೊರಗೆ ಬಂದಿವೆ.ಆಧುನಿಕ ರೈಲ್ವೆ, ಏರ್​ವೇ ಗಳನ್ನು ಹೊಂದಿವೆ. ದೇಶವನ್ನು ಆಧುನಿಕಗೊಳಿಸುವ ಪ್ರಯತ್ನ ಸತತವಾಗಿ ನಡೆಯುತ್ತಿದೆ. ದೇಶಗಳ ಬದಲಾವಣೆಯಲ್ಲಿ ಇಂಥ ಸುಧಾರಣೆಗಳು ಸಾಕಷ್ಟು ಪರಿಣಾಮ ಬೀರುತ್ತವೆ.ಈಗಾಗಲೇ ಸಾಕಷ್ಟು ತಡವಾಗಿದೆ. ಈಗ ನಾವು ತಡಮಾಡಬಾರದು ಎಂದು ಹೇಳಿದ್ದರು.

ಸ್ವಾತಂತ್ರ್ಯ ಬಂದ ಹೊಸತರಲ್ಲಿ ಬಂಗಾಳವು ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಸಾಕಷ್ಟು ಮುಂದೆ ಇತ್ತು. ಆದರೆ ಇಲ್ಲಿ ಆಡಳಿತ ನಡೆಸಿದವರು ಅದನ್ನು ಹಿಂದಕ್ಕೆ ಎಳೆದರು. ಮಾ, ಮಾಟಿ, ಮಾನುಷ್​ ಬಗ್ಗೆ ಮಾತನಾಡುವವರು ಅದರ ಅಭಿವೃದ್ಧಿಗೆ ಲಕ್ಷ್ಯ ಕೊಡಲಿಲ್ಲ. ಕೇಂದ್ರ ಸರ್ಕಾರವು ಫಲಾನುಭವಿಗಳ ಖಾತೆಗೆ ಸಹಾಯಧನ ಕೊಡುತ್ತದೆ. ಆದರೆ ಇಲ್ಲಿನ ರಾಜ್ಯ ಸರ್ಕಾರವು ಬಡವರ ಹೆಸರಿನಲ್ಲಿ ಟಿಎಂಸಿ ನಾಯಕರಿಗೆ ಹಣ ಕೊಡುತ್ತಿದೆ. ಹಳ್ಳಿಹಳ್ಳಿಗಳಲ್ಲಿ ಟಿಎಂಸಿ ನಾಯಕರ ಮನೆಗಳು ಬೆಳೆಯುತ್ತಿವೆ. ಬಡವರು ಬಡವರಾಗಿಯೇ ಉಳಿಯುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದರು.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಘೋಷಣೆಗಳ ಪ್ರವಾಹ: ಬಿಜೆಪಿಗೆ ಬೇಕಾಯ್ತು ಇಟಲಿ ಮೂಲದ ಹಾಡಿನ ಸಹಾಯ

ಪಶ್ಚಿಮ ಬಂಗಾಳದ ಸಚಿವ ಜಕೀರ್ ಹುಸೇನ್ ಮೇಲೆ ಕಚ್ಚಾ ಬಾಂಬ್ ದಾಳಿಗೆ ರಾಜಕೀಯ ವೈಷಮ್ಯವೇ ಕಾರಣ: ರೈಲ್ವೆ ಅಧಿಕಾರಿ

Published On - 12:25 pm, Thu, 25 February 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್