ನವದೆಹಲಿ (ಮಾರ್ಚ್ 04): ಮೂರನೇ ಬಾರಿಗೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ(JP Nadda) ಅವರು ತಮ್ಮ ರಾಜ್ಯಸಭಾ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಗುತರಾತ್‌ನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಜೆಪಿ ನಡ್ಡಾ ಅವರು ಹಿಮಾಚಲ ಪ್ರದೇಶ ರಾಜ್ಯಸಭಾ ಸದಸ್ಯತ್ವ(Himachal pradesh Rajya Sabha MP) ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಉಪ ರಾಷ್ಟ್ರಪತಿಗಳಾದ ಜಗದೀಪ್ ಧನಕರ್ ಅವರು ನಡ್ಡಾ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.
ಹಿಮಾಚಲ ಪ್ರದೇಶದಿಂದ ರಾಜ್ಯಸಭೆ ಸಂಸದರಾಗಿ ಆಯ್ಕೆಯಾಗಿರುವ ಜೆಪಿ ನಡ್ಡಾ ಅವಧಿ ಏಪ್ರಿಲ್ ತಿಂಗಳಿಗೆ ಅಂತ್ಯವಾಗಲಿದೆ. ಇದಕ್ಕೂ ಮೊದಲೇ ಜೆಪಿ ನಡ್ಡಾ ಅವರು ಗುಜರಾತ್‌ನಿಂದ ಅವಿರೋಧವಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಹೀಗಾಗಿ ಪ್ರಸಕ್ತ ಹಿಮಾಚಲ ಪ್ರದೇಶದ ರಾಜ್ಯಸಭಾ ಸದಸ್ಯತ್ವ ಸ್ಥಾನಕ್ಕೆ ಜೆಪಿ ನಡ್ಡಾ ರಾಜೀನಾಮೆ ನೀಡಿದ್ದಾರೆ.
ಇನ್ನು ಜೆಪಿ ನಡ್ಡಾ ಅವರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅವಧಿಯನ್ನು ವಿಸ್ತರಿಸಲಾಗಿದೆ. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನಡ್ಡಾ ಅವರ ಅಧಿಕಾರವಧಿಯಲ್ಲಿ 2024ರ ಜೂನ್‌ವರೆಗೆ ವಿಸ್ತರಣೆ ಮಾಡಲಾಗಿದೆ. ಇತ್ತೀಚೆಗೆ ನಡೆದ ಬಿಜೆಪಿ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಪಕ್ಷದ ಹಿರಿಯ ನಾಯಕ ಅಮಿತ್ ಶಾ ಈ ಘೋಷಣೆ ಮಾಡಿದ್ದರು. ಈ ಮೂಲಕ ಬಿಜೆಪಿಯು 2024ರ ಲೋಕಸಭಾ ಚುನಾವಣೆಯನ್ನು ನಡ್ಡಾ ನೇತೃತ್ವದಲ್ಲೇ ಎದುರಿಸಲಿದೆ. ನಡ್ಡಾ ಅವರು 2019ರಲ್ಲಿ ಅಮಿತ್ ಶಾ ಅವರ ಬಳಿಕ ಮಧ್ಯಂತರ ಅವಧಿಗೆ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಬಳಿಕ 2020ರಿಂದ ಪೂರ್ಣಾವಧಿ ರಾಷ್ಟ್ರಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ