AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಪತ್ನಿಯ ಕಾರು ಕಳ್ಳತನ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆಪಿ ನಡ್ಡಾ ಅವರ ಪತ್ನಿಯ ಕಾರು ಕಳ್ಳತನವಾಗಿರುವ ಸುದ್ದಿ ಬೆಳಕಿಗೆ ಬಂದಿದೆ. ಮಾಹಿತಿ ಪ್ರಕಾರ, ಚಾಲಕ, ಮಲ್ಲಿಕಾ ನಡ್ಡಾ ಅವರ ಫಾರ್ಚುನರ್ ಕಾರನ್ನು ಸರ್ವೀಸ್‌ಗೆ ತೆಗೆದುಕೊಂಡು ಹೋಗಿದ್ದರು.

Lok Sabha Election: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಪತ್ನಿಯ ಕಾರು ಕಳ್ಳತನ
ಜೆಪಿ ನಡ್ಡಾ
ನಯನಾ ರಾಜೀವ್
|

Updated on:Mar 25, 2024 | 9:32 AM

Share

ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆಪಿ ನಡ್ಡಾ(JP Nadda) ಅವರ ಪತ್ನಿಯ ಕಾರು ಕಳ್ಳತನವಾಗಿರುವ ಸುದ್ದಿ ಬೆಳಕಿಗೆ ಬಂದಿದೆ. ಮಾಹಿತಿ ಪ್ರಕಾರ, ಚಾಲಕ, ಮಲ್ಲಿಕಾ ನಡ್ಡಾ ಅವರ ಫಾರ್ಚುನರ್ ಕಾರನ್ನು ಸರ್ವೀಸ್‌ಗೆ ತೆಗೆದುಕೊಂಡು ಹೋಗಿದ್ದರು. ಮಾರ್ಚ್ 19 ರಂದು, ಅವರ ಕಾರನ್ನು ಸರ್ವೀಸ್ ಸೆಂಟರ್‌ನಿಂದಲೇ ಕಳವು ಮಾಡಲಾಗಿತ್ತು. ಚಾಲಕನ ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಇದೀಗ ಪೊಲೀಸರು ಕಾರಿಗೆ ಹುಡುಕಾಟ ಆರಂಭಿಸಿದ್ದಾರೆ.

ಈ ಸಂಬಂಧ ಪೊಲೀಸರು ಸಮೀಪದ ಸಿಸಿಟಿವಿ ವೀಕ್ಷಿಸುತ್ತಿದ್ದಾರೆ. ಅಲ್ಲದೆ ಶಂಕಿತ ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. ಅರೋರಾ ಪ್ರಾಪರ್ಟೀಸ್ ಆರ್‌ಡಿ ಮಾರ್ಗದ ಮುಂಭಾಗದಲ್ಲಿರುವ ಗೋವಿಂದಪುರಿಯಿಂದ ಕಾರು ನೋಂದಣಿ ಸಂಖ್ಯೆ HP03D0021 ಅನ್ನು ಕಳವು ಮಾಡಲಾಗಿದೆ ಎಂದು ಚಾಲಕ ಹೇಳಿದ್ದಾರೆ.

ಮಧ್ಯಾಹ್ನ 3 ಗಂಟೆಯಿಂದ 4 ಗಂಟೆಯೊಳಗೆ ಕಾರು ಕಳ್ಳತನವಾಗಿರುವ ಸಾಧ್ಯತೆ ಇದೆ ಎಂದು ಚಾಲಕ ತಿಳಿಸಿದ್ದಾರೆ. ದೆಹಲಿ ಸೇರಿದಂತೆ ಹಲವು ಮಹಾನಗರಗಳಲ್ಲಿ ವಾಹನ ಕಳ್ಳತನ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವುದು ಗಮನಾರ್ಹ. ದೆಹಲಿ-ಎನ್‌ಸಿಆರ್‌ನಲ್ಲಿ ಪ್ರತಿ 14 ನಿಮಿಷಕ್ಕೆ ಒಂದು ವಾಹನ ಕಳ್ಳತನವಾಗುತ್ತದೆ.

ಮತ್ತಷ್ಟು ಓದಿ:ಬಿಜೆಪಿ ಜೆಡಿಎಸ್ ಮೈತ್ರಿ ಅಪಸ್ವರ: ಕುಮಾರಸ್ವಾಮಿ ಮುನಿಸು ಶಮನಕ್ಕೆ ನಡ್ಡಾ, ಅಮಿತ್ ಶಾ ಅಖಾಡಕ್ಕೆ

ಜೆಪಿ ನಡ್ಡಾ ಅವರ ಪತ್ನಿಯ ಕಾರು ಸಂಖ್ಯೆ ಹಿಮಾಚಲ ಪ್ರದೇಶದ್ದು ಎಂಬ ಮಾಹಿತಿ ಲಭಿಸಿದೆ. ಕಾರು ಚಾಲಕ ಸರ್ವೀಸ್ ಸೆಂಟರ್ ನಲ್ಲಿ ಕಾರನ್ನು ನಿಲ್ಲಿಸಿ ಊಟ ಮಾಡಲು ಮನೆಗೆ ತೆರಳಿದ್ದ. ಆದರೆ ವಾಪಸ್ ಬಂದಾಗ ಕಾರು ನಾಪತ್ತೆಯಾಗಿತ್ತು. ಕಾರಿನ ಬಣ್ಣ ಬಿಳಿ. ಈ ವೇಳೆ ಚಾಲಕ ಜೋಗಿಂದರ್ ದೂರಿನ ಮೇರೆಗೆ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ಕಾರಿನ ಹುಡುಕಾಟದಲ್ಲಿ ನಿರತರಾಗಿದ್ದಾರೆ. ಇದು ಮಾರ್ಚ್ 19ರ ಘಟನೆ ಎಂದು ಹೇಳಲಾಗುತ್ತಿದೆ. 2022 ಮತ್ತು 2023 ರ ನಡುವೆ ಭಾರತದಲ್ಲಿ ವಾಹನ ಕಳ್ಳತನ ಘಟನೆಗಳು 2.5% ರಷ್ಟು ಹೆಚ್ಚಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:25 am, Mon, 25 March 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು