AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhupendra Patel: ಗುಜರಾತ್​ ಮುಂದಿನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್​

Gujarat New Chief Minister: ಭೂಪೇಂದ್ರ ಪಟೇಲ್​ ಅವರು  ಗುಜರಾತ್​ನ ಘಾಟ್​ಲೋಡಿಯಾ ವಿಧಾನಸಭಾ ಕ್ಷೇತ್ರದ ಶಾಸಕರು. ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಶಿಕಾಂತ್​ ಪಟೇಲ್​ ವಿರುದ್ಧ ಬರೋಬ್ಬರಿ 1,17,000 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

Bhupendra Patel: ಗುಜರಾತ್​ ಮುಂದಿನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್​
ಭೂಪೇಂದ್ರ ಪಟೇಲ್​
TV9 Web
| Edited By: |

Updated on:Sep 12, 2021 | 4:40 PM

Share

ಗುಜರಾತ್​ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಹಿರಿಯ ನಾಯಕ ಭೂಪೇಂದ್ರ ಪಟೇಲ್ (Bhupendra Patel)​ರನ್ನು ಗುಜರಾತ್​ ಮುಂದಿನ ಮುಖ್ಯಮಂತ್ರಿಯಾಗಿ ಬಿಜೆಪಿ ಆಯ್ಕೆ ಮಾಡಿದೆ. ನಿನ್ನೆ ವಿಜಯ್​ ರೂಪಾನಿ ದಿಢೀರ್ ರಾಜೀನಾಮೆ ನೀಡಿದಾಗಿನಿಂದ ಗುಜರಾತ್​ನ ಮುಂದಿನ ಮುಖ್ಯಮಂತ್ರಿ ಯಾರು ಎಂಬುದು ದೊಡ್ಡ ಕುತೂಹಲ ಸೃಷ್ಟಿಸಿದ್ದ ವಿಷಯವಾಗಿತ್ತು. ಇಂದು ಬಿಎಲ್​ಪಿ ಸಭೆ ಕೂಡ ನಡೆದಿತ್ತು. ಸಚಿವರಾದ ಪ್ರಲ್ಹಾದ್ ಜೋಶಿ ಮತ್ತು ನರೇಂದ್ರ ಸಿಂಗ್​ ತೋಮರ್​ ಕೇಂದ್ರದಿಂದ ವೀಕ್ಷಕರಾಗಿ ಆಗಮಿಸಿದ್ದರು. ಸಭೆ ಮುಕ್ತಾಯವಾಗಿದ್ದು, ಭೂಪೇಂದ್ರ ಪಾಟೀಲ್​ರನ್ನು ಮುಂದಿನ ಸಿಎಂ ಆಗಿ ಆಯ್ಕೆ ಮಾಡಲಾಗಿದೆ. ಇವರ ಹೆಸರನ್ನು ವಿಜಯ್​ ರೂಪಾನಿಯವರೇ ಸೂಚಿಸಿದ್ದಾರೆ ಎನ್ನಲಾಗಿದೆ.

ಭೂಪೇಂದ್ರ ಪಟೇಲ್​ ಅವರು  ಗುಜರಾತ್​ನ ಘಾಟ್​ಲೋಡಿಯಾ ವಿಧಾನಸಭಾ ಕ್ಷೇತ್ರದ ಶಾಸಕರು. ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಶಿಕಾಂತ್​ ಪಟೇಲ್​ ವಿರುದ್ಧ ಬರೋಬ್ಬರಿ 1,17,000 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಕ್ಷೇತ್ರದಲ್ಲಿ ಭೂಪೇಂದ್ರ ಪಟೇಲ್​​ಗೂ ಮೊದಲು ಆನಂದಿಬೆನ್​ ಪಟೇಲ್ (ಉತ್ತರಪ್ರದೇಶದ ಈಗಿನ ರಾಜ್ಯಪಾಲರು)​ ಅಭ್ಯರ್ಥಿಯಾಗಿದ್ದರು. ವಿಶೇಷವೆಂದರೆ ಆನಂದಿ ಬೆನ್ ಪಟೇಲ್​ ಇದೇ ಕ್ಷೇತ್ರದಿಂದ ಗೆದ್ದು ಗುಜರಾತ್​ ಮುಖ್ಯಮಂತ್ರಿಯಾಗಿದ್ದರು (2014-2016ರ ಅವಧಿ). ಇಂಜನಿಯರಿಂಗ್​ ಓದಿದ್ದ ಭೂಪೇಂದ್ರ ಪಟೇಲ್​ ಅವರು ಈ ಹಿಂದೆ ಅಹ್ಮದಾಬಾದ್​ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ (AUDA)ರಾಗಿ, ಅಮದ್​ವಾಡ ಮುನ್ಸಿಪಲ್ ಕಾರ್ಪೋರೇಶನ್​ ಸ್ಥಾಯಿ ಸಮಿತಿ (AMC) ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ನಿನ್ನೆ ವಿಜಯ್​ ರೂಪಾನಿ ರಾಜೀನಾಮೆ ನೀಡಿದ್ದು ಬಹು ಅಚ್ಚರಿ ಮೂಡಿಸಿತ್ತು. ಗುಜರಾತ್ ಚುನಾವಣೆ ಒಂದೇ ವರ್ಷದಲ್ಲಿದ್ದಾಗ ಮುಖ್ಯಮಂತ್ರಿ ಬದಲಾವಣೆ ಯಾಕೆ ಎಂಬ ಪ್ರಶ್ನೆಯನ್ನೂ ಮೂಡಿಸಿತ್ತು. ಹಾಗೇ, ಮುಖ್ಯಮಂತ್ರಿ ಹುದ್ದೆ ರೇಸ್​ನಲ್ಲಿ ಆರೋಗ್ಯ ಸಚಿವ ಮನ್​ಸುಖ್ ಮಾಂಡವಿಯಾ, ಪ್ರಫುಲ್​ ಪಟೇಲ್​ ಸೇರಿ ಇನ್ನೂ ಹಲವು ಪ್ರಮುಖ ನಾಯಕರ ಹೆಸರುಗಳು ಕೇಳಿಬಂದಿದ್ದವು. ಅದರಲ್ಲಿ ಭೂಪೇಂದ್ರ ಪಟೇಲ್​ ಹೆಸರೇನೂ ಅಷ್ಟೊಂದು ಪ್ರಾಮುಖ್ಯತೆ ಪಡೆದಿರಲಿಲ್ಲ. ಇದೀಗ ಮುಖ್ಯಮಂತ್ರಿ ಹುದ್ದೆಗೆ ಆಯ್ಕೆಯಾಗಿರುವ ಅವರು ನಾಳೆಯೇ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಲಾಕ್​ಡೌನ್​ನಿಂದ ಆರ್ಥಿಕ ಸಂಕಷ್ಟದ ಶಂಕೆ; ಕಿರುತೆರೆ ನಟ ಆತ್ಮಹತ್ಯೆ: ಅನುಮಾನ ಮೂಡಿಸಿದ ಸಾವು

ನಂಜನಗೂಡು ದೇಗುಲ ತೆರವು ವಿಚಾರ: ದೇವಾಲಯ ಮರುನಿರ್ಮಾಣಕ್ಕೆ ಗ್ರಾಮಸ್ಥರ ತಯಾರಿ

Published On - 4:23 pm, Sun, 12 September 21

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್