AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP-Congress: ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ಕಣಕ್ಕಿಳಿಯುವ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ-ಕಾಂಗ್ರೆಸ್

ಹಿಮಾಚಲ ಪ್ರದೇಶ (Himachal Pradesh) ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (BJP) ಮತ್ತು ಕಾಂಗ್ರೆಸ್ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿವೆ.

BJP-Congress: ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ಕಣಕ್ಕಿಳಿಯುವ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ-ಕಾಂಗ್ರೆಸ್
ಸಾಂದರ್ಭಿಕ ಚಿತ್ರ
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Oct 19, 2022 | 2:19 PM

Share

ಹಿಮಾಚಲ ಪ್ರದೇಶ: ಮುಂಬರುವ ಹಿಮಾಚಲ ಪ್ರದೇಶ (Himachal Pradesh) ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (BJP) ಮತ್ತು ಕಾಂಗ್ರೆಸ್ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿವೆ. ಬಿಜೆಪಿಯಿಂದ 62 ಜನರು ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್​ನಿಂದ 46 ಸ್ಥಾನಗಳಿಗೆ ಟಿಕೆಟ್ ನೀಡಲು ಪಕ್ಷ ನಿರ್ಧಾರಿಸಿದೆ.

ಬಿಜೆಪಿ ಅಭ್ಯರ್ಥಿಗಳು

ಮುಖ್ಯಮಂತ್ರಿ ಜೈರಾಮ್ ಠಾಕೂರ್ ಸೆರಾಜ್ ಕ್ಷೇತ್ರದಿಂದ, ಶಾಸಕ ಅನಿಲ್ ಶರ್ಮಾ ಮಂಡಿಯಿಂದ ಮತ್ತು ಸತ್ಪಾಲ್ ಸಿಂಗ್ ಸತ್ತಿ ಉನಾದಿಂದ ಸ್ಪರ್ಧಿಸಲಿದ್ದಾರೆ. ಬಿಜೆಪಿ ಹೈಕಮಾಂಡ್ ಪರಿಶಿಷ್ಟ ಪಂಗಡದ ಎಂಟು ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದು, ಪರಿಶಿಷ್ಟ ಪಂಗಡಕ್ಕೆ ಮೂರು ಸ್ಥಾನಗಳನ್ನು ಮಾತ್ರ ಮೀಸಲಿಡಲಾಗಿದೆ.

ಪಕ್ಷವು ಮಹಿಳಾ ಅಭ್ಯರ್ಥಿಗಳಿಗೆ ಐದು ಟಿಕೆಟ್ ನೀಡಿದೆ. ಶಿಫಾರಸು ಮಾಡಿದ ಅಭ್ಯರ್ಥಿಗಳಲ್ಲಿ ಮೂರನೇ ಎರಡರಷ್ಟು ಮಂದಿ ಪದವೀಧರರು ಮತ್ತು ಸ್ನಾತಕೋತ್ತರ ಪದವೀಧರರು. ಅಲ್ಲದೆ ಈ ಬಾರಿ ಹಾಲಿ ಶಾಸಕರನ್ನೂ ಬದಲಾಯಿಸಲಾಗಿದೆ.

ಕಾಂಗ್ರೆಸ್​ ಅಭ್ಯರ್ಥಿಗಳು

ಈ ಬಾರಿಯು 19 ಹಾಲಿ ಶಾಸಕರು ಮತ್ತೆ ಸ್ಪರ್ಧಿಸಲಿದ್ದಾರೆ. ಈ ಹಾಲಿ ಶಾಸಕರ ಪಟ್ಟಿಯಲ್ಲಿ ಕಿನ್ನೌರ್ ಶಾಸಕ ಜಗತ್ ಸಿಂಗ್ ನೇಗಿ ಅವರನ್ನು ಕೈಬಿಡಲಾಗಿದೆ ಎಂದು ಪಕ್ಷದ ನಾಯಕರು ಹೇಳಿದ್ದಾರೆ. ಕಾಂಗ್ರೆಸ್ ಟಿಕೆಟ್ ಹಂಚಿಕೆ ಬಗ್ಗೆ ಕಾಂಗ್ರೆಸ್ ನಾಯಕರಲ್ಲಿ ಅನೇಕರು ಅಸಮಾಧಾನಗೊಂಡಿದ್ದಾರೆ. 2017ರಲ್ಲಿ ಬಂಜಾರ್ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಆದಿತ್ಯ ವಿಕ್ರಮ್ ಸಿಂಗ್ ಅವರಿಗೆ ಟಿಕೆಟ್ ನಿರಾಕರಿಸಲಾಗಿತ್ತು. ಟಿಕೆಟ್ ನಿರಾಕರಣೆ ವಿರೋಧಿಸಿ ಪಕ್ಷ ತೊರೆದಿದ್ದಾರೆ. ಈ ಬಾರಿ ಬಂಜಾರದಿಂದ ಖಿಮಿ ರಾಮ್ ಅವರಿಗೆ ಟಿಕೆಟ್ ನೀಡಲಾಗಿದೆ.

ಇದನ್ನು ಓದಿ: ಹಿಮಾಚಲ ಪ್ರದೇಶ ಚುನಾವಣೆ: 46 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್ 

ಶಿಮ್ಲಾದ ಏಳು ವಿಧಾನಸಭಾ ಕ್ಷೇತ್ರಗಳಿಂದ ಟಿಕೆಟ್ ಪಡೆದವರಲ್ಲಿ ಮಾಜಿ ಮುಖ್ಯಮಂತ್ರಿ ವಿಕ್ರಮಾದಿತ್ಯ ಸಿಂಗ್ ಅವರ ಪುತ್ರ ಮತ್ತು ಅವರ ಆಪ್ತರಿಗೆ ನೀಡಲಾಗಿದೆ. ಏಳು ಮಾಜಿ ಕ್ಯಾಬಿನೆಟ್ ಸಚಿವರು ಮತ್ತು ಮೂವರು ಮಹಿಳೆಯರಿಗೆ ಟಿಕೆಟ್ ನೀಡಲಾಗಿದೆ. ಪಕ್ಷದ ಮೂಲಗಳ ಪ್ರಕಾರ, ಉಳಿದ 22 ವಿಧಾನಸಭಾ ಕ್ಷೇತ್ರಗಳಿಗೆ ಶೀಘ್ರದಲ್ಲೇ ಟಿಕೆಟ್ ಘೋಷಣೆಯಾಗಲಿದೆ.

ಹಿಮಾಚಲ ಚುನಾವಣಾ ವೇಳಾಪಟ್ಟಿ

ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಶುಕ್ರವಾರ ಪ್ರಕಟಿಸಿದೆ. ನವೆಂಬರ್ 12 ರಂದು ನಡೆಯಲಿದೆ. ಹಿಮಾಚಲ ಪ್ರದೇಶದಲ್ಲಿ ಮೊದಲ ಹಂತದ ವಿಧಾನಸಭೆ ಚುನಾವಣೆ ನಡೆಯಲಿದೆ. ನವೆಂಬರ್ 12 ರಂದು ಮತಗಳ ಮತದಾನ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.

Published On - 2:17 pm, Wed, 19 October 22

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ