ಆರ್‌ಎಸ್‌ಎಸ್ ಮುಖ್ಯಸ್ಥರಿಗೆ ಅರವಿಂದ್ ಕೇಜ್ರಿವಾಲ್ ಬರೆದ ಪತ್ರಕ್ಕೆ ಬಿಜೆಪಿ ಟೀಕೆ
ಆರ್‌ಎಸ್‌ಎಸ್ ಮುಖ್ಯಸ್ಥರಿಗೆ ಅರವಿಂದ್ ಕೇಜ್ರಿವಾಲ್ ಬರೆದ ಪತ್ರಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ಆರ್‌ಎಸ್‌ಎಸ್ ಸಂಘಟನೆಯಿಂದ 'ಸೇವಾ ಮನೋಭಾವ' ಕಲಿಯುವಂತೆ ಸೂಚಿಸಿದೆ. ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಮತ್ತು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದಾರೆ. ದೆಹಲಿಯಲ್ಲಿ ಬಿಜೆಪಿ ಹಣ ಹಂಚಿಕೆ ಮಾಡಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.
ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದಕ್ಕಾಗಿ ಬಿಜೆಪಿ ಟೀಕಿಸಿದ್ದು, ದೆಹಲಿಯಲ್ಲಿ ವಿಧಾನಸಭೆ ಚುನಾವಣೆಗೆ ಮುನ್ನ ಮಾಧ್ಯಮಗಳ ಗಮನ ಸೆಳೆಯಲು ಈ ಪತ್ರ ಬರೆದಿದ್ದಾರೆ ಎಂದು ಆರೋಪಿಸಿದೆ. ಬಿಜೆಪಿಯಿಂದ ಮತದಾರರ ಪಟ್ಟಿ ಅಳಿಸುವಿಕೆ ಮತ್ತು ಮತ ಖರೀದಿ ತಂತ್ರಗಳ ಬಗ್ಗೆ ಅರವಿಂದ್ ಕೇಜ್ರಿವಾಲ್ ಪತ್ರದಲ್ಲಿ ಆರೋಪಿಸಿದ್ದಾರೆ. ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಇಂತಹ ಚಟುವಟಿಕೆಗಳನ್ನು ಬೆಂಬಲಿಸುತ್ತಾರೆಯೇ? ಎಂದೂ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.
ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ ಸುಧಾಂಶು ತ್ರಿವೇದಿ ಅರವಿಂದ್ ಕೇಜ್ರಿವಾಲ್ ಬರೆದ ಪತ್ರವನ್ನು “ಸ್ಟಂಟ್” ಎಂದು ತಳ್ಳಿಹಾಕಿದ್ದಾರೆ. “ಕೇಜ್ರಿವಾಲ್ ಅವರ ಪತ್ರವು ಮಾಧ್ಯಮದ ಗಮನ ಸೆಳೆಯುವ ಪ್ರಯತ್ನವಲ್ಲದೇ ಬೇರೇನೂ ಅಲ್ಲ” ಎಂದು ಪತ್ರಿಕಾಗೋಷ್ಠಿಯಲ್ಲಿ ತ್ರಿವೇದಿ ಹೇಳಿದ್ದಾರೆ.
ಇದನ್ನೂ ಓದಿ: ದೆಹಲಿ ಮಹಿಳೆಯರಿಗೆ ಆಮ್ ಆದ್ಮಿ ಗುಡ್ ನ್ಯೂಸ್; ತಿಂಗಳಿಗೆ 2,100 ರೂ. ನೀಡುವುದಾಗಿ ಕೇಜ್ರಿವಾಲ್ ಘೋಷಣೆ
ಅವರು ಆರ್ಎಸ್ಎಸ್ಗೆ ಪತ್ರ ಬರೆಯುವ ಬದಲು ತಮ್ಮ ರಾಜಕೀಯ ನಡೆಗಳನ್ನು ಬಿಟ್ಟು ಆರ್‌ಎಸ್‌ಎಸ್‌ನಿಂದ “ಸೇವಾ ಮನೋಭಾವ”ವನ್ನು ಕಲಿಯುವಂತೆ ಎಎಪಿ ನಾಯಕನಿಗೆ ತ್ರಿವೇದಿ ಸಲಹೆ ನೀಡಿದ್ದಾರೆ.
BJP National Spokesperson Dr. @SudhanshuTrived addresses a press conference at BJP headquarters in New Delhi. https://t.co/2vh6kzGh83
— BJP (@BJP4India) January 1, 2025
ದೆಹಲಿ ವಿಧಾನಸಭೆ ಚುನಾವಣೆಗೆ ಮುನ್ನ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಬರೆದ ಪತ್ರದಲ್ಲಿ ಕೇಜ್ರಿವಾಲ್ ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಬಿಜೆಪಿ ಮಾಡಿದ ತಪ್ಪುಗಳನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಅನುಮೋದಿಸುತ್ತದೆಯೇ? ಎಂದು ದೆಹಲಿಯ ಮಾಜಿ ಮುಖ್ಯಮಂತ್ರಿ ಕೇಜ್ರಿವಾಲ್ ಮೋಹನ್ ಭಾಗವತ್ ಅವರನ್ನು ಕೇಳಿದ್ದಾರೆ. ಎಎಪಿ ಮತ್ತು ಕೇಜ್ರಿವಾಲ್ ದೆಹಲಿಯಲ್ಲಿ ತಂಗಿರುವ ಅಕ್ರಮ ರೊಹಿಂಗ್ಯಾ ಮತ್ತು ಬಾಂಗ್ಲಾದೇಶಿಗಳಿಗೆ ದಾಖಲೆಗಳು ಮತ್ತು ಹಣವನ್ನು ಚುನಾವಣೆಯಲ್ಲಿ ಮತಬ್ಯಾಂಕ್ ಆಗಿ ಬಳಸಲು ಸಹಾಯ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿತ್ತು.
ಇದನ್ನೂ ಓದಿ: ದೆಹಲಿ ವಿಧಾನಸಭಾ ಚುನಾವಣೆ, ಯಾರೊಂದಿಗೂ ಮೈತ್ರಿ ಇಲ್ಲ ಎಂದ ಆಮ್ ಆದ್ಮಿ ಪಕ್ಷ
AAP Convenor Arvind Kejriwal writes to RSS Chief Mohan Bhagwat
“Whatever wrong BJP has done in the past, does RSS support it? BJP leaders are openly distributing money, does RSS support buying votes? Dalit and Purvanchali votes are being cut on a large scale, does RSS think this… pic.twitter.com/GjGaFfCxeA
— ANI (@ANI) January 1, 2025
ದೆಹಲಿ ವಿಧಾನಸಭೆ ಚುನಾವಣೆ 2025:
ದೆಹಲಿಯ ವಿಧಾನಸಭಾ ಚುನಾವಣೆಯು ಫೆಬ್ರವರಿ 2025ರಲ್ಲಿ ನಡೆಯುವ ಸಾಧ್ಯತೆಯಿದೆ. ಆದರೆ, ಭಾರತೀಯ ಚುನಾವಣಾ ಆಯೋಗವು ಇನ್ನೂ ದಿನಾಂಕಗಳನ್ನು ಘೋಷಿಸಿಲ್ಲ. ಸತತ 15 ವರ್ಷಗಳ ಕಾಲ ದೆಹಲಿಯಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಕಳೆದ ಎರಡು ವಿಧಾನಸಭಾ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ನೀಡಿದ್ದು, ಚುನಾವಣೆಯಲ್ಲಿ ಗೆಲ್ಲಲು ವಿಫಲವಾಗಿತ್ತು. 2020ರ ವಿಧಾನಸಭಾ ಚುನಾವಣೆಯಲ್ಲಿ 70 ಸ್ಥಾನಗಳಲ್ಲಿ ಆಮ್ ಆದ್ಮಿ ಪಕ್ಷ 62 ಸ್ಥಾನಗಳನ್ನು ಗೆದ್ದುಕೊಂಡಿತು ಮತ್ತು ಬಿಜೆಪಿ 8 ಸ್ಥಾನವನ್ನು ಪಡೆದುಕೊಂಡಿತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ