Delhi Results: ದೆಹಲಿಯಲ್ಲಿ 40 ಸ್ಥಾನಗಳನ್ನು ಪಡೆದು ಬಹುಮತ ದಾಟಿದ ಬಿಜೆಪಿ; ಡೊಳ್ಳು ಬಾರಿಸಿ ಕಾರ್ಯಕರ್ತರ ಸಂಭ್ರಮಾಚರಣೆ

|

Updated on: Feb 08, 2025 | 5:49 PM

ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಸರ್ಕಾರ ರಚಿಸಲು ಅಗತ್ಯವಿದ್ದ ಬಹುಮತವಾದ 36 ಸ್ಥಾನಗಳ ಗಡಿಯನ್ನು ಬಿಜೆಪಿ ದಾಟುವ ಮೂಲಕ ಈ ಬಾರಿಯ ಸರ್ಕಾರ ರಚಿಸಲು ಸಜ್ಜಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು 27 ವರ್ಷಗಳಿಂದ ಪ್ರಯತ್ನಿಸುತ್ತಿದ್ದ ಬಿಜೆಪಿಯ ಪ್ರಯತ್ನಕ್ಕೀಗ ಫಲ ಸಿಕ್ಕಿದೆ. ಭರ್ಜರಿ ಗೆಲುವಿನ ಮೂಲಕ ಬಿಜೆಪಿ ದೆಹಲಿಯಲ್ಲಿ ಪುನರಾಗಮನ ಮಾಡಿದೆ. ಸದ್ಯದ ಅಂಕಿ-ಅಂಶಗಳ ಪ್ರಕಾರ ಬಿಜೆಪಿ 40 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಇನ್ನೂ ಕೆಲವು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

Delhi Results: ದೆಹಲಿಯಲ್ಲಿ 40 ಸ್ಥಾನಗಳನ್ನು ಪಡೆದು ಬಹುಮತ ದಾಟಿದ ಬಿಜೆಪಿ; ಡೊಳ್ಳು ಬಾರಿಸಿ ಕಾರ್ಯಕರ್ತರ ಸಂಭ್ರಮಾಚರಣೆ
Bjp Won Delhi Election
Follow us on

ನವದೆಹಲಿ: ದೆಹಲಿಯಲ್ಲಿ ಫೆಬ್ರವರಿ 5ರಂದು ಒಂದೇ ಹಂತದಲ್ಲಿ ವಿಧಾನಸಭಾ ಚುನಾವಣೆ ನಡೆದಿತ್ತು. ಇಂದು ಮುಂಜಾನೆಯಿಂದ ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಬಿಜೆಪಿ 36 ಸ್ಥಾನಗಳ ಅರ್ಧದ ಗಡಿ ದಾಟಿರುವುದರಿಂದ ಸರ್ಕಾರ ರಚಿಸಲು ಸಜ್ಜಾಗಿದೆ. ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ತೀವ್ರ ಸ್ಪರ್ಧೆಯಲ್ಲಿ ಬಿಜೆಪಿ 36 ಸ್ಥಾನಗಳನ್ನು ದಾಟಿದೆ ಮತ್ತು ಎಎಪಿ 18 ಸ್ಥಾನಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. 27 ವರ್ಷಗಳ ನಂತರ ಬಿಜೆಪಿ ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರಕ್ಕೆ ಮರಳುತ್ತಿದೆ.

70 ವಿಧಾನಸಭಾ ಸ್ಥಾನಗಳಲ್ಲಿ ಒಂದರಲ್ಲೂ ಮುನ್ನಡೆ ಸಾಧಿಸದ ಕಾರಣದಿಂದಾಗಿ ಕಾಂಗ್ರೆಸ್ ದೆಹಲಿಯಲ್ಲಿ ಶೂನ್ಯ ಸ್ಥಾನಗಳ ಹ್ಯಾಟ್ರಿಕ್ ಸಾಧಿಸಿದೆ. ಕಳೆದ 2 ಬಾರಿಯ ಚುನಾವಣೆಯಲ್ಲೂ ಕಾಂಗ್ರೆಸ್​ಗೆ ಖಾತೆ ತೆರೆಯಲು ಸಾಧ್ಯವಾಗಿರಲಿಲ್ಲ. ಈ ಬಾರಿಯೂ ಅದೇ ಮುಂದುವರೆದಿದೆ. 15 ವರ್ಷಗಳಿಂದ ದೆಹಲಿಯಲ್ಲಿ ಕಾಂಗ್ರೆಸ್​ಗೆ ಒಂದೇ ಒಂದು ಸ್ಥಾನವನ್ನು ಕೂಡ ಪಡೆಯಲು ಸಾಧ್ಯವಾಗಿಲ್ಲ. ಈ ಮೂಲಕ ಕಾಂಗ್ರೆಸ್ ಹೊಸ ದಾಖಲೆ ಬರೆದಿದೆ!

ಇದನ್ನೂ ಓದಿ: ನಮ್ಮ ಗ್ಯಾರಂಟಿಗಳಿಂದ ವಿಕಸಿತ ಭಾರತದಲ್ಲಿ ಮುಖ್ಯ ಪಾತ್ರ ವಹಿಸಲಿದೆ ದೆಹಲಿ: ಗೆಲುವಿನ ಬಳಿಕ ಪ್ರಧಾನಿ ಮೋದಿ ಮಾತು

ಕೇಂದ್ರಾಡಳಿತದಲ್ಲಿರುವ ಪ್ರದೇಶವನ್ನು 2013ರಿಂದ ಎಎಪಿ ಆಡಳಿತ ನಡೆಸುತ್ತಿದೆ. ಆದರೆ 2025ರ ಚುನಾವಣೆಯಲ್ಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್, ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಸೋತಿದ್ದಾರೆ.

ಬಿಜೆಪಿಯ ಐತಿಹಾಸಿಕ ಗೆಲುವನ್ನು ಶ್ಲಾಘಿಸುತ್ತಾ ಪ್ರಧಾನಿ ಮೋದಿ ಅವರು ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದು, “ಅಭಿವೃದ್ಧಿ ಗೆಲ್ಲುತ್ತದೆ, ಉತ್ತಮ ಆಡಳಿತ ಗೆಲ್ಲುತ್ತದೆ” ಎಂದು ಹೇಳಿದ್ದಾರೆ. ದೆಹಲಿಯನ್ನು ಅಭಿವೃದ್ಧಿಪಡಿಸುವಲ್ಲಿ ಬಿಜೆಪಿ ಯಾವುದೇ ಅವಕಾಶವನ್ನು ಬಿಡುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೇಜ್ರಿವಾಲ್, ಸಿಸೋಡಿಯಾ ಸೇರಿ ದೆಹಲಿ ಚುನಾವಣೆಯಲ್ಲಿ ಈ ಪ್ರಮುಖ ಆಪ್ ನಾಯಕರಿಗೆ ಭಾರೀ ಮುಖಭಂಗ

ಚುನಾವಣಾ ಆಯೋಗವು ಇಂದು ಬಿಡುಗಡೆ ಮಾಡಿದ ಫಲಿತಾಂಶದ ಪಟ್ಟಿಯಲ್ಲಿ ದೆಹಲಿ ಚುನಾವಣಾ ಫಲಿತಾಂಶಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸ್ಪಷ್ಟ ವಿಜೇತರಾಗಿದ್ದು, 40 ಸ್ಥಾನಗಳನ್ನು ಗೆಲ್ಲುವ ಮೂಲಕ 27 ವರ್ಷಗಳ ನಂತರ ಪಕ್ಷವು ಅಧಿಕಾರಕ್ಕೆ ಮರಳುವ ಹಾದಿಯಲ್ಲಿದೆ. ಆಡಳಿತಾರೂಢ ಆಮ್ ಆದ್ಮಿ ಪಕ್ಷ (ಎಎಪಿ) ಸತತ ಮೂರನೇ ಚುನಾವಣೆಯಲ್ಲಿ ದೆಹಲಿ ವಿಧಾನಸಭೆಯಲ್ಲಿ ಜಯ ಗಳಿಸಲು ವಿಫಲವಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:21 pm, Sat, 8 February 25