ರೈತರ ಪ್ರತಿಭಟನೆ ಬೆನ್ನಲ್ಲೇ ಬಿಜೆಪಿಗೆ ಶಾಕ್​ ನೀಡಿದ ಮತದಾರರು

ಹರಿಯಾಣದ ಸೋನಿಪತ್​ ಹಾಗೂ ಅಂಬಾಲಾದಲ್ಲಿ ನಗರ ಚುನಾವಣೆ ನಡೆದಿತ್ತು. ಈ ವೇಳೆ ಆಡಳಿತಾರೂಢ ಬಿಜೆಪಿ ಮೇಯರ್​ ಸ್ಥಾನವನ್ನು ಕಳೆದುಕೊಂಡಿದೆ.

ರೈತರ ಪ್ರತಿಭಟನೆ ಬೆನ್ನಲ್ಲೇ ಬಿಜೆಪಿಗೆ ಶಾಕ್​ ನೀಡಿದ ಮತದಾರರು
ಸಾಂದರ್ಭಿಕ ಚಿತ್ರ
Edited By:

Updated on: Dec 30, 2020 | 10:07 PM

ಚಂಡೀಗಡ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ವಿರೋಧಿಸಿ ದೆಹಲಿ ಗಡಿಯಲ್ಲಿ ರೈತರು ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ಪರಿಣಾಮ ಹರಿಯಾಣ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮೇಲೆ ಉಂಟಾಗಿದೆ. ಈ ಚುನಾವಣೆಯಲ್ಲಿ ಬಿಜೆಪಿ ಭಾರೀ ಹಿನ್ನಡೆ ಅನುಭವಿಸಿದೆ.

ಹರಿಯಾಣದ ಸೋನಿಪತ್​ ಹಾಗೂ ಅಂಬಾಲಾದಲ್ಲಿ ನಗರಪಾಲಿಕೆ ಚುನಾವಣೆ ನಡೆದಿತ್ತು. ಎರಡೂ ಕಡೆ ಆಡಳಿತಾರೂಢ ಬಿಜೆಪಿ ಮೇಯರ್​ ಸ್ಥಾನವನ್ನು ಕಳೆದುಕೊಂಡಿದೆ. ಅಂಬಾಲ, ಪಂಚಕುಲಾ, ಸೋನಿಪತ್​, ಧರುಹೆರಾ, ಸಂಪ್ಲಾ, ಉಕ್ಲಾನಾದಲ್ಲಿ ಭಾನುವಾರ ಮತದಾನ ನಡೆದಿತ್ತು. ಇಂದು ಮತ ಎಣಿಕೆ ನಡೆದಿದೆ. ಈ ವೇಳೆ ಸೋನಿಪತ್​ನಲ್ಲಿ ಕಾಂಗ್ರೆಸ್​ 14 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದೆ.

ಕೇಂದ್ರ ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಬಿಜೆಪಿ ಸೋಲಿಗೆ ಕಾರಣ ಎಂದು ಕಾಂಗ್ರೆಸ್​ ಹೇಳಿದೆ.

ಅಂಬಾಲಾದಲ್ಲಿ ಜನಚೇತನ ಪಕ್ಷ ಗೆದ್ದಿದೆ. ಪಂಚಕುಲದಲ್ಲಿ ಮತ ಎಣಿಕೆ ಇನ್ನೂ ನಡೆಯುತ್ತಿದ್ದು, ಬಿಜೆಪಿ ಮುಂದಿದೆ. ಬಲವಾದ ಗ್ರಾಮೀಣ ನೆಲೆಯನ್ನು ಹೊಂದಿರುವ ಬಿಜೆಪಿ ಮೈತ್ರಿ ಪಕ್ಷ ಜೆಜೆಪಿ, ಧರುಹೆರಾ ಮತ್ತು ಉಕ್ಲಾನಾದಲ್ಲಿ ಸೋತಿದೆ.

ಪಂಜಾಬ್​ ರೈತರ ಬೇಡಿಕೆಗಳಿಗೆ ಭಾಗಶಃ ಒಪ್ಪಿಗೆ: ಜನವರಿ ನಾಲ್ಕಕ್ಕೆ ಮತ್ತೊಂದು ಸಭೆ

 

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us