ಬಿಜೆಪಿ ಹಣದ ಬ್ಯಾಗ್​ ನೀಡಿ ನಮ್ಮ ನಾಯಕರನ್ನು ಸೆಳೆಯೋ ಪ್ರಯತ್ನ ಮಾಡುತ್ತಿದೆ: ಮಮತಾ ಬ್ಯಾನರ್ಜಿ ಆರೋಪ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 16, 2020 | 9:50 PM

ಟಿಎಂಸಿ ನಾಯಕರನ್ನು ಸೆಳೆಯಲು ಬಿಜೆಪಿ ಪ್ರಯತ್ನ ನಡೆಸುತ್ತಲೇ ಇದೆ. ಆದರೆ, ಇದು ಅವರಿಂದ ಸಾಧ್ಯವಾಗುವುದಿಲ್ಲ. ನಾವು ಅವರನ್ನು ವಿಧಾನಸಭಾ ಚುನಾವಣೆಯಲ್ಲಿ ಸೋಲಿಸುತ್ತೇವೆ ಎಂದು ಮಮತಾ ಭವಿಷ್ಯ ನುಡಿದರು.

ಬಿಜೆಪಿ ಹಣದ ಬ್ಯಾಗ್​ ನೀಡಿ ನಮ್ಮ ನಾಯಕರನ್ನು ಸೆಳೆಯೋ ಪ್ರಯತ್ನ ಮಾಡುತ್ತಿದೆ: ಮಮತಾ ಬ್ಯಾನರ್ಜಿ ಆರೋಪ
ಮಮತಾ ಬ್ಯಾನರ್ಜಿ (ಸಂಗ್ರಹ ಚಿತ್ರ)
Follow us on

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಈಗಾಗಲೇ ಪ್ರಚಾರ ಕಾರ್ಯ ಆರಂಭವಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಕುರ್ಚಿ ಉಳಿಸಿಕೊಳ್ಳುವ ಜರೂರತ್ತು ಇದ್ದರೆ, ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೇರುವ ಹಂಬಲದಲ್ಲಿ ಬಿಜೆಪಿ ಇದೆ. ಈ ಮಧ್ಯೆ, ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಗಂಭೀರ ಆರೋಪ ಒಂದನ್ನು ಮಾಡಿದ್ದು, ಹಣದ ಬ್ಯಾಗ್​ ನೀಡಿ ಬಿಜೆಪಿ ನಮ್ಮವರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದೆ ಎಂದಿದೆ.

ಕೂಚ್​ ಬೆಹರ್​ನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಬಿಜೆಪಿ ಹಣ ಬಲ ಉಪಯೋಗಿಸಿ ನಮ್ಮ ನಾಯಕರನ್ನು ಖರೀದಿ ಮಾಡಲು ಮುಂದಾಗಿದೆ. ಪಶ್ಚಿಮ ಬಂಗಾಳ ರಾಜ್ಯಾಧ್ಯಕ್ಷ ಸುಬ್ರತಾ ಬಕ್ಷಿ ಅವರನ್ನು ಕಮಲ ಪಾಳಯಕ್ಕೆ ಸೇರ್ಪಡೆ ಮಾಡಿಕೊಳ್ಳುವ ಕಸರತ್ತು ನಡೆದಿತ್ತು. ಬಿಜೆಪಿಗೆ ಯಾವುದೇ ರಾಜಕೀಯ ಸೌಜನ್ಯ ಅಥವಾ ಸಿದ್ಧಾಂತವಿಲ್ಲ, ಎಂದು ಮಮತಾ ಆರೋಪಿಸಿದರು.

ಟಿಎಂಸಿ ನಾಯಕರನ್ನು ಸೆಳೆಯಲು ಬಿಜೆಪಿ ಪ್ರಯತ್ನ ನಡೆಸುತ್ತಲೇ ಇದೆ. ಆದರೆ, ಇದು ಅವರಿಂದ ಸಾಧ್ಯವಾಗುವುದಿಲ್ಲ. ನಾವು ಅವರನ್ನು ವಿಧಾನಸಭಾ ಚುನಾವಣೆಯಲ್ಲಿ ಸೋಲಿಸುತ್ತೇವೆ ಎಂದು ಮಮತಾ ಭವಿಷ್ಯ ನುಡಿದರು.

ಅನೇಕ ಟಿಎಂಸಿ ನಾಯಕರು ಸರ್ಕಾರದ ವಿರುದ್ಧ ಹಾಗೂ ಪಕ್ಷದ ವಿರುದ್ಧ ಹೇಳಿಕೆ ನೀಡಲು ಆರಂಭಿಸಿದ್ದರು. ಇದು ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿತ್ತು. ಅಷ್ಟೇ ಅಲ್ಲ, ಬಿಜೆಪಿ ಈ ನಾಯಕರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದೆಯೇ ಎನ್ನುವ ಅನುಮಾನ ಕೂಡ ಕಾಡಿತ್ತು.

ಪಶ್ಚಿಮ ಬಂಗಾಳದಲ್ಲಿ 294 ಕ್ಷೇತ್ರಗಳಿಗೆ ಮುಂದಿನ ವರ್ಷ ಚುನಾವಣೆ ನಡೆಯುತ್ತಿದೆ. ಈಗಾಗಲೇ ಲೋಕಸಭಾ ಚುನಾವಣೆಯಲ್ಲಿ ಮಹತ್ವದ ಗೆಲುವು ಸಾಧಿಸಿರುವ ಬಿಜೆಪಿ ಈಗ ವಿಧಾನಸಭೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವ ಕನಸು ಕಂಡಿದೆ.

ಯಾರಾದ್ರೂ ಮಮತಾ ಬ್ಯಾನರ್ಜಿನ ಯಾಕೆ ಕೊಲ್ತಾರೆ, ಇದು ಅನುಕಂಪ ಗಿಟ್ಟಿಸಿಕೊಳ್ಳುವ ನಾಟಕ: ಬಿಜೆಪಿ ಪ್ರತಿಕ್ರಿಯೆ