AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಜೆಪಿ ಸರ್ಕಾರ ನಾರಿ ಶಕ್ತಿಯನ್ನು ಸದಾ ಪ್ರೋತ್ಸಾಹಿಸುತ್ತದೆ’; ಮಹಿಳಾ ಕ್ರಿಕೆಟ್ ತಂಡದ ವಿಶ್ವಕಪ್ ಗೆಲುವಿಗೆ ಪ್ರಧಾನಿ ಮೋದಿ ಶ್ಲಾಘನೆ

ಭಾರತದ ಮಹಿಳಾ ಕ್ರಿಕೆಟ್ ತಂಡ ಈ ಬಾರಿಯ ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಗೆಲುವು ಸಾಧಿಸಿ ಚಾಂಪಿಯನ್ ಆಗಿದೆ. ನಿನ್ನೆ ರಾತ್ರಿ ಮುಂಬೈನಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 52 ರನ್​ಗಳಿಂದ ಸೋಲಿಸಿದ ಭಾರತದ ಮಹಿಳಾ ತಂಡ ಮೊದಲ ಬಾರಿಗೆ ವಿಶ್ವಕಪ್ ಟ್ರೋಫಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಮಹಿಳಾ ಕ್ರಿಕೆಟ್ ತಂಡದ ಈ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಅನೇಕ ಗಣ್ಯರು ಶುಭಾಶಯ ಕೋರಿದ್ದಾರೆ. ನಮ್ಮ ದೇಶದ ಆಟಗಾರ್ತಿಯರ ದೃಢನಿಶ್ಚಯ ಮತ್ತು ಬದ್ಧತೆಯನ್ನು ಮೋದಿ ಶ್ಲಾಘಿಸಿದ್ದಾರೆ.

‘ಬಿಜೆಪಿ ಸರ್ಕಾರ ನಾರಿ ಶಕ್ತಿಯನ್ನು ಸದಾ ಪ್ರೋತ್ಸಾಹಿಸುತ್ತದೆ’; ಮಹಿಳಾ ಕ್ರಿಕೆಟ್ ತಂಡದ ವಿಶ್ವಕಪ್ ಗೆಲುವಿಗೆ ಪ್ರಧಾನಿ ಮೋದಿ ಶ್ಲಾಘನೆ
Women World Cup Winners
ಸುಷ್ಮಾ ಚಕ್ರೆ
|

Updated on: Nov 03, 2025 | 4:14 PM

Share

ನವದೆಹಲಿ ನವೆಂಬರ್ 3: ನಿನ್ನೆ ರಾತ್ರಿ ನಡೆದ ಐಸಿಸಿ ಮಹಿಳಾ ವಿಶ್ವಕಪ್‌ ಅಂತಿಮ ಪಂದ್ಯದಲ್ಲಿ  (ICC Women’s World Cup) ಐತಿಹಾಸಿಕ ಗೆಲುವು ಸಾಧಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಇದು ಇಡೀ ರಾಷ್ಟ್ರಕ್ಕೆ ಹೆಮ್ಮೆಯ ಕ್ಷಣ, ನಮ್ಮ ದೇಶದ ಹೆಣ್ಣುಮಕ್ಕಳ ಈ ಯಶಸ್ಸು ಲಕ್ಷಾಂತರ ಯುವತಿಯರಿಗೆ ದೊಡ್ಡ ಕನಸು ಕಾಣಲು ಸ್ಫೂರ್ತಿ ನೀಡುತ್ತದೆ ಎಂದು ಮೋದಿ ಬಣ್ಣಿಸಿದ್ದಾರೆ. ಇಂದು ಬಿಹಾರದ ಸಹರ್ಸಾದಲ್ಲಿ ನಡೆದ ಬೃಹತ್ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ನಮ್ಮ ಮಹಿಳಾ ಕ್ರಿಕೆಟ್ ತಂಡದ ಅದ್ಭುತ ಗೆಲುವಿಗೆ ನಾನು ಅಭಿನಂದಿಸಲು ಬಯಸುತ್ತೇನೆ” ಎಂದು ಹೇಳಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಈ ವೇಳೆ ಭಾರತದ ಕ್ರಿಕೆಟ್ ಆಟಗಾರ್ತಿಯರ ದೃಢನಿಶ್ಚಯ ಮತ್ತು ಬದ್ಧತೆಯನ್ನು ಶ್ಲಾಘಿಸಿದ್ದಾರೆ. ನಿಮ್ಮ ಈ ಯಶಸ್ಸು ಲಕ್ಷಾಂತರ ಯುವತಿಯರಿಗೆ ದೊಡ್ಡ ಕನಸು ಕಾಣಲು ಮತ್ತು ಪ್ರತಿಯೊಂದು ಕ್ಷೇತ್ರದಲ್ಲೂ ಶ್ರೇಷ್ಠತೆಯನ್ನು ಸಾಧಿಸಲು ಪ್ರೇರಣೆ ನೀಡುತ್ತದೆ ಎಂಬುದು ಖಚಿತ. ನಮಗೆ ನಿಮ್ಮ ಬಗ್ಗೆ ಹೆಮ್ಮೆಯಿದೆ, ನಾವು ಗರ್ವದಿಂದ ಬೀಗುವಂತೆ ಮಾಡಿದ್ದೀರಿ ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಟೀಮ್ ಇಂಡಿಯಾಗೆ ಅರ್ಧ ಶತಕೋಟಿ ರೂ. ಬಹುಮಾನ ಘೋಷಿಸಿದ ಬಿಸಿಸಿಐ

“ನಮ್ಮ ಮಹಿಳಾ ಕ್ರಿಕೆಟ್ ತಂಡವನ್ನು ಮಾತ್ರವಲ್ಲದೆ ಅವರ ಪೋಷಕರನ್ನೂ ನಾನು ಅಭಿನಂದಿಸಲು ಬಯಸುತ್ತೇನೆ. ಮಹಿಳೆಯರಿಗೆ ಸರಿಯಾದ ನಿರ್ದೇಶನ ಮತ್ತು ಅವಕಾಶಗಳನ್ನು ನೀಡಿದಾಗ ಮಾತ್ರ ಇಂತಹ ಅದ್ಭುತವಾದ ಫಲಿತಾಂಶಗಳನ್ನು ನೋಡಲು ಸಾಧ್ಯ. ಇಂದು, ನಮ್ಮ ಹೆಣ್ಣುಮಕ್ಕಳು ಯುದ್ಧ ವಿಮಾನಗಳನ್ನು ಹಾರಿಸುತ್ತಿದ್ದಾರೆ, ಗಡಿಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ನಮ್ಮ ರಾಷ್ಟ್ರವನ್ನು ರಕ್ಷಿಸುತ್ತಿದ್ದಾರೆ. ಒಂದು ಕಾಲದಲ್ಲಿ ಬೇಟಿ ಬಚಾವೋ, ಬೇಟಿ ಪಡಾವೋ ಅಭಿಯಾನವನ್ನು ಅಪಹಾಸ್ಯ ಮಾಡಿದವರು ಈಗ ಅದರ ಪರಿಣಾಮವನ್ನು ನೋಡುತ್ತಿದ್ದಾರೆ. ನಮ್ಮ ಸರ್ಕಾರ ನಾರಿ ಶಕ್ತಿಯನ್ನು ಉತ್ತೇಜಿಸಲು ನಿರಂತರವಾಗಿ ಕೆಲಸ ಮಾಡಿದೆ ಹಾಗೂ ಮಾಡುತ್ತಲೇ ಇದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಆರ್​ಜೆಡಿ ಕಾಂಗ್ರೆಸ್ ತಲೆಗೆ ಬಂದೂಕಿಟ್ಟು, ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದೆ: ನರೇಂದ್ರ ಮೋದಿ

ದಕ್ಷಿಣ ಆಫ್ರಿಕಾದ ವಿರುದ್ಧ 52 ರನ್‌ಗಳ ಜಯ ಸಾಧಿಸುವ ಮೂಲಕ ಮೊದಲ ವಿಶ್ವಕಪ್ ಗೆದ್ದ ಭಾರತೀಯ ಮಹಿಳಾ ಕ್ರಿಕೆಟ್ ತಂಡಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ಅಭಿನಂದನೆ ಸಲ್ಲಿಸಿದ್ದಾರೆ. “ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ 2025 ಗೆದ್ದ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಪ್ರತಿಯೊಬ್ಬ ಸದಸ್ಯರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳು! ಅವರು ಮೊದಲ ಬಾರಿಗೆ ವಿಶ್ವಕಪ್ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಅವರು ಚೆನ್ನಾಗಿ ಆಡುತ್ತಿದ್ದಾರೆ. ಇಂದು ಅವರು ತಮ್ಮ ಪ್ರತಿಭೆ ಮತ್ತು ಪ್ರದರ್ಶನಕ್ಕೆ ತಕ್ಕ ಫಲಿತಾಂಶವನ್ನು ಪಡೆದಿದ್ದಾರೆ. ಈ ಮಹತ್ವದ ಕ್ಷಣವು ಮಹಿಳಾ ಕ್ರಿಕೆಟ್ ಅನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುತ್ತದೆ. ಈ ಯುವತಿಯರು ಭಾರತವನ್ನು ಹೆಮ್ಮೆಪಡುವಂತೆ ಮಾಡಿದ ರೀತಿಯನ್ನು ನಾನು ಮೆಚ್ಚುತ್ತೇನೆ” ಎಂದು ದ್ರೌಪದಿ ಮುರ್ಮು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ