
ನವದೆಹಲಿ ನವೆಂಬರ್ 3: ನಿನ್ನೆ ರಾತ್ರಿ ನಡೆದ ಐಸಿಸಿ ಮಹಿಳಾ ವಿಶ್ವಕಪ್ ಅಂತಿಮ ಪಂದ್ಯದಲ್ಲಿ (ICC Women’s World Cup) ಐತಿಹಾಸಿಕ ಗೆಲುವು ಸಾಧಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಇದು ಇಡೀ ರಾಷ್ಟ್ರಕ್ಕೆ ಹೆಮ್ಮೆಯ ಕ್ಷಣ, ನಮ್ಮ ದೇಶದ ಹೆಣ್ಣುಮಕ್ಕಳ ಈ ಯಶಸ್ಸು ಲಕ್ಷಾಂತರ ಯುವತಿಯರಿಗೆ ದೊಡ್ಡ ಕನಸು ಕಾಣಲು ಸ್ಫೂರ್ತಿ ನೀಡುತ್ತದೆ ಎಂದು ಮೋದಿ ಬಣ್ಣಿಸಿದ್ದಾರೆ. ಇಂದು ಬಿಹಾರದ ಸಹರ್ಸಾದಲ್ಲಿ ನಡೆದ ಬೃಹತ್ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ನಮ್ಮ ಮಹಿಳಾ ಕ್ರಿಕೆಟ್ ತಂಡದ ಅದ್ಭುತ ಗೆಲುವಿಗೆ ನಾನು ಅಭಿನಂದಿಸಲು ಬಯಸುತ್ತೇನೆ” ಎಂದು ಹೇಳಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಈ ವೇಳೆ ಭಾರತದ ಕ್ರಿಕೆಟ್ ಆಟಗಾರ್ತಿಯರ ದೃಢನಿಶ್ಚಯ ಮತ್ತು ಬದ್ಧತೆಯನ್ನು ಶ್ಲಾಘಿಸಿದ್ದಾರೆ. ನಿಮ್ಮ ಈ ಯಶಸ್ಸು ಲಕ್ಷಾಂತರ ಯುವತಿಯರಿಗೆ ದೊಡ್ಡ ಕನಸು ಕಾಣಲು ಮತ್ತು ಪ್ರತಿಯೊಂದು ಕ್ಷೇತ್ರದಲ್ಲೂ ಶ್ರೇಷ್ಠತೆಯನ್ನು ಸಾಧಿಸಲು ಪ್ರೇರಣೆ ನೀಡುತ್ತದೆ ಎಂಬುದು ಖಚಿತ. ನಮಗೆ ನಿಮ್ಮ ಬಗ್ಗೆ ಹೆಮ್ಮೆಯಿದೆ, ನಾವು ಗರ್ವದಿಂದ ಬೀಗುವಂತೆ ಮಾಡಿದ್ದೀರಿ ಎಂದು ಮೋದಿ ಹೇಳಿದ್ದಾರೆ.
VIDEO | Saharsa, Bihar: Referring to India’s historic World Cup win, Prime Minister Narendra Modi (@narendramodi) says, “Yesterday in Mumbai, India’s daughters created history as the nation lifted the Women’s Cricket World Cup for the very first time. After 25 years, the world… pic.twitter.com/MzWD6W44VJ
— Press Trust of India (@PTI_News) November 3, 2025
ಇದನ್ನೂ ಓದಿ: ಟೀಮ್ ಇಂಡಿಯಾಗೆ ಅರ್ಧ ಶತಕೋಟಿ ರೂ. ಬಹುಮಾನ ಘೋಷಿಸಿದ ಬಿಸಿಸಿಐ
“ನಮ್ಮ ಮಹಿಳಾ ಕ್ರಿಕೆಟ್ ತಂಡವನ್ನು ಮಾತ್ರವಲ್ಲದೆ ಅವರ ಪೋಷಕರನ್ನೂ ನಾನು ಅಭಿನಂದಿಸಲು ಬಯಸುತ್ತೇನೆ. ಮಹಿಳೆಯರಿಗೆ ಸರಿಯಾದ ನಿರ್ದೇಶನ ಮತ್ತು ಅವಕಾಶಗಳನ್ನು ನೀಡಿದಾಗ ಮಾತ್ರ ಇಂತಹ ಅದ್ಭುತವಾದ ಫಲಿತಾಂಶಗಳನ್ನು ನೋಡಲು ಸಾಧ್ಯ. ಇಂದು, ನಮ್ಮ ಹೆಣ್ಣುಮಕ್ಕಳು ಯುದ್ಧ ವಿಮಾನಗಳನ್ನು ಹಾರಿಸುತ್ತಿದ್ದಾರೆ, ಗಡಿಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ನಮ್ಮ ರಾಷ್ಟ್ರವನ್ನು ರಕ್ಷಿಸುತ್ತಿದ್ದಾರೆ. ಒಂದು ಕಾಲದಲ್ಲಿ ಬೇಟಿ ಬಚಾವೋ, ಬೇಟಿ ಪಡಾವೋ ಅಭಿಯಾನವನ್ನು ಅಪಹಾಸ್ಯ ಮಾಡಿದವರು ಈಗ ಅದರ ಪರಿಣಾಮವನ್ನು ನೋಡುತ್ತಿದ್ದಾರೆ. ನಮ್ಮ ಸರ್ಕಾರ ನಾರಿ ಶಕ್ತಿಯನ್ನು ಉತ್ತೇಜಿಸಲು ನಿರಂತರವಾಗಿ ಕೆಲಸ ಮಾಡಿದೆ ಹಾಗೂ ಮಾಡುತ್ತಲೇ ಇದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಇದನ್ನೂ ಓದಿ: ಆರ್ಜೆಡಿ ಕಾಂಗ್ರೆಸ್ ತಲೆಗೆ ಬಂದೂಕಿಟ್ಟು, ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದೆ: ನರೇಂದ್ರ ಮೋದಿ
My heartiest congratulations to each and every member of the Indian women cricket team on winning the ICC Women’s Cricket World Cup 2025! They have created history by winning it for the first time. They have been playing well and today they got the result befitting their talent…
— President of India (@rashtrapatibhvn) November 2, 2025
ದಕ್ಷಿಣ ಆಫ್ರಿಕಾದ ವಿರುದ್ಧ 52 ರನ್‌ಗಳ ಜಯ ಸಾಧಿಸುವ ಮೂಲಕ ಮೊದಲ ವಿಶ್ವಕಪ್ ಗೆದ್ದ ಭಾರತೀಯ ಮಹಿಳಾ ಕ್ರಿಕೆಟ್ ತಂಡಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ಅಭಿನಂದನೆ ಸಲ್ಲಿಸಿದ್ದಾರೆ. “ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ 2025 ಗೆದ್ದ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಪ್ರತಿಯೊಬ್ಬ ಸದಸ್ಯರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳು! ಅವರು ಮೊದಲ ಬಾರಿಗೆ ವಿಶ್ವಕಪ್ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಅವರು ಚೆನ್ನಾಗಿ ಆಡುತ್ತಿದ್ದಾರೆ. ಇಂದು ಅವರು ತಮ್ಮ ಪ್ರತಿಭೆ ಮತ್ತು ಪ್ರದರ್ಶನಕ್ಕೆ ತಕ್ಕ ಫಲಿತಾಂಶವನ್ನು ಪಡೆದಿದ್ದಾರೆ. ಈ ಮಹತ್ವದ ಕ್ಷಣವು ಮಹಿಳಾ ಕ್ರಿಕೆಟ್ ಅನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುತ್ತದೆ. ಈ ಯುವತಿಯರು ಭಾರತವನ್ನು ಹೆಮ್ಮೆಪಡುವಂತೆ ಮಾಡಿದ ರೀತಿಯನ್ನು ನಾನು ಮೆಚ್ಚುತ್ತೇನೆ” ಎಂದು ದ್ರೌಪದಿ ಮುರ್ಮು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ