ಸಂಸತ್ ವಿಶೇಷ ಅಧಿವೇಶನಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಸಂಸದರಿಗೆ ವಿಪ್​​ ಜಾರಿ ಮಾಡಿದ ಬಿಜೆಪಿ

Special Session of Parliament: ಸೆಪ್ಟೆಂಬರ್ 18ರಿಂದ ಪ್ರಾರಂಭವಾಗುವ ಸಂಸತ್ ವಿಶೇಷ  ಅಧಿವೇಶನಕ್ಕೆ ಬಿಜೆಪಿಯ ಎಲ್ಲ ಸಂಸದರು ಕಡ್ಡಾಯವಾಗಿ ಹಾಜರಾಗುವಂತೆ ಪಕ್ಷವು ವಿಪ್​​​ ಜಾರಿ ಮಾಡಿದೆ. ಐದು ದಿನಗಳ ಕಾಲ ನಡೆಯುವ ಸಂಸತ್ ವಿಶೇಷ  ಅಧಿವೇಶನಕ್ಕೆಕಡ್ಡಾಯವಾಗಿ ಹಾಜರಿರಬೇಕು ಎಂದು ಬಿಜೆಪಿ ತನ್ನ ಎಲ್ಲ ಸಂಸದರಿಗೆ ಮೂರು ಸಾಲಿನ ವಿವ್​​ ಜಾರಿ ಮಾಡಿದೆ.

ಸಂಸತ್ ವಿಶೇಷ ಅಧಿವೇಶನಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಸಂಸದರಿಗೆ ವಿಪ್​​ ಜಾರಿ ಮಾಡಿದ ಬಿಜೆಪಿ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Sep 14, 2023 | 6:12 PM

ದೆಹಲಿ,ಸೆ.14: ಸೆಪ್ಟೆಂಬರ್ 18ರಿಂದ ಪ್ರಾರಂಭವಾಗುವ ಸಂಸತ್ ವಿಶೇಷ  ಅಧಿವೇಶನಕ್ಕೆ (Special Session of Parliament) ಬಿಜೆಪಿಯ ಎಲ್ಲ ಸಂಸದರು ಕಡ್ಡಾಯವಾಗಿ ಹಾಜರಾಗುವಂತೆ ಪಕ್ಷವು ವಿಪ್ (whip)​​​ ಜಾರಿ ಮಾಡಿದೆ. ಐದು ದಿನಗಳ ಕಾಲ ನಡೆಯುವ ಸಂಸತ್ ವಿಶೇಷ  ಅಧಿವೇಶನಕ್ಕೆ ಕಡ್ಡಾಯವಾಗಿ ಹಾಜರಿರಬೇಕು ಎಂದು ಬಿಜೆಪಿ ತನ್ನ ಎಲ್ಲ ಸಂಸದರಿಗೆ ಮೂರು ಸಾಲಿನ ವಿಪ್​​ ಜಾರಿ ಮಾಡಿದೆ. ಸೆ.18ರಿಂದ ಸೆ.22ವರೆಗೆ ನಡೆಯುವ ಅಧಿವೇಶನದಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. ಜತೆಗೆ ಶಾಸಕಾಂಗ ವ್ಯವಹಾರಗಳನ್ನು ಹಾಗೂ ಕೆಲವೊಂದು ಮಸೂದೆಗಳನ್ನು ಅಂಗೀಕಾರಕ್ಕೆ ತೆಗೆದುಕೊಳ್ಳಲಾಗುವುದು ಎಂದು ಹೇಳಿದೆ. ಇನ್ನು ಈ ಅಧಿವೇಶದಲ್ಲಿ ಕಡ್ಡಾಯವಾಗಿ ಭಾಗವಹಿಸಿ ಸರ್ಕಾರದ ನಿಲುವನ್ನು ಬೆಂಬಲಿಸುವಂತೆ ವಿನಂತಿ ಮಾಡಲಾಗಿದೆ.

ಈ ಸಂಸತ್ ವಿಶೇಷ  ಅಧಿವೇಶನದಲ್ಲಿ ಯಾವೆಲ್ಲ ವಿಚಾರಗಳು ಚರ್ಚೆಯಾಗಲಿದೆ ಎಂಬುದರ ಬಗ್ಗೆ ಅನೇಕ ಊಹಾಪೋಹಗಳು ಹುಟ್ಟಿಕೊಂಡಿದೆ. ಇದನ್ನು ಸರ್ಕಾರ ತುಂಬಾ ರಹಸ್ಯ ಮಾಡುತ್ತಿದೆ ಎಂದು ಹೇಳಿತ್ತು. ಆದರೆ ನೆನ್ನೆ (ಸೆ.13) ವಿಶೇಷ ಚರ್ಚೆಯ ವಿಷಯಗಳನ್ನು ಪಟ್ಟಿ ಮಾಡಿದೆ. ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ನೇಮಕದ ಮಸೂದೆಯನ್ನು ಅಂಗೀಕರಿಸಲು ಹಾಗೂ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದೆ ಎಂದು ಈ ಪಟ್ಟಿಯಲ್ಲಿ ತಿಳಿಸಿದೆ. ಕಳೆದ ಮಾನ್ಸೂನ್ ಅಧಿವೇಶನದಲ್ಲಿ ಈ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಲಾಗಿತ್ತು.

ಇನ್ನು ಈ ಪಟ್ಟಿಯಲ್ಲಿ ವಕೀಲರ (ತಿದ್ದುಪಡಿ) ಮಸೂದೆ, 2023 ಮತ್ತು ‘ನಿಯತಕಾಲಿಕಗಳ ಪತ್ರಿಕಾ ಮತ್ತು ನೋಂದಣಿ ಮಸೂದೆ, 2023’ನ್ನು ಒಳಗೊಂಡಿದೆ. ಇವುಗಳನ್ನು ಈಗಾಗಲೇ ರಾಜ್ಯಸಭೆಯು 3 ಆಗಸ್ಟ್ 2023 ರಂದು ಅಂಗೀಕರಿಸಿದೆ.

ಇದನ್ನೂ ಓದಿ: ಸಂಸತ್ ವಿಶೇಷ ಅಧಿವೇಶನ ಹಿನ್ನೆಲೆ: ಸೆಪ್ಟಂಬರ್ 17ರಂದು ಸರ್ವಪಕ್ಷ ಸಭೆ ಕರೆದ ಕೇಂದ್ರ

ಪೋಸ್ಟ್ ಆಫೀಸ್ ಬಿಲ್, 2023ನ್ನು ಲೋಕಸಭೆಯ ವ್ಯವಹಾರದಲ್ಲಿ ಪಟ್ಟಿ ಮಾಡಲಾಗಿದೆ. ಈ ಮಸೂದೆಯನ್ನು 10 ಆಗಸ್ಟ್ 2023ರಂದು ರಾಜ್ಯಸಭೆಯಲ್ಲಿ ಪರಿಚಯಿಸಲಾಯಿತು. ಇದೀಗ ಇದರ ಬಗ್ಗೆಯು ಚರ್ಚೆ ನಡೆಸಲಿದೆ. ಈಗಾಗಲೇ 5 ದಿನಗಳ ವಿಶೇಷ ಅಧಿವೇಶನಕ್ಕೂ ಒಂದು ದಿನ ಮುಂಚಿತವಾಗಿ ಸೆಪ್ಟೆಂಬರ್ 17 ರಂದು ಸರ್ವಪಕ್ಷ ಸಭೆಯನ್ನು ಕೂಡ ಕರೆಯಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:18 pm, Thu, 14 September 23

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ