AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐರನ್ ಲೇಡಿ ಈಗ ದೇಶ ಆಳುತ್ತಿಲ್ಲ; ಸಿಜೆಐ ಸೂರ್ಯಕಾಂತ್ ರಾಜೀನಾಮೆಗೆ ಒತ್ತಾಯಿಸಿದ ಕಾಂಗ್ರೆಸ್​ಗೆ ಬಿಜೆಪಿ ತಿರುಗೇಟು

ದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್  ರಾಜೀನಾಮೆಗೆ ಆಗ್ರಹಿಸಿ, ಎಸ್​ಐಆರ್​ ಪ್ರಕ್ರಿಯೆ ಸ್ಥಗಿತಗೊಳಿಸಲು ಒತ್ತಾಯಿಸಿ ಇಂಡಿಯ ಒಕ್ಕೂಟ, ಸಿಜೆಪಿ ಬೃಹತ್ ಪ್ರತಿಭಟನೆ ನಡೆಸಿವೆ. ಈ ವೇಳೆ ಸಾವಿರಾರು ಜನರನ್ನು ವಶಕ್ಕೆ ಪಡೆಯಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಸಿಜೆಐ ಸೂರ್ಯಕಾಂತ್, ಇದಕ್ಕೂ ನನಗೂ ಸಂಬಂಧವಿಲ್ಲ. ಇದು ಕಾನೂನು ಮತ್ತು ಸುವ್ಯವಸ್ಥೆ ವ್ಯಾಪ್ತಿಗೆ ಬರುವ ವಿಷಯ ಎಂದಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಕಾಂಗ್ರೆಸ್ ಸಿಜೆಐ ಸೂರ್ಯಕಾಂತ್ ಅವರ ರಾಜೀನಾಮೆಗೆ ಒತ್ತಾಯಿಸಿತ್ತು. ಈ ಕುರಿತು ಇದೀಗ ಬಿಜೆಪಿ ಟೀಕಾ ಪ್ರಹಾರ ನಡೆಸಿದೆ.

ಐರನ್ ಲೇಡಿ ಈಗ ದೇಶ ಆಳುತ್ತಿಲ್ಲ; ಸಿಜೆಐ ಸೂರ್ಯಕಾಂತ್ ರಾಜೀನಾಮೆಗೆ ಒತ್ತಾಯಿಸಿದ ಕಾಂಗ್ರೆಸ್​ಗೆ ಬಿಜೆಪಿ ತಿರುಗೇಟು
ಕಿರಣ್ ರಿಜಿಜುImage Credit source: PTI
ಸುಷ್ಮಾ ಚಕ್ರೆ
|

Updated on: Oct 12, 2026 | 9:11 PM

Share

ನವದೆಹಲಿ, ಅಕ್ಟೋಬರ್ 12: ದೆಹಲಿ ಪ್ರತಿಭಟನೆಗಳು ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ವಿಷಯವಾಗಿದ್ದು, ಅದು ತನ್ನ ವ್ಯಾಪ್ತಿಗೆ ಬರುವುದಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹೇಳಿಕೆ ನೀಡಿದ ಬೆನ್ನಲ್ಲೇ, ಕಾಂಗ್ರೆಸ್ ಪಕ್ಷದ ಕೇರಳ ಘಟಕವು ಸಿಜೆಐ ಅವರ ರಾಜೀನಾಮೆಗೆ ಆಗ್ರಹಿಸಿ ವಿವಾದಾತ್ಮಕ ಪೋಸ್ಟ್ ಹಂಚಿಕೊಂಡಿದೆ. ಆದರೆ ತೀವ್ರ ವಿರೋಧ ಹಾಗೂ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಕೆಲವೇ ಗಂಟೆಗಳ ಬಳಿಕ ಆ ಪೋಸ್ಟ್ ಅನ್ನು ಡಿಲೀಟ್ ಮಾಡಲಾಗಿತ್ತು. ಕಾಂಗ್ರೆಸ್ ಪಕ್ಷದ ಈ ನಡೆಗೆ ಭಾರತೀಯ ಜನತಾ ಪಾರ್ಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ತುರ್ತು ಪರಿಸ್ಥಿತಿಯ ದಿನಗಳನ್ನು ನೆನಪಿಸಿದ ಕೇರಳ ಬಿಜೆಪಿ ಘಟಕ, ನ್ಯಾಯಾಂಗದ ಮೇಲೆ ಒತ್ತಡ ಹೇರಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಆರೋಪಿಸಿದೆ.

ಕಾಂಗ್ರೆಸ್ ಕುರಿತು ಬಿಜೆಪಿ ತೀವ್ರ ಆಕ್ರೋಶ ಹೊರಹಾಕಿದ್ದು, “ನಿಮ್ಮ ಅತಿಶಯೋಕ್ತಿಗಳ ‘ಐರನ್ ಲೇಡಿ’ ಈಗ ಭಾರತವನ್ನು ಆಳುತ್ತಿದ್ದಾರೆ ಎಂದು ಭಾವಿಸಬೇಡಿ. ತುರ್ತು ಪರಿಸ್ಥಿತಿಯ ಕಾಲದಲ್ಲಿ ನೀವು ನ್ಯಾಯಾಂಗವನ್ನು ಬೆದರಿಸುತ್ತಿದ್ದ ದಿನಗಳು ಈಗ ಕಳೆದುಹೋಗಿವೆ” ಎಂದು ತಿರುಗೇಟು ನೀಡಿದೆ.

ಇದನ್ನೂ ಓದಿ: ‘ಕೂಡಲೇ ರಾಜೀನಾಮೆ ನೀಡಿ’; ಸಿಜೆಐ ಸೂರ್ಯ ಕಾಂತ್ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ದೆಹಲಿಯಲ್ಲಿ ನಡೆದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ 33ನೇ ವಾರ್ಷಿಕೋತ್ಸವದ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಜೆಐ ಸೂರ್ಯ ಕಾಂತ್, ದೆಹಲಿ ಪ್ರತಿಭಟನೆಗಳ ಕುರಿತು ಪ್ರತಿಕ್ರಿಯಿಸುತ್ತಾ, “ಇದು ಕಾನೂನು ಮತ್ತು ಸುವ್ಯವಸ್ಥೆಯ ವಿಚಾರ. ಇದು ನನ್ನ ವಿಷಯವಲ್ಲ” ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು.

ಕೇಂದ್ರ ಸಚಿವ ಕಿರಣ್ ರಿಜಿಜು ತಿರುಗೇಟು:

ಸಿಜೆಐ ಸೂರ್ಯಕಾಂತ್ ಅವರ ರಾಜೀನಾಮೆಗೆ ಒತ್ತಾಯಿಸಿದ ಕಾಂಗ್ರೆಸ್‌ನ ಹೇಳಿಕೆಯನ್ನು ಖಂಡಿಸಿರುವ ಕೇಂದ್ರ ಸಚಿವ ಕಿರಣ್ ರಿಜಿಜು, “ನಾನು ಮುಂಚೆಯೇ ಹೇಳಿದ್ದೆ, ಕಾಂಗ್ರೆಸ್ ಪಕ್ಷದ ಮುಂದಿನ ಗುರಿ ನ್ಯಾಯಾಂಗ ವ್ಯವಸ್ಥೆ. ಭಾರತದ ಎಲ್ಲಾ ಸಾಂವಿಧಾನಿಕ ಮತ್ತು ಪ್ರಜಾಸತ್ತಾತ್ಮಕ ಸಂಸ್ಥೆಗಳನ್ನು ಧ್ವಂಸ ಮಾಡಲು ಕಾಂಗ್ರೆಸ್ ಯತ್ನಿಸುತ್ತಿದೆ. ದೇಶವಿರೋಧಿ ಗುಂಪುಗಳೆಲ್ಲವೂ ಒಂದಾಗುತ್ತಿವೆ. ಆದರೆ ದೇಶಪ್ರೇಮಿ ಭಾರತೀಯರೆಲ್ಲರೂ ಒಟ್ಟಾಗಿ ನಿಲ್ಲಲಿದ್ದಾರೆ” ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಎಸ್‌ಐಆರ್ ಅಕ್ರಮ; ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ ರಾಹುಲ್ ಗಾಂಧಿ

ಸಿಜೆಐ ಸೂರ್ಯ ಕಾಂತ್ ಹೇಳಿದ್ದೇನು?:

ದೆಹಲಿಯಲ್ಲಿ ಕೆಲವು ದಿನಗಳಿಂದ ಸಿಇಸಿ ಜ್ಞಾನೇಶ್ ಕುಮಾರ್ ಹಾಗೂ ಎಸ್‌ಐಆರ್ ಪ್ರಕ್ರಿಯೆ ವಿರೋಧಿಸಿ ವಿಪಕ್ಷಗಳು ಭಾರಿ ಪ್ರತಿಭಟನೆ ನಡೆಸುತ್ತಿದ್ದು, 40,000ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿ ಇಡೀ ದೆಹಲಿಯನ್ನು ಕೋಟೆಯನ್ನಾಗಿ ಮಾಡಲಾಗಿದೆ. ಸಾವಿರಾರು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಸುದ್ದಿಗಾರರು ಪ್ರಶ್ನಿಸಿದಾಗ ಸಿಜೆಐ ಸೂರ್ಯ ಕಾಂತ್, “ಇದು ನನ್ನ ವ್ಯಾಪ್ತಿಯ ವಿಷಯವಲ್ಲ. ನಾನು ಈ ಬಗ್ಗೆ ಯಾವುದೇ ಕಾಮೆಂಟ್ ಮಾಡುವುದಿಲ್ಲ” ಎಂದು ಹೇಳಿದ್ದರು.

ಅಲ್ಲದೆ, ‘ಇಂಡಿಯಾ’ ಒಕ್ಕೂಟದ ನಾಯಕರು ಇಂದು ಸಭೆಗಾಗಿ ಕೋರಿದ್ದ ಮನವಿಯನ್ನು ಸಿಜೆಐ ನಿರಾಕರಿಸಿದ್ದರು. ಈ ಕುರಿತು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರಿಗೆ ಪತ್ರ ಬರೆದಿರುವ ಸಿಜೆಐ ಸೂರ್ಯಕಾಂತ್, “ನೀವು ಪ್ರಸ್ತಾಪಿಸಿರುವ ವಿಷಯಗಳು ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ಪರಿಶೀಲನೆಯಲ್ಲಿವೆ. ಆದ್ದರಿಂದ, ಬಾಕಿ ಇರುವ ಪ್ರಕರಣಗಳ ಕುರಿತು ಚರ್ಚಿಸಲು ಸಭೆ ನಡೆಸುವುದು ಭಾರತೀಯ ಸಂವಿಧಾನದ ಮೂಲಭೂತ ಚೌಕಟ್ಟಿನ ಭಾಗವಾದ ‘ಅಧಿಕಾರ ವಿಭಜನೆ’ ತತ್ವಕ್ಕೆ ಸಂಪೂರ್ಣವಾಗಿ ವಿರುದ್ಧವಾಗಿದೆ” ಎಂದಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು
‘ಅತ್ತಿಗೆ ಪಟ್ಟ ಸಿಕ್ಕಿದ್ದಕ್ಕೆ ಖುಷಿ ಇದೆ’; ಸಂಗೀತಾ ಭಟ್ ಫಸ್ಟ್ ರಿಯಾಕ್ಷನ್
‘ಅತ್ತಿಗೆ ಪಟ್ಟ ಸಿಕ್ಕಿದ್ದಕ್ಕೆ ಖುಷಿ ಇದೆ’; ಸಂಗೀತಾ ಭಟ್ ಫಸ್ಟ್ ರಿಯಾಕ್ಷನ್
ಆನೇಕಲ್‌: ಅಂತರರಾಜ್ಯ ಬೈಕ್ ಕಳ್ಳರ ಬಂಧನ, ₹18 ಲಕ್ಷ ಮೌಲ್ಯದ ಬೈಕ್‌ಗಳ ವಶ
ಆನೇಕಲ್‌: ಅಂತರರಾಜ್ಯ ಬೈಕ್ ಕಳ್ಳರ ಬಂಧನ, ₹18 ಲಕ್ಷ ಮೌಲ್ಯದ ಬೈಕ್‌ಗಳ ವಶ