ಬಿಜೆಪಿ ಊಳಿಗಮಾನ್ಯ ವ್ಯವಸ್ಥೆಯ ಜಮೀನುದಾರನಂತೆ ವರ್ತಿಸುತ್ತಿದೆ: ಕೇಂದ್ರ ವಿರುದ್ಧ ಮಮತಾ ವಾಗ್ದಾಳಿ

ಬಿಜೆಪಿಯನ್ನು ಮಹಾಭಾರತದ ದುಶ್ಶಾಸನ ಮತ್ತು ದುರ್ಯೋಧನ ಎಂದು ಬಣ್ಣಿಸಿದ ಮಮತಾ ಬ್ಯಾನರ್ಜಿ ಈ ದುಶ್ಶಾಸನ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ಭಾರತದ ಪ್ರತಿಯೊಂದು ರಾಜಕೀಯ ಪಕ್ಷಗಳು ಒಂದಾಗಬೇಕೆಂದು ನಾನು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ

ಬಿಜೆಪಿ ಊಳಿಗಮಾನ್ಯ ವ್ಯವಸ್ಥೆಯ ಜಮೀನುದಾರನಂತೆ ವರ್ತಿಸುತ್ತಿದೆ: ಕೇಂದ್ರ ವಿರುದ್ಧ ಮಮತಾ ವಾಗ್ದಾಳಿ
ಮಮತಾ ಬ್ಯಾನರ್ಜಿ
Follow us
ರಶ್ಮಿ ಕಲ್ಲಕಟ್ಟ
|

Updated on:Mar 30, 2023 | 8:40 PM

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಇಂದು ಬಿಜೆಪಿ (BJP) ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದು, 2002ರ ಗುಜರಾತ್ ಗಲಭೆಗಳನ್ನು (2002 Gujarat riots) ಉಲ್ಲೇಖಿಸಿ ಪಕ್ಷ ಊಳಿಗಮಾನ್ಯ ವ್ಯವಸ್ಥೆಯ ಜಮೀನುದಾರನಂತೆ ವರ್ತಿಸುತ್ತಿದೆ, ಟೀಕಿಸುವವರನ್ನು ಜೈಲಿಗೆ ಕಳುಹಿಸುತ್ತಿದೆ ಎಂದು ಆರೋಪಿಸಿದ್ದಾರೆ. ಬಂಗಾಳದಲ್ಲಿ ನರಮೇಧವಿದೆ ಎಂದು ಅವರು ಹೇಳುತ್ತಾರೆ. ನರಮೇಧದ ಅರ್ಥ ನಿಮಗೆ ಅರ್ಥವಾಗಿದೆಯೇ? ಇದು ಗೋಧ್ರಾದಲ್ಲಿ ಸಂಭವಿಸಿದೆ. ಇದು ಬಿಲ್ಕಿಸ್‌ನೊಂದಿಗೆ ಸಂಭವಿಸಿದೆ. ಇದು ಎನ್‌ಆರ್‌ಸಿ/ಸಿಎಎಯೊಂದಿಗೆ ಸಂಭವಿಸಿದೆ. ದೆಹಲಿಯಲ್ಲಿ ಏನಾಯಿತು? ಎಂದು ಕೊಲ್ಕತ್ತಾದಲ್ಲಿ ಧರಣಿ ನಡೆಸುತ್ತಿರುವ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ತನಿಖಾ ಏಜೆನ್ಸಿಗಳ ಮೂಲಕ ಆಡಳಿತರೂಢ ಪಕ್ಷ ವಿರೋಧ ಪಕ್ಷಗಳನ್ನು ಗುರಿಯಾಗಿಸಿಕೊಂಡಿದೆ. ಬಿಜೆಪಿಯವರು ಊಳಿಗಮಾನ್ಯ ಭೂಮಾಲೀಕರಂತೆ ವರ್ತಿಸುತ್ತಿದ್ದಾರೆ, ಬಿಜೆಪಿ ವಿರುದ್ಧ ಯಾರಾದರೂ ಏನಾದರೂ ಹೇಳಿದರೆ ಜೈಲಿಗೆ ಕಳುಹಿಸುತ್ತಾರೆ, ಬಿಜೆಪಿ ವಿರುದ್ಧ ಏನಾದರೂ ಹೇಳಿದರೆ ಅವರನ್ನು ಸದನದಿಂದ ಹೊರಹಾಕುತ್ತಾರೆ. ಬಿಜೆಪಿ ವಿರುದ್ಧ ಯಾರಾದರೂ ಏನಾದರೂ ಹೇಳಿದರೆ ಇಡಿ, ಸಿಬಿಐಯನ್ನು ಕಳುಹಿಸುತ್ತಾರೆ. ಅವರು ಎಂಥಾ ಪ್ರಾಮಾಣಿಕ ಪಕ್ಷದವರು. ಭಾರತದಲ್ಲಿ ಮಾತ್ರವಲ್ಲ, ಬಿಬಿಸಿ ಕೂಡ ಅದನ್ನು ಹೇಳುತ್ತಿದೆ. ನಾವು ದೇಶದೊಂದಿಗೆ ಇದ್ದೇವೆ, ಅದರ ವಿರುದ್ಧ ಏನನ್ನೂ ಕೇಳಲು ಇಷ್ಟಪಡುವುದಿಲ್ಲ ಎಂದು ತೃಣಮೂಲ ಮುಖ್ಯಸ್ಥರು ಹೇಳಿದ್ದಾರೆ.

ಬಂಗಾಳದಲ್ಲಿನ ಪಂಚಾಯತ್ ಚುನಾವಣೆಗೆ ಮುನ್ನ ತನ್ನ ಎರಡು ದಿನಗಳ ಧರಣಿಯಲ್ಲಿ ಮಾತನಾಡಿದ ಮಮತಾ, ಬಿಜೆಪಿಯು ಬಂಗಾಳಕ್ಕೆ ಹಣವನ್ನು ತಡೆಹಿಡಿಯುತ್ತಿದೆ. ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: Narendra Modi: ಮೋದಿ ಭೇಟಿ ಮಾಡಿದ ಆಸ್ಕರ್ ವಿಜೇತ ದಿ ಎಲಿಫೆಂಟ್ ವಿಸ್ಪರರ್ಸ್ ತಂಡ

ಬಿಜೆಪಿಗೆ ಸೇರಿದ ನಂತರ ರಾಜಕಾರಣಿಗಳ ವಿರುದ್ಧದ ಕ್ರಿಮಿನಲ್ ಆರೋಪಗಳನ್ನು ಹೇಗೆ ತೆರವುಗೊಳಿಸಲಾಗುತ್ತದೆ ಎಂಬುದನ್ನು ತೋರಿಸಲು ಮಮತಾ ಧರಣಿ ವೇದಿಕೆಯಲ್ಲಿ ವಾಷಿಂಗ್ ಮೆಷಿನ್​​ ಮಾದರಿಯನ್ನು ಪ್ರದರ್ಶಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಆರಂಭದಲ್ಲಿ ಘೋಷಿಸಿದ ನಂತರ ಮಮತಾ ಬ್ಯಾನರ್ಜಿ ನಿನ್ನೆ ರಾಜಕೀಯ ಪಕ್ಷಗಳು ಒಗ್ಗಟ್ಟಾಗಲು ಕರೆನೀಡಿದ್ದಾರೆ.

ಬಿಜೆಪಿಯನ್ನು ಮಹಾಭಾರತದ ದುಶ್ಶಾಸನ ಮತ್ತು ದುರ್ಯೋಧನ ಎಂದು ಬಣ್ಣಿಸಿದ ಅವರು ಈ ದುಶ್ಶಾಸನ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ಭಾರತದ ಪ್ರತಿಯೊಂದು ರಾಜಕೀಯ ಪಕ್ಷಗಳು ಒಂದಾಗಬೇಕೆಂದು ನಾನು ಒತ್ತಾಯಿಸುತ್ತೇನೆ. ದೇಶದ ಜನಸಾಮಾನ್ಯರನ್ನು ಹಾಗೂ ಭಾರತೀಯ ಪ್ರಜಾಪ್ರಭುತ್ವವನ್ನು ಉಳಿಸಲು ಈ ದುರ್ಯೋಧನ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಬೇಕು ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:32 pm, Thu, 30 March 23

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ