ಬಿಜೆಪಿ ಹಣದಿಂದ ಮತದಾರರನ್ನು ಖರೀದಿಸುತ್ತಿದೆ, ಇದು ನಿಮಗೆ ಕಾಣುತ್ತಿಲ್ಲವೇ, RSS ಮುಖ್ಯಸ್ಥರಿಗೆ ಪತ್ರ ಬರೆದ ಕ್ರೇಜಿವಾಲ್

ಬಿಜೆಪಿ ಮೇಲೆ ಒಂದಲ್ಲ ಒಂದು ಆರೋಪಗಳನ್ನು ಮಾಡುತ್ತಿರುವ ದೆಹಲಿ ಮುಖ್ಯಮಂತ್ರಿ, ಇದೀಗ ಮತ್ತೊಂದು ಆರೋಪವನ್ನು ಮಾಡಿದ್ದಾರೆ. ಅವರ ಆರೋಪದ ಬಗ್ಗೆ ಆರ್​ಎಸ್​​ಎಸ್​​ ಮುಖ್ಯಸ್ಥರಿಗೆ ಪತ್ರ ಬರೆಯುವ ಮೂಲಕ ಪ್ರಶ್ನೆ ಮಾಡಿದ್ದಾರೆ. ಬಿಜೆಪಿ ನಾಯಕರು ಮಾಡುತ್ತಿರು ಹಾಗೂ ಅನುಸರಿಸುತ್ತಿರುವ ಕ್ರಮ ಸರಿಯಾಗಿದ್ದಿಯೇ? ಇದನ್ನು ನೀವು ಒಪ್ಪಿಕೊಳ್ಳುತ್ತೀರಾ ಎಂಬ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಅಷ್ಟಕ್ಕೂ ಅರವಿಂದ್ ಕೇಜ್ರಿವಾಲ್ ಬಿಜೆಪಿ ಮೇಲೆ ಮಾಡುತ್ತಿರುವ ಆರೋಪ ಮತ್ತು ಆರ್​ಎಸ್​​ಎಸ್​​ ಮುಖ್ಯಸ್ಥರಿಗೆ ಬರೆದ ಪತ್ರದಲ್ಲಿ ಏನಿದೆ? ಎಂಬ ಬಗ್ಗೆ ಇಲ್ಲಿದೆ ಮಾಹಿತಿ

ಬಿಜೆಪಿ ಹಣದಿಂದ ಮತದಾರರನ್ನು ಖರೀದಿಸುತ್ತಿದೆ, ಇದು ನಿಮಗೆ ಕಾಣುತ್ತಿಲ್ಲವೇ, RSS ಮುಖ್ಯಸ್ಥರಿಗೆ ಪತ್ರ ಬರೆದ ಕ್ರೇಜಿವಾಲ್
ಅರವಿಂದ್ ಕೇಜ್ರಿವಾಲ್, ಮೋಹನ್ ಭಾಗವತ್
Follow us
ಅಕ್ಷಯ್​ ಪಲ್ಲಮಜಲು​​
|

Updated on: Jan 01, 2025 | 3:05 PM

ದೆಹಲಿ, ಜ.1: ದೆಹಲಿ ಮಾಜಿ ಮುಖ್ಯಮಂತ್ರಿ ಹಾಗೂ ಎಎಪಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಬಿಜೆಪಿ ಪಕ್ಷದ ಕ್ರಮಗಳ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದಾರೆ. ಬಿಜೆಪಿ ಪಕ್ಷ ಮಾಡುವ ಎಲ್ಲ ಕೆಲಸಗಳನ್ನು ಮತ್ತು ಕ್ರಮಗಳನ್ನು ನೀವು ಒಪ್ಪುತ್ತೀರಾ ಎಂದು ಪ್ರಶ್ನೆ ಮಾಡಿದ್ದಾರೆ. ಬಿಜೆಪಿಯ ಕೆಲವು ಆಚರಣೆಗಳನ್ನು ಆರ್‌ಎಸ್‌ಎಸ್ ಬೆಂಬಲಿಸುತ್ತದೆಯೇ ಈ ಸ್ಪಷ್ಟನೆ ನೀಡಿ ಎಂದು ಕೇಳಿದ್ದಾರೆ. ಈ ಹಿಂದೆ ಬಿಜೆಪಿ ಏನೇ ತಪ್ಪು ಮಾಡಿದ್ದರೂ ಆರ್‌ಎಸ್‌ಎಸ್ ಬೆಂಬಲಿಸುತ್ತದೆಯೇ, ಬಿಜೆಪಿ ನಾಯಕರು ಬಹಿರಂಗವಾಗಿ ಹಣ ಹಂಚುತ್ತಿದ್ದಾರೆ ಎಂದು ಕೇಜ್ರಿವಾಲ್ ತಮ್ಮ ಪತ್ರದಲ್ಲಿ ಪ್ರಶ್ನಿಸಿದ್ದಾರೆ.

ಮತಗಳನ್ನು ಖರೀದಿಸುವುದನ್ನು ಆರ್‌ಎಸ್‌ಎಸ್ ಬೆಂಬಲಿಸುತ್ತದೆಯೇ? ದಲಿತ ಮತ್ತು ಪೂರ್ವಾಂಚಲಿ ಮತಗಳಿಗೆ ದೊಡ್ಡ ಮಟ್ಟದಲ್ಲಿ ಕತ್ತರಿ ಹಾಕಲಾಗುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಸರಿ ಎಂದು ಆರೆಸ್ಸೆಸ್ ಭಾವಿಸುತ್ತದೆಯೇ? ಬಿಜೆಪಿ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದೆ ಎಂದು ಆರೆಸ್ಸೆಸ್ ಭಾವಿಸುವುದಿಲ್ಲವೇ? ಎಂದು ಪತ್ರದಲ್ಲಿ ಪ್ರಶ್ನಿಸಿದ್ದಾರೆ. ಇನ್ನು ಬಿಜೆಪಿ ನಾಯಕರು ಮತದಾರರ ಪಟ್ಟಿಯನ್ನು ದುರ್ಬಳಕೆ ಮಾಡಿಕೊಂಡಿರುವ ಬಗ್ಗೆ ಕೇಜ್ರಿವಾಲ್ ಕಳವಳ ವ್ಯಕ್ತಪಡಿಸಿದರು. ದಲಿತ ಮತ್ತು ಪೂರ್ವಾಂಚಲಿ ಮತಗಳನ್ನು (ಮತದಾರರ ಪಟ್ಟಿಯಿಂದ) ದೊಡ್ಡ ಪ್ರಮಾಣದಲ್ಲಿ ತೆಗೆದು ಹಾಕಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಒಳ್ಳೆಯದು ಎಂದು ಆರೆಸ್ಸೆಸ್ ಭಾವಿಸುತ್ತದೆಯೇ? ಬಿಜೆಪಿ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದೆ ಎಂದು ಆರ್‌ಎಸ್‌ಎಸ್‌ಗೆ ಅನಿಸುವುದಿಲ್ಲವೇ? ಮೋಹನ್ ಭಾಗವತ್ ಅವರಿಗೆ ಪತ್ರದ ಮೂಲಕ ಪ್ರಶ್ನಿಸಿದ್ದಾರೆ.

ಇದಕ್ಕೂ ಮುನ್ನ ಸೋಮವಾರ ಎಎಪಿ ವಕ್ತಾರ ಪ್ರಿಯಾಂಕಾ ಕಕ್ಕರ್, ಬಿಜೆಪಿ ನಾಯಕ ವಿಶಾಲ್ ಭಾರದ್ವಾಜ್ ಅವರು ಶಾದರ ಕ್ಷೇತ್ರದಲ್ಲಿ ಮತದಾರರ ಹೆಸರನ್ನು ಅಳಿಸಲು ಅರ್ಜಿಗಳನ್ನು ಸಲ್ಲಿಸಿದ್ದಾರೆ, ವಿಶೇಷವಾಗಿ ಪೂರ್ವಾಂಚಲಿ ಮತದಾರರನ್ನು ಗುರಿಯಾಗಿಸಿಕೊಂಡು ಈ ಕೆಲಸವನ್ನು ಬಿಜೆಪಿಯವರು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದರ ವಿರುದ್ಧ ನಾವು ಧ್ವನಿ ಎತ್ತಿದ್ದ ನಂತರ ಈ ಅಕ್ರಮ ಕೆಲಸವನ್ನು ನಿಲ್ಲಿಸಿದ್ದಾರೆ ಎಂದು ಹೇಳಿದರು. ಬಿಜೆಪಿ ನಾಯಕ ಪರ್ವೇಶ್ ಶರ್ಮಾ ಅವರು ನವದೆಹಲಿ ಕ್ಷೇತ್ರದಲ್ಲಿ ಮತಕ್ಕಾಗಿ ಹಣವನ್ನು ಹಂಚಿದ್ದಾರೆ ಮತ್ತು ಮತದಾರರ ಸೇರ್ಪಡೆ ಮತ್ತು ಅಳಿಸುವಿಕೆಗಾಗಿ ಚುನಾವಣಾ ಆಯೋಗಕ್ಕೆ (EC) ಸಂಘರ್ಷದ ಅರ್ಜಿಗಳನ್ನು ಸಲ್ಲಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಬಿಜೆಪಿ ನಾಯಕರೊಬ್ಬರು ಮತದಾರರ ಹೆಸರನ್ನು ಅಳಿಸಲು ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಮತದಾರರ ಹೆಸರು ಸೇರಿಸಲು ಮತ್ತೊಂದು ಅರ್ಜಿ ಇತ್ತು ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಕೆಲಸ ಮತ್ತು ಜೀವನದ ಸಮತೋಲನ ಹೇಗೆ? ನಾರಾಯಣ ಮೂರ್ತಿ 70 ಗಂಟೆ ಕೆಲಸದ ಹೇಳಿಕೆಗೆ ಗೌತಮ್ ಅದಾನಿ ಹೇಳೋದೇನು?

ಬಿಜೆಪಿ “ಮತದಾರರ ಪಟ್ಟಿಯನ್ನು ದುರ್ಬಳಕೆ ಮಾಡುತ್ತಿದೆ” ಎಂದು ಕೇಜ್ರಿವಾಲ್ ಭಾನುವಾರ ಆರೋಪಿಸಿದ್ದರು. ಇದೀಗ ಈ ಬಗ್ಗೆ ಪ್ರಕ್ರಿಯಿಸಿದ ದೆಹಲಿ ಚುನಾವಣಾ ಆಯೋಗ ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದ ಎಲ್ಲಾ ಆಕ್ಷೇಪಣೆಗಳು ಮತ್ತು ಹಕ್ಕುಗಳನ್ನು ಡಿಸೆಂಬರ್ 24 ರೊಳಗೆ ಪರಿಹರಿಸಲಾಗಿದೆ ಮತ್ತು ಅಂತಿಮ ಪಟ್ಟಿಯನ್ನು ಜನವರಿ 6, 2025 ರಂದು ಪ್ರಕಟಿಸಲಾಗುವುದು ಎಂದು ಹೇಳಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು