AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ಕಮಲ ಅರಳಿಸಲು ಮಾಸ್ಟರ್ ಪ್ಲಾನ್; ಮುಸ್ಲಿಂ,ಕ್ರೈಸ್ತ ಸಮುದಾಯದ ಓಲೈಕೆಗೆ ಬಿಜೆಪಿ ಸಜ್ಜು

ಏಪ್ರಿಲ್ 15 ರಂದು ವಿಷು ಹಬ್ಬದಂದು ಬಲಪಂಥೀಯ ಕಾರ್ಯಕರ್ತರ ಮನೆಗಳಿಗೆ ಕ್ರಿಶ್ಚಿಯನ್ನರನ್ನು ಆಹ್ವಾನಿಸಲಾಗುತ್ತದೆ. ಸಾಮಾನ್ಯ ಜನರು ಈ ಉಪಕ್ರಮವನ್ನು ಸ್ವಾಗತಿಸಿದರೆ, ಆಡಳಿತಾರೂಢ ಎಡಪಕ್ಷ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಇದನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಬಿಜೆಪಿ ನಾಯಕರು ಹೇಳುತ್ತಾರೆ.

ಕೇರಳದಲ್ಲಿ ಕಮಲ ಅರಳಿಸಲು ಮಾಸ್ಟರ್ ಪ್ಲಾನ್; ಮುಸ್ಲಿಂ,ಕ್ರೈಸ್ತ ಸಮುದಾಯದ ಓಲೈಕೆಗೆ ಬಿಜೆಪಿ ಸಜ್ಜು
ಕೇರಳದಲ್ಲಿ ಅಮಿತ್ ಶಾ
Follow us
ರಶ್ಮಿ ಕಲ್ಲಕಟ್ಟ
|

Updated on: Mar 13, 2023 | 7:32 PM

ದೆಹಲಿ: ಈಶಾನ್ಯ ಭಾಗದಲ್ಲಿ ಅಧಿಪತ್ಯ ಸ್ಥಾಪಿಸಿದ ನಂತರ ಬಿಜೆಪಿಯು (BJP) ಕೇರಳವನ್ನು(Kerala) ಗೆಲ್ಲಲು ಹೊರಟಿದ್ದು ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಅಪ್ಪಿಕೊಳ್ಳಲು ಯೋಜಿಸುವ ಬೃಹತ್ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ. ಕೇರಳದಲ್ಲಿ ಮುಸ್ಲಿಂ(Muslim) ಮತ್ತು ಕ್ರೈಸ್ತರ ಜನಸಂಖ್ಯೆ ಒಟ್ಟು ಜನಸಂಖ್ಯೆಯ ಶೇಕಡಾ 46 ರಷ್ಟಿದೆ. ಹೀಗಿರುವಾಗ ಸಾಂಪ್ರದಾಯಿಕವಾಗಿ ಎಡ ಮತ್ತು ಕಾಂಗ್ರೆಸ್‌ನ ಭದ್ರಕೋಟೆಯಾಗಿರುವ ರಾಜ್ಯದಲ್ಲಿ ಕಮಲ ಅರಳಿಸಲು ಇದು ನಿರ್ಣಾಯಕವಾಗಿದೆ.2019 ರ ಚುನಾವಣೆಗೆ ಮುನ್ನ ಕೇರಳದಲ್ಲಿ ತನ್ನ ಪ್ರಭಾವವನ್ನು ಹೆಚ್ಚಿಸಿದ ಬಿಜೆಪಿಗೆ ಅಲ್ಲಿ ಖಾತೆ ತೆರೆಯಲು ಸಾಧ್ಯವಾಗಲಿಲ್ಲ.

ದೇಶದಲ್ಲಿ ಮೋದಿ ಅಲೆ ಇದ್ದರೂ ಕೇರಳದಲ್ಲಿ ಶಬರಿಮಲೆ ವಿಷಯದಲ್ಲಿ ಬಿಜೆಪಿ ಜನಪ್ರೀತಿ ಗಳಿಸಲು ಪ್ರಯತ್ನಿಸಿದರೂ ಖಾತೆ ತೆರೆಯಲು ಸಾಧ್ಯವಾಗಲಿಲ್ಲ.ರಾಜ್ಯದ 20 ಲೋಕಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ 15 ಸ್ಥಾನಗಳನ್ನು ಗೆದ್ದಿತ್ತು. ಅದರ ಮಿತ್ರಪಕ್ಷಗಳು ನಾಲ್ಕು ಸ್ಥಾನಗಳನ್ನು ಗೆದ್ದಿತ್ತು. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಎರಡು ಮತ್ತು ಕೇರಳ ಕಾಂಗ್ರೆಸ್ (ಮಾಣಿ ಗುಂಪು) ಮತ್ತು ರೆವಲ್ಯೂಷನರೀ ಸೋಷ್ಯಲಿಸ್ಟ್ ಪಾರ್ಟಿ ತಲಾ ಒಂದು ಸ್ಥಾನವನ್ನು ಗಳಿಸಿತ್ತು. ಧಾರ್ಮಿಕ ವಿಷಯಗಳ ಬಗ್ಗೆ ಪಕ್ಷದ ನಿಲುವನ್ನು ಜನರು ತಿರಸ್ಕರಿಸಿದ್ದಾರೆ ಎಂಬುದು ಈ ಫಲಿತಾಂಶ ತೋರಿಸಿತ್ತು.

ಆದಾಗ್ಯೂ,ಬಲಪಂಥೀಯ ಬೆಂಬಲಿಗರು ಮತ್ತು ಎಡಪಕ್ಷಗಳ ನಡುವೆ ಕೋಮು ಘರ್ಷಣೆಯ ಅನೇಕ ಘಟನೆಗಳ ಹೊರತಾಗಿಯೂ ರಾಜ್ಯದಲ್ಲಿ ಬಿಜೆಪಿಯ ಬೆಳವಣಿಗೆಯು ಕುಂಠಿತವಾಗಿದೆ.

ಈ ಬಾರಿಯ ಬೃಹತ್ ಕಾರ್ಯಕ್ರಮವು ಈಸ್ಟರ್ ವಾರದಂದು ಕ್ರೈಸ್ತರ ಮನೆಗಳಿಗೆ ಬಿಜೆಪಿ ಕಾರ್ಯಕರ್ತರು ಭೇಟಿ ನೀಡುವುದನ್ನು ಒಳಗೊಂಡಿರುತ್ತದೆ ಎಂದು ಮೂಲಗಳು ತಿಳಿಸಿವೆ. ಏಪ್ರಿಲ್ 9, ಈಸ್ಟರ್ ಭಾನುವಾರದಂದು 10,000 ಬಿಜೆಪಿ ಕಾರ್ಯಕರ್ತರು 1 ಲಕ್ಷ ಕ್ರೈಸ್ತರ ಮನೆಗಳಿಗೆ ಭೇಟಿ ನೀಡಲಿದ್ದಾರೆ. ಕಳೆದ ವರ್ಷ, ಕ್ರಿಸ್‌ಮಸ್ ವಾರದಲ್ಲಿ, ಸಾವಿರಾರು ಬಿಜೆಪಿ ಕಾರ್ಯಕರ್ತರು ಕ್ರಿಶ್ಚಿಯನ್ನರ ಮನೆಗಳಿಗೆ ಉಡುಗೊರೆಗಳೊಂದಿಗೆ ಭೇಟಿ ನೀಡಿದ್ದರು ಎಂದು ಮೂಲಗಳು ತಿಳಿಸಿವೆ. ಬಲಪಂಥೀಯ ಕಾರ್ಯಕರ್ತರು ಏಪ್ರಿಲ್ ಮೂರನೇ ವಾರದಲ್ಲಿ ಈದ್‌ನಲ್ಲಿ ಮುಸ್ಲಿಮರ ಮನೆಗಳಿಗೆ ಭೇಟಿ ನೀಡುತ್ತಾರೆ.

ಇದನ್ನೂ ಓದಿ: Same Sex Marriage: ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಅರ್ಜಿ ವಿಚಾರಣೆ ಏ.18ಕ್ಕೆ ಮುಂದೂಡಿದ ಸುಪ್ರೀಂ

ಏಪ್ರಿಲ್ 15 ರಂದು ವಿಷು ಹಬ್ಬದಂದು ಬಲಪಂಥೀಯ ಕಾರ್ಯಕರ್ತರ ಮನೆಗಳಿಗೆ ಕ್ರಿಶ್ಚಿಯನ್ನರನ್ನು ಆಹ್ವಾನಿಸಲಾಗುತ್ತದೆ. ಸಾಮಾನ್ಯ ಜನರು ಈ ಉಪಕ್ರಮವನ್ನು ಸ್ವಾಗತಿಸಿದರೆ, ಆಡಳಿತಾರೂಢ ಎಡಪಕ್ಷ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಇದನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಬಿಜೆಪಿ ನಾಯಕರು ಹೇಳುತ್ತಾರೆ.

ಹೈದರಾಬಾದ್‌ನಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಕೇರಳದ ಅಲ್ಪಸಂಖ್ಯಾತರಿಗೆ “ಸ್ನೇಹ ಸಂವಾದ”ಆಯೋಜಿಸುವಂತೆ ಪಕ್ಷದ ಕಾರ್ಯಕರ್ತರಲ್ಲಿ ಮೋದಿ ಹೇಳಿದ್ದರು.ಮೂರು ಈಶಾನ್ಯ ರಾಜ್ಯಗಳಲ್ಲಿನ ವಿಜಯದ ನಂತರ, ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು 2026 ರಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಕೇರಳದಲ್ಲಿ ಪಕ್ಷವು ಸಮ್ಮಿಶ್ರ ಸರ್ಕಾರವನ್ನು ರಚಿಸಲಿದೆ ಎಂದು ಹೇಳಿದರು.

ಈ ಬಾರಿ ಪಕ್ಷವು ಕ್ರಿಶ್ಚಿಯನ್ ಸಮುದಾಯದ ಬೆಂಬಲವನ್ನು ಪಡೆಯಲಿದೆ ಎಂದು ಹೇಳಿದ್ದಾರೆ. ಈಶಾನ್ಯದಲ್ಲಿ ಕ್ರೈಸ್ತರ ಬೆಂಬಲ ಬಿಜೆಪಿಗೆ ಸಿಕ್ಕಿತ್ತು. ಕೇರಳದ ಎರಡು ಪ್ರಬಲ ಪಕ್ಷಗಳತ್ತ ಗಮನಸೆಳೆದ ಅವರು, ರಾಜ್ಯದಲ್ಲಿ ಎಡ ಮತ್ತು ಕಾಂಗ್ರೆಸ್ ಕಡು ಪ್ರತಿಸ್ಪರ್ಧಿಗಳಾಗಿದ್ದರೆ, ಅವರು ತ್ರಿಪುರಾ ಚುನಾವಣೆಯಲ್ಲಿ ಮಿತ್ರಪಕ್ಷಗಳಾಗಿ ಸ್ಪರ್ಧಿಸಿದ್ದಾರೆ.

ಬಿಜೆಪಿ “ಧನ್ಯವಾದ ಮೋದಿ” ಕಾರ್ಯಕ್ರಮವನ್ನು ಯೋಜಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.ರಾಜ್ಯದ ವಿವಿಧ ಕೇಂದ್ರ ಯೋಜನೆಗಳ ಫಲಾನುಭವಿಗಳು ಮೋದಿಗೆ ಧನ್ಯವಾದ ಹೇಳುವ ವಿಡಿಯೊ ಇದಾಗಿದೆ. ಈಗಾಗಲೇ ಸುಮಾರು 12,000 ಜನರು ಮಲಯಾಳಂನಲ್ಲಿ “ಥ್ಯಾಂಕ್ಯೂ ಮೋದಿ” ವಿಡಿಯೊಗಳನ್ನು ಕಳುಹಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ