Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂಗ್ರೆಸ್‌ನ ರಾಮ ವಿರೋಧಿ ಮುಖ ದೇಶದ ಮುಂದಿದೆ: ರಾಮಮಂದಿರ ಆಹ್ವಾನ ನಿರಾಕರಿಸಿದ್ದಕ್ಕೆ ಬಿಜೆಪಿ ವಾಗ್ದಾಳಿ

ರಾಮಮಂದಿರದ ‘ಪ್ರಾಣ ಪ್ರತಿಷ್ಠಾ’ ಸಮಾರಂಭವನ್ನು ಬಹಿಷ್ಕರಿಸುವ ನಿರ್ಧಾರಕ್ಕಾಗಿ ಭಾರತದ ಜನರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಹಿಷ್ಕರಿಸಲಿದ್ದಾರೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. “ಅವರ (ಕಾಂಗ್ರೆಸ್) ನಿಲುವಿನಲ್ಲಿ ಹೊಸದೇನೂ ಇಲ್ಲ, ಅವರು ಯಾವಾಗಲೂ ಶ್ರೀರಾಮನನ್ನು ವಿರೋಧಿಸುತ್ತಾರೆ ಮತ್ತು ಸನಾತನ (ಧರ್ಮ) ವನ್ನು ದೂಷಿಸಲು ಪ್ರಯತ್ನಿಸಿದರು ಎಂದಿದ್ದಾರೆ.

‘ಕಾಂಗ್ರೆಸ್‌ನ ರಾಮ ವಿರೋಧಿ ಮುಖ ದೇಶದ ಮುಂದಿದೆ: ರಾಮಮಂದಿರ ಆಹ್ವಾನ ನಿರಾಕರಿಸಿದ್ದಕ್ಕೆ ಬಿಜೆಪಿ ವಾಗ್ದಾಳಿ
ಅನುರಾಗ್ ಠಾಕೂರ್ -ಸ್ಮೃತಿ ಇರಾನಿ
Follow us
ರಶ್ಮಿ ಕಲ್ಲಕಟ್ಟ
|

Updated on: Jan 10, 2024 | 8:04 PM

ದೆಹಲಿ ಜನವರಿ 10: ಅಯೋಧ್ಯೆಯಲ್ಲಿ (Ayodhya) ರಾಮ ಮಂದಿರದ (Ram mandir) ಉದ್ಘಾಟನೆ ಸಮಾರಂಭರಕ್ಕೆ ಹಾಜರಾಗುವುದಿಲ್ಲ ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಮತ್ತು ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ. ಆಮಂತ್ರಣ ನಿರಾಕರಿಸಿದ್ದಕ್ಕೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ,ಕಾಂಗ್ರೆಸ್ ನ ಭಗವಾನ್ ರಾಮನ ವಿರೋಧಿ ಮುಖ ಕಾಣುತ್ತಿದೆ ಎಂದು ಹೇಳಿದ್ದೆ. ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆ ಸಮಾರಂಭದ ಆಹ್ವಾನವನ್ನು ಖರ್ಗೆ, ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಇಂದು “ಗೌರವಯುತವಾಗಿ” ತಿರಸ್ಕರಿಸಿದ್ದು, ಇದು ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರ್ಯಕ್ರಮ ಎಂದು ಬಣ್ಣಿಸಿದ್ದಾರೆ.

ಕಾಂಗ್ರೆಸ್ ನಿರ್ಧಾರಕ್ಕೆ ಬಿಜೆಪಿ ವಾಗ್ದಾಳಿ

ಕಾಂಗ್ರೆಸ್ ಪಕ್ಷದ ನಾಯಕತ್ವದಲ್ಲಿ ವಿರೋಧ ಪಕ್ಷವಾದ ಇಂಡಿಯಾ ನಾಯಕರು ಯಾವಾಗಲೂ ಸನಾತನ (ಧರ್ಮ)ವನ್ನು ವಿರೋಧಿಸುತ್ತಿದ್ದಾರೆ. ಅವರ ಆಹ್ವಾನವನ್ನು ನಿರಾಕರಿಸುವುದು ಸನಾತನದ ಮೇಲಿನ ದ್ವೇಷಕ್ಕೆ ಅನುಗುಣವಾಗಿದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. “ಕಾಂಗ್ರೆಸ್ ಪಕ್ಷವು ಈ ಹಿಂದೆ ಭಗವಾನ್ ರಾಮನ ಅಸ್ತಿತ್ವವನ್ನು ನಿರಾಕರಿಸುವ ದಾಖಲೆಗಳನ್ನು ನ್ಯಾಯಾಲಯದಲ್ಲಿ ಸಲ್ಲಿಸಿತ್ತು. ಈಗ ಅವರು ಪ್ರಾಣ ಪ್ರತಿಷ್ಠಾ ಆಹ್ವಾನವನ್ನು ನಿರಾಕರಿಸಿದ್ದಾರೆ” ಎಂದು ಬಿಜೆಪಿ ನಾಯಕಿ ಹೇಳಿದ್ದಾರೆ.

ರಾಮಮಂದಿರದ ‘ಪ್ರಾಣ ಪ್ರತಿಷ್ಠಾ’ ಸಮಾರಂಭವನ್ನು ಬಹಿಷ್ಕರಿಸುವ ನಿರ್ಧಾರಕ್ಕಾಗಿ ಭಾರತದ ಜನರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಹಿಷ್ಕರಿಸಲಿದ್ದಾರೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. “ಅವರ (ಕಾಂಗ್ರೆಸ್) ನಿಲುವಿನಲ್ಲಿ ಹೊಸದೇನೂ ಇಲ್ಲ, ಅವರು ಯಾವಾಗಲೂ ಶ್ರೀರಾಮನನ್ನು ವಿರೋಧಿಸುತ್ತಾರೆ ಮತ್ತು ಸನಾತನ (ಧರ್ಮ) ವನ್ನು ದೂಷಿಸಲು ಪ್ರಯತ್ನಿಸಿದರು. ಅವರು ಹಲವಾರು ಸಂದರ್ಭಗಳಲ್ಲಿ ಭಗವಾನ್ ರಾಮನ ಅಸ್ತಿತ್ವವನ್ನು ನಿರಾಕರಿಸಿದ್ದಾರೆ ಎಂದು ಠಾಕೂರ್ ಹೇಳಿದ್ದಾರೆ.

ಬಿಜೆಪಿ ವಕ್ತಾರ ನಳಿನ್ ಕೊಹ್ಲಿ ಅವರು ಬೃಹತ್ ಧಾರ್ಮಿಕ ಕಾರ್ಯಕ್ರಮದ ಆಹ್ವಾನವನ್ನು ತಿರಸ್ಕರಿಸಿದ್ದಕ್ಕಾಗಿ ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದು, ವಿರೋಧ ಪಕ್ಷದ ನಡೆ ಆಶ್ಚರ್ಯಪಡಬೇಕಾಗಿಲ್ಲ ಎಂದು ಹೇಳಿದರು. ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣಕ್ಕಾಗಿ ಕಳೆದ ಕೆಲವು ದಶಕಗಳಿಂದ ಪಕ್ಷ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಹೇಳಿದರು. “ಇದು ಆಶ್ಚರ್ಯಪಡಬೇಕಾಗಿಲ್ಲ. ಕಳೆದ ಕೆಲವು ದಶಕಗಳಲ್ಲಿ ಕಾಂಗ್ರೆಸ್ ಪಕ್ಷವು ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣವಾಗಬೇಕೆಂದು ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ. ವಾಸ್ತವವಾಗಿ, ಕಾಂಗ್ರೆಸ್-ಯುಪಿಎ ಸರ್ಕಾರವು ರಾಮನ ಅಸ್ತಿತ್ವವನ್ನು ನಿರಾಕರಿಸಲು ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿತು. ಅವರು ಎಂದಿಗೂ ಆರಂಭಿಕ ವಿಚಾರಣೆಯನ್ನು ಬಯಸಲಿಲ್ಲ ಎಂದಿದ್ದಾರೆ.

ಬಿಜೆಪಿ ಸಂಸದ ಮನೋಜ್ ತಿವಾರಿ ಕೂಡ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಮನ ಅಸ್ತಿತ್ವವನ್ನು ನಿರಾಕರಿಸಿದ ಮತ್ತು ಅಯೋಧ್ಯೆಯ ಮಂದಿರ ನಿರ್ಮಾಣ ವಿಳಂಬಗೊಳಿಸಲು ತಮ್ಮ ಅತ್ಯುತ್ತಮ ಪ್ರಯತ್ನ ಮಾಡಿದವರನ್ನು ಸಹ ರಾಮಮಂದಿರ ಪ್ರಾಣ ಪ್ರತಿಷ್ಠಾಕ್ಕೆ ಆಹ್ವಾನಿಸಲಾಗುತ್ತಿದೆ. ಇದು ನನ್ನ ಪಾಲಿಗೆ ‘ತ್ರೇತಾ ಯುಗ’ದ ಮರಳುವಿಕೆ ಎಂದಿದ್ದಾರೆ.

ಇದನ್ನೂ ಓದಿ: ರಾಮಮಂದಿರ ಕಾರ್ಯಕ್ರಮಕ್ಕೆ ಹೋಗದಿರಲು ಸೋನಿಯಾ, ಖರ್ಗೆ, ಅಧೀರ್ ರಂಜನ್ ನಿರ್ಧಾರ

ರಾಮಮಂದಿರದ ಆಹ್ವಾನವನ್ನು ಸೋನಿಯಾ ಗಾಂಧಿ, ಖರ್ಗೆ ನಿರಾಕರಿಸಿದ್ದು ಏಕೆ?

ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವ ಆಹ್ವಾನವನ್ನು ಕಾಂಗ್ರೆಸ್ ನಾಯಕರು ತಿರಸ್ಕರಿಸಿದ್ದು, ಮುಂಬರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಮತ್ತು ಆರೆಸ್ಸೆಸ್ ನಿರ್ಮಾಣ ಹಂತದಲ್ಲಿರುವ ದೇವಾಲಯವನ್ನು ಉದ್ಘಾಟಿಸುತ್ತಿವೆ ಎಂದು ಹೇಳಿದ್ದಾರೆ. ಧರ್ಮವು “ವೈಯಕ್ತಿಕ ವಿಷಯ”. ಆದರೆ ಬಿಜೆಪಿ ಮತ್ತು ಆರೆಸ್ಸೆಸ್ ಅಯೋಧ್ಯೆಯಲ್ಲಿ ದೇವಾಲಯದ ಸಮಾರಂಭವನ್ನು “ರಾಜಕೀಯ ಯೋಜನೆ”ಯನ್ನಾಗಿ ಮಾಡಿದೆ.

ನಮ್ಮ ದೇಶದಲ್ಲಿ ಲಕ್ಷಾಂತರ ಜನರು ರಾಮನನ್ನು ಪೂಜಿಸುತ್ತಾರೆ. ಧರ್ಮವು ವೈಯಕ್ತಿಕ ವಿಷಯವಾಗಿದೆ. ಆದರೆ ಆರೆಸ್ಸೆಸ್/ಬಿಜೆಪಿ ಬಹಳ ಹಿಂದಿನಿಂದಲೂ ಅಯೋಧ್ಯೆಯಲ್ಲಿ ಮಂದಿರದ ರಾಜಕೀಯ ಯೋಜನೆಯನ್ನು ಮಾಡಿದೆ. ಚುನಾವಣಾ ಲಾಭಕ್ಕಾಗಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರು ಕೆಲಸ ಪೂರ್ಣಗೊಂಡಿರದ ದೇವಸ್ಥಾನದ ಉದ್ಘಾಟನೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಹೇಳಿಕೆಯಲ್ಲಿ ತಿಳಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ