ಬಿಜೆಪಿ ಸದಸ್ಯತಾ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಸದಸ್ಯತ್ವ ಅಭಿಯಾನವನ್ನು ಇಂದಿನಿಂದ ಪ್ರಾರಂಭಿಸಿದೆ. ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸದಸ್ಯರನ್ನಾಗಿ ಸೇರಿಸಿಕೊಳ್ಳುವ ಮೂಲಕ ಈ ಅಭಿಯಾನಕ್ಕೆ ಚಾಲನೆ ನೀಡಿದರು. ಇದರ ಬೆನ್ನಲ್ಲೇ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ಸಹಿ ಹಾಕಿದ್ದಾರೆ.

ಬಿಜೆಪಿ ಸದಸ್ಯತಾ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
ಬಿಜೆಪಿ ಸದಸ್ಯತಾ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
Follow us
|

Updated on: Sep 02, 2024 | 10:13 PM

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿಯ ರಾಷ್ಟ್ರೀಯ ಸದಸ್ಯತ್ವ ಅಭಿಯಾನ- ‘ಸಂಘಟನ ಪರ್ವ, ಸದಾಸ್ಯತ ಅಭಿಯಾನ 2024’ಕ್ಕೆ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಆರೋಗ್ಯ ಸಚಿವರು ಮತ್ತು ಪಕ್ಷದ ಹಾಲಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವಾರು ನಾಯಕರು ಉಪಸ್ಥಿತರಿದ್ದರು.

ಬಿಜೆಪಿಯ ಸದಸ್ಯತ್ವ ಅಭಿಯಾನದ ವಿಶಿಷ್ಟ ಸ್ವರೂಪವನ್ನು ಒತ್ತಿ ಹೇಳಿದ ಅಮಿತ್ ಶಾ, ಇಂತಹ ಅಭಿಯಾನವನ್ನು ಪ್ರಜಾಸತ್ತಾತ್ಮಕವಾಗಿ ನಡೆಸುತ್ತಿರುವ ದೇಶದ ಏಕೈಕ ರಾಜಕೀಯ ಪಕ್ಷವಾಗಿದೆ. ಪಕ್ಷವು 10 ಕೋಟಿ ಸದಸ್ಯರ ಗುರಿಯನ್ನು ತಲುಪುವ ಗುರಿಯನ್ನು ಹೊಂದಿದೆ ಎಂದು ಹೇಳಿದ್ದಾರೆ. ಈ ಸಂಘಟನೆಯನ್ನು ಸರ್ಕಾರಕ್ಕೆ ಸಂಪರ್ಕಿಸುವಲ್ಲಿ ಕಾರ್ಯಕರ್ತರು ನಿರ್ಣಾಯಕ ಪಾತ್ರ ವಹಿಸುತ್ತಾರೆ ಎಂದಿದ್ದಾರೆ.

ಇದನ್ನೂ ಓದಿ: Vande Bharat: 3 ಹೊಸ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ

ಈ ವೇಳೆ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಿದ್ದಾರೆ. “ಇಂದು ಮತ್ತೊಂದು ಸುತ್ತಿನ ‘ಸದಸ್ಯತಾ ಅಭಿಯಾನ’ ಆರಂಭವಾಗುತ್ತಿದೆ. ಭಾರತೀಯ ಜನಸಂಘದಿಂದ ಇಲ್ಲಿಯವರೆಗೆ ನಾವು ದೇಶದಲ್ಲಿ ಹೊಸ ರಾಜಕೀಯ ಸಂಸ್ಕೃತಿಯಾಗಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಿದ್ದೇವೆ. ಜನರು ಅಧಿಕಾರವನ್ನು ನೀಡುವ ಸಂಘಟನೆ ಅಥವಾ ರಾಜಕೀಯ ಪಕ್ಷ, ಘಟಕ, ಸಂಘಟನೆ, ಪಕ್ಷ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಅನುಸರಿಸದಿದ್ದರೆ, ಆಂತರಿಕ ಪ್ರಜಾಪ್ರಭುತ್ವವು ಅದರಲ್ಲಿ ನೆಲೆಸದಿದ್ದರೆ, ಇಂದು ಹಲವಾರು ರಾಜಕೀಯ ಪಕ್ಷಗಳು ಎದುರಿಸುತ್ತಿರುವ ಪರಿಸ್ಥಿತಿ ಉದ್ಭವಿಸುತ್ತದೆ ಎಂದು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?