AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಪೋಸ್ಟ್ ತಡೆಹಿಡಿದ ಫೇಸ್‌ಬುಕ್: ಇದು ಭಾರತದ ಪ್ರಜಾಪ್ರಭುತ್ವದ ಮೇಲಿನ ಹಸ್ತಕ್ಷೇಪ, ತಜಿಂದರ್ ಬಗ್ಗಾ ಆಕ್ರೋಶ

ದೇಶದಲ್ಲಿ ನೀಟ್(NEET) ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಕೇಂದ್ರ ಸರ್ಕಾರ ತಂದಿರುವ ಕಠಿಣ ಕಾನೂನು ಮತ್ತು ಕೈಗೊಂಡಿರುವ ಕ್ರಮಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ್ದ ಸಾಮಾಜಿಕ ಮಾಧ್ಯಮ ಪೋಸ್ಟ್ ಅನ್ನು ಭಾರತದಲ್ಲಿ ವೀಕ್ಷಿಸದಂತೆ ಫೇಸ್‌ಬುಕ್ ತಡೆಹಿಡಿದಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ. ಈ ಕುರಿತು ಬಿಜೆಪಿ ನಾಯಕ ತಜಿಂದರ್ ಪಾಲ್ ಸಿಂಗ್ ಬಗ್ಗಾ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಫೇಸ್‌ಬುಕ್ ಸಂಸ್ಥೆಯು ಭಾರತದ ಡಿಜಿಟಲ್ ಸಾರ್ವಭೌಮತ್ವ ಮತ್ತು ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ನಿಯಮಬಾಹಿರವಾಗಿ ಹಸ್ತಕ್ಷೇಪ ಮಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಪ್ರಧಾನಿ ಮೋದಿ ಪೋಸ್ಟ್ ತಡೆಹಿಡಿದ ಫೇಸ್‌ಬುಕ್: ಇದು ಭಾರತದ ಪ್ರಜಾಪ್ರಭುತ್ವದ ಮೇಲಿನ ಹಸ್ತಕ್ಷೇಪ, ತಜಿಂದರ್ ಬಗ್ಗಾ ಆಕ್ರೋಶ
ನರೇಂದ್ರ ಮೋದಿ
ನಯನಾ ರಾಜೀವ್
|

Updated on:Jul 28, 2026 | 9:56 AM

Share

ನವದೆಹಲಿ,ಜುಲೈ 28: ದೇಶದಲ್ಲಿ ನೀಟ್(NEET) ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಕೇಂದ್ರ ಸರ್ಕಾರ ತಂದಿರುವ ಕಠಿಣ ಕಾನೂನು ಮತ್ತು ಕೈಗೊಂಡಿರುವ ಕ್ರಮಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ್ದ ಸಾಮಾಜಿಕ ಮಾಧ್ಯಮ ಪೋಸ್ಟ್ ಅನ್ನು ಭಾರತದಲ್ಲಿ ವೀಕ್ಷಿಸದಂತೆ ಫೇಸ್‌ಬುಕ್ ತಡೆಹಿಡಿದಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ. ಈ ಕುರಿತು ಬಿಜೆಪಿ ನಾಯಕ ತಜಿಂದರ್ ಪಾಲ್ ಸಿಂಗ್ ಬಗ್ಗಾ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಫೇಸ್‌ಬುಕ್ ಸಂಸ್ಥೆಯು ಭಾರತದ ಡಿಜಿಟಲ್ ಸಾರ್ವಭೌಮತ್ವ ಮತ್ತು ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ನಿಯಮಬಾಹಿರವಾಗಿ ಹಸ್ತಕ್ಷೇಪ ಮಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ತಜಿಂದರ್ ಬಗ್ಗಾ ಅವರ ಪ್ರಮುಖ ಆರೋಪಗಳು ಫೇಸ್‌ಬುಕ್ ತನ್ನ ಎಲ್ಲಾ ಮಿತಿಗಳನ್ನು ಮೀರಿದೆ. ಭಾರತದ ಪ್ರಧಾನಮಂತ್ರಿಯವರ ಪೋಸ್ಟ್ ಅನ್ನು ಭಾರತೀಯರೇ ನೋಡದಂತೆ ತಡೆಯಲು ಈ ವಿದೇಶಿ ವೇದಿಕೆಗೆ ಅಧಿಕಾರ ಕೊಟ್ಟವರು ಯಾರು?” ಎಂದು ಬಗ್ಗಾ ಪ್ರಶ್ನಿಸಿದ್ದಾರೆ. ಇದು ಕೇವಲ ಕಂಟೆಂಟ್ ನಿಯಂತ್ರಣ ಅಲ್ಲ, ಬದಲಿಗೆ ಭಾರತದ ಪ್ರಜಾಪ್ರಭುತ್ವದ ಮೇಲಿನ ಶೋಚನೀಯ ಹಸ್ತಕ್ಷೇಪ. ಫೇಸ್‌ಬುಕ್ ಯಾರ ‘ಕಾನೂನುಬದ್ಧ ವಿನಂತಿ’ಯನ್ನು ಆಧರಿಸಿ ಈ ಪೋಸ್ಟ್ ತೆಗೆದುಹಾಕಿದೆ ಎಂಬುದನ್ನು ದೇಶದ ಜನರಿಗೆ ಬಹಿರಂಗಪಡಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಮತ್ತಷ್ಟು ಓದಿ: ನಾನು ಬೀದಿ ಹೋರಾಟಗಾರ: ಜೈರಾಮ್ ರಮೇಶ್ ಹೇಳಿಕೆಗೆ ಧರ್ಮೇಂದ್ರ ಪ್ರಧಾನ್ ತಿರುಗೇಟು

ದೇಶಾದ್ಯಂತ ಸದ್ದು ಮಾಡುತ್ತಿರುವ ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಮಾಫಿಯಾ ವಿರುದ್ಧ ಕೇಂದ್ರ ಸರ್ಕಾರ ತಂದಿರುವ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ-2026’ ಹಾಗೂ ನಂದನ್ ನಿಲೇಕಣಿ ನೇತೃತ್ವದ ಉನ್ನತಾಧಿಕಾರದ ಕಾರ್ಯಪಡೆ ರಚನೆಯ ಕುರಿತು ಪ್ರಧಾನಿ ಮೋದಿ ಪೋಸ್ಟ್ ಹಂಚಿಕೊಂಡಿದ್ದರು.

ಪೋಸ್ಟ್​

ಭಾರತದಲ್ಲಿ ಐಟಿ ಕಾಯ್ದೆಯಡಿ ಸರ್ಕಾರ ಅಥವಾ ನಿಯಂತ್ರಕ ಮಂಡಳಿಗಳ ವಿನಂತಿಯ ಮೇರೆಗೆ ನಿರ್ದಿಷ್ಟ ಪೋಸ್ಟ್‌ಗಳನ್ನು ತಡೆಯಲು ಅವಕಾಶವಿದೆಯಾದರೂ, ಸ್ವತಃ ದೇಶದ ಪ್ರಧಾನಿಯವರ ಅಧಿಕೃತ ಹೇಳಿಕೆಯ ಪೋಸ್ಟ್ ತಡೆಯಲ್ಪಟ್ಟಿರುವುದು ದೊಡ್ಡ ಮಟ್ಟದ ರಾಜಕೀಯ ಮತ್ತು ಕಾನೂನು ಚರ್ಚೆಗೆ ಕಾರಣವಾಗಿದೆ.

ಇತ್ತೀಚೆಗೆ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಚರ್ಚೆಗಳ ನಡುವೆ, ಸಾಮಾಜಿಕ ಜಾಲತಾಣ ಸಂಸ್ಥೆಗಳು ಹಾಗೂ ಕೇಂದ್ರ ಸರ್ಕಾರದ ನಡುವಿನ ಡಿಜಿಟಲ್ ನೀತಿ ನಿಯಮಗಳ ಸಂಘರ್ಷ ಮತ್ತೆ ಮುನ್ನೆಲೆಗೆ ಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:54 am, Tue, 28 July 26

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!